ರೈತರು  ತಮ್ಮ ಹೆಸರಿಗಿರುವ ಪಹಣಿ ಎಷ್ಟು ವರ್ಷ ಹಳೆಯದ್ದಾಗಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ರೈತರು ಯಾರ ಸಹಾಯವೂ ಇಲ್ಲದೆ, ತಮ್ಮ ಬಳಿಯಿರುವ ಸ್ಮಾರ್ಟ್ ಫೋನ್ ನಲ್ಲಿ 20 ವರ್ಷಕ್ಕಿಂತ ಹಳೆಯ ಪಹಣಿಯನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಮೊಬೈಲ್ ನಲ್ಲೇ ಹಳೆಯ ಪಹಣಿ ನೋಡುವುದು ಹೇಗೆ?

ರೈತರು ಹಳೆಯ ಪಹಣಿಗಳನ್ನು ಅಂದರೆ 20 ವರ್ಷಗಳ ಹಿಂದೆ ಪಹಣಿ ನಿಮ್ಮ ಹೆಸರಿಗಾದರೆ ಅದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಚೆಕ್ ಮಾಡಲು

https://landrecords.karnataka.gov.in/Service2/

ಈ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಭೂಮಿ ಆನ್ಲೈನ್ ಲ್ಯಾಂಡ್ ರಿಕಾರ್ಡ್ ವೀವ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ Old Year  ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು.  ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು. ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ಸರ್ವೆ ನಂಬರ್ ಆಯ್ಕೆ ಮಾಡಿಕೊಂಡ ನಂತರ ಗೋ ಮೇಲೆ ಕ್ಲಿಕ್ ಮಾಡಬೇಕು. ನಂತರ ಸರ್ನೋಕ್ ನಲ್ಲಿ ಸ್ಟಾರ್ ಆಯ್ಕೆ ಮಾಡಿಕೊಳ್ಳಬೇಕು.

ಇದಾದಮೇಲೆ  ಹಿಸ್ಸಾನಂಬರ್ ಆಯ್ಕೆ ಮಾಡಿಕೊಳ್ಳಬೇಕು. ಸೆಲೆಕ್ಟ್ ಪಿರಿಯಡ್ ನಲ್ಲಿ ನೀವು ನಮೂದಿಸಿ ಹಿಸ್ಸಾ ನಂಬರ್ ಎಷ್ಟು ವರ್ಷ ಹಳೆಯದಾಗಿದೆ ಎಂಬುದು ಕಾಣುತ್ತದೆ. ಅಲ್ಲಿ ನೀವು ವರ್ಷ ಆಯ್ಕೆ ಮಾಡಿಕೊಳ್ಳಬೇಕು.  ಇಯರ್ ನಲ್ಲಿ ಅಲ್ಲಿ ಕಾಣುವ ವರ್ಷದಲ್ಲಿ ಯಾವ ವರ್ಷದ ಹಳೆಯ ಪಹಣಿ ನೋಡಬೇಕೆಂದುಕೊಂಡಿದ್ದೀರೋ ಅ ವರ್ಷ ಆಯ್ಕೆ ಮಾಡಿಕೊಳ್ಳಬೇಕು. ನಂತರ  ನಂತರ Fetch details ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಹೆಸರಿನ ಪಹಣಿ ಓಪನ್ ಆಗುತ್ತದೆ.  ಅಲ್ಲಿ ಸರ್ವೆ ನಂಬರ್  ಹಿಸ್ಸಾ ನಂಬರ್ ಕಾಣುತ್ತದೆ. ನಿಮ್ಮ ಹೆಸರಿಗೆ ಎಷ್ಟು ಎಕರೆ ಗುಂಟೆ ಜಮೀನಿದೆ ಎಂಬುದು ಕಾಣುತ್ತದೆ. ಜಮೀನು ಮಾಲಿಕರ ಹೆಸರು ತಂದೆಯ ಹೆಸರು ಕಾಣುತ್ತದೆ. ಜಮೀನು ಪಟ್ಟಾ ಆಗಿದೆಯೋ ಇಲ್ಲವೋ ಎಂಬುದು ಸಹ ಕಾಣುತ್ತದೆ.

ಪ್ರಸಕ್ತ ವರ್ಷದ ಪಹಣಿ ಓಪನ್ ಮಾಡುವುದು ಹೇಗೆ?

ನೀವು ಪ್ರಸಕ್ತ ವರ್ಷದ ಪಹಣಿ ಮೊಬೈಲ್ ನಲ್ಲೇ ಚೆಕ್ ಮಾಡಬೇಕಾದರೆ  ಅಲ್ಲಿ ಕಾಣುವ ಪೇಜ್ ನಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ ಸರ್ವೆ ನಂಬರ್ ಆಯ್ಕೆ ಮಾಡಿಕೊಂಡು ಗೋ ಮೇಲೆ ಕ್ಲಿಕ್ ಮಾಡಬೇಕು. ನಂತರ ಸರ್ನೋಕ್ ನಲ್ಲಿ ಸ್ಟಾರ್ ಆಯ್ಕೆ ಮಾಡಿಕೊಳ್ಳಬೇಕು.

ಇದನ್ನೂ ಓದಿ ಬೆಳೆ ವಿಮೆ ಜಮೆಯಾಗಿಲ್ಲವೇ? ಈ ರೈತರಿಗೆ ಮತ್ತೊಂದು ಅವಕಾಶ: ರೈತರೇನು ಮಾಡಬೇಕು? ಇಲ್ಲಿದೆ ಮಾಹಿತಿ

ಹಿಸ್ಸಾ ನಂಬರ್ ನಲ್ಲಿ ಸ್ಟಾರ್ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ನಂತರ ಪಿರಿಯಡ್ ನಲ್ಲಿ 2022-2023 ಆಯ್ಕೆ ಮಾಡಿಕೊಳ್ಳಬೇಕು. ಇಯರ್ ನಲ್ಲಿ 2022-2023 ಆಯ್ಕೆ ಮಾಡಿಕೊಳ್ಳಬೇಕು. Fetch details ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು ನಮೂದಿಸಿದ ಸರ್ವೆ ನಂಬರ್ ನಲ್ಲಿರುವ ಮಾಲಿಕರ ಹೆಸರು ಕಾಣುತ್ತದೆ. ಅಲ್ಲಿ ಕಾಣುವ View ಮೇಲೆ ಕ್ಲಿಕ್ ಮಾಡಬೇಕು.  ಆಗ ಪಹಣಿ ಓಪನ್ ಆಗುತ್ತದೆ.  ನೀವು ನಮೂದಿಸಿದ ಸರ್ವೆ ನಂಬರ್ ನಲ್ಲಿ ಯಾವ ಮಾಲಿಕರಿಗೆ ಎಷ್ಟು ಎಕರೆ ಜಮೀನಿದೆ?  ಜಮೀನು ಜಂಟಿಯಾಗಿದ್ದರೆ ಯಾರ ಯಾರ ಹೆಸರಿನಲ್ಲಿ ಜಂಟಿಯಾಗಿದೆ ಎಂಬುದು ಕಾಣುತ್ತದೆ. ಒಂದು ವೇಳೆ ಜಮೀನಿನ ಮಾಲಿಕರು ಬ್ಯಾಂಕಿನಿಂದ ಸಾಲ ಪಡೆದಿದ್ದರೆ ಯಾವ ಬ್ಯಾಂಕಿನಿಂದ ಎಷ್ಟು ಸಾಲ ಪಡೆಯಲಾಗಿದೆ ಎಂಬ ಮಾಹಿತಿ ಸಹ ಸಿಗುತ್ತದೆ.

Leave a Reply

Your email address will not be published. Required fields are marked *