Rabi crop insurance credited ಹಿಂಗಾರು ಬೆಳೆಗಳ ವಿಮೆ ಪ್ರಕ್ರಿಯೆ ಆರಂಭವಾಗಿದೆ. ಯಾವ ಬೆಳೆಗೆ ವಿಮೆ ಮಾಡಿಸಿದರೆ ಎಷ್ಟು ವಿಮೆ ಹಣ ಜಮೆಯಾಗುತ್ತದೆ ಎಂಬುದನ್ನು ರೈತರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಹೌದು, ಮುಂಗಾರು ಹಂಗಾಮಿನ ಬೆಳೆಗಳಿಗೆ ವಿಮೆ ಮಾಡಿಸಿದಂತೆ ರೈತರು ಹಿಂಗಾರು ಬೆಳೆಗಳಿಗೂ ವಿಮೆ ಮಾಡಿಸಬಹುದು. ಆದರೆ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು? ಯಾವ ಬೆಳೆಗೆ ವಿಮೆ ಮಾಡಿಸಿದರೆ ಬೆಳೆ ಹಾನಿಯಾಗುವಾಗ ಎಷ್ಟು ವಿಮೆ ಹಣ ಜಮೆಯಾಗುವುದು ಎಂಬುದನ್ನು ತಿಳಿಯಲು ರೈತರು ಎಲ್ಲಿಯೂ ಹೋಗಬೇಕಿಲ್ಲ. ಮನೆಯಲ್ಲಿಯೇ ಕುಳಿತು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.
ನಿಮ್ಮ ಊರಿನ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು? ಮೊಬೈಲ್ ನಲ್ಲೇ ಚೆಕ್ ಮಾಡಿ
ರೈತರು ತಮ್ಮೂರಿನ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದೆಂಬುದನ್ನು ಚೆಕ್ ಮಾಡಲು ಈ
https://samrakshane.karnataka.gov.in/Premium/Crops_You_Can_Insure.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಬೆಳೆ ವಿಮೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮಗೆ Season ಎದುರುಗಡೆ Rabi ಕಾಣಿಸುತ್ತದೆ. ನಂತರ ನೀವು ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ Display ಮೇಲೆ ಕ್ಲಿಕ್ ಮಾಡಬೇಕು. ಆಗ list of Crops You can Insure ಎಂಬ ಪಟ್ಟಿ ಕಾಣಿಸುತ್ತದೆ. ಅಲ್ಲಿ ನಿಮ್ಮ ಜಿಲ್ಲೆ, ತಾಲೂಕು, ನಿಮ್ಮ ಗ್ರಾಮ ಕಾಣಿಸುತ್ತದೆ. ಅದರ ಎದುರುಗಡೆ ನೀವು ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು ಎಂಬ ಪಟ್ಟಿ ಕಾಣಿಸುತ್ತದೆ.
ಉದಾಹರಣೆಗೆ ನೀವು ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಇಟಕಾಲ ಗ್ರಾಮದವರಾಗಿದ್ದರೆ Bengal Gram (ಕಡಲೆ), Sorghum (ಜೋಳ) Safflower (ಕುಸುಮ) Paddy (ಭತ್ತ) ಬೆಳೆಗಳಿಗೆ ವಿಮೆ ಮಾಡಿಸಬಹುದು.
ಇದನ್ನೂ ಓದಿ : ಗೃಹಲಕ್ಷ್ಮೀ ಯೋಜನೆಯ ಅರ್ಹ ಮತ್ತು ಅನರ್ಹರ ಪಟ್ಟಿ ಬಿಡುಗಡೆ- ಲಿಸ್ಟ್ ನಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ನೀವು ಬೆಳೆ ವಿಮೆ ಮಾಡಿಸಿದರೆ ಪ್ರತಿ ಹೆಕ್ಟೇರಿಗೆ ಎಷ್ಟು ವಿಮೆ ಹಣ ಜಮೆಯಾಗುಪತ್ತದೆ. ರೈತರ ವಂತಿಗೆ ಎಷ್ಟು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಂತಿಗೆ ಎಷ್ಟು ಹಣ ಪಾವತಿಸಬೇಕೆಂಬುದರ ಮಾಹಿತಿ ಇರುತ್ತದೆ.
Rabi crop insurance credited ಸ್ಟೇಟಸ್ ಚೆಕ್ ಮಾಡುವುದು ಹೇಗೆ?
ಬೆಳೆ ವಿಮೆ ಪರಿಹಾರ ಸ್ಟೇಟಸ್ ಚೆಕ್ ಮಾಡಲು ಈ
https://samrakshane.karnataka.gov.in/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ Check status ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ಮೊಬೈಲ್ ನಂಬರ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ನಂತರ ಸರ್ಚ್ ಮೇಲೆ ಕ್ಲಿಕ್ಮಾಡಬೇಕು.ಆಗ ನಿಮಗೆ ಬೆಳೆ ವಿಮೆ ಜಮೆಯ ಪೇಜ್ ಕಾಣಿಸುತ್ತದೆ. ಅಲ್ಲಿ ಯಾವ ಬೆಳೆಗೆ ಯಾವ ವರ್ಷ, ಎಷ್ಟು ಹಣ ಜಮೆಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ.
ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ವಿಮೆ ಪರಿಹಾರ ಜಮೆಯಾಗಿರುವುದನ್ನು ಚೆಕ್ ಮಾಡಬಹುದು. ಹೌದು, ಅಲ್ಲಿ ಸೆಲೆಕ್ಟ್ ಮೇಲೆ ಕ್ಲಿಕ್ ಮಾಡಿದರೆ ಸಾಕು, ನೀವು ಪಾವತಿಸಿದ ಬೆಳೆ ವಿಮೆ ಹಾಗೂ ನಿಮಗೆ ಜಮೆಯಾಗುವ ವಿಮೆ ಹಣದ ಮಾಹಿತಿ ಸಹ ಕಾಣಿಸುತ್ತದೆ.