check your Ration card ಎಪಿಎಲ್ or ಬಿಪಿಎಲ್. ಹೌದು, ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಯಾರ ಸಹಾಯವೂ ಇಲ್ಲದೇ ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು.
ನಮ್ಮ ಯೂಟೂಬ್ ಚಾನೆಲ್ ಸಬಸ್ಕ್ರೈಬ್ ಮಾಡಿ ಇಂತಹ ಮಾಹಿತಿ ಪಡೆಯಿರಿ
ಹೌದು, ರೇಶನ್ ಕಾರ್ಡ್ ಹೊಂದಿರುವ ಬುಹತೇಕರಿಗೆ ತಮ್ಮ ಕಾರ್ಡ್ ಬಿಪಿಎಲ್ ಇದೆಯೋ ಅಥವಾ ಎಪಿಎಲ್ ಇದೆಯೋ ಎಂಬುದು ಗೊತ್ತಿರುವುದಿಲ್ಲ. ಹಾಗೂ ತಮ್ಮ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥರೆಂದು ಯಾರ ಹೆಸರು ಸೇರಿಸಲಾಗಿದೆ ಎಂಬುದರ ಬಗ್ಗೆ ಗೊತ್ತಿರುವದಿಲ್ಲ. ಅಂಥವವರು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.
check your Ration card ಬಿಪಿಎಲ್ ಇದೆಯೋ ಎಪಿಎಲ್ ಇದೆಯೋ
ರೇಶನ್ ಕಾರ್ಡ್ ಹೊಂದಿರುವವರು ತಮ್ಮ ಕಾರ್ಡ್ ಯಾವ ಪ್ರಕಾರದ್ದಾಗಿದೆ ಎಂಬುದನ್ನು ಚೆಕ್ ಮಾಡಲು ಈ
https://mahitikanaja.karnataka.gov.in/FCS/MyAreaData?ServiceId=1043&Type=TABLE&DepartmentId=1010
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನನ್ನ ಪ್ರದೇಶವಾರು ಪಡಿತರ ಚೀಟಿ ಮಾಹಿತಿ ತೆರೆದುಕೊಳ್ಳುತ್ತದೆ. ಅಲ್ಲಿ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ಗ್ರಾಮ ಪಂಚಾಯತ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ಆಗ ಅಲ್ಲಿ ಕಾರ್ಡ್ ಪ್ರಕಾರ ಕಾಣಿಸುತ್ತದೆ. ಅಲ್ಲಿ ಅಂತ್ಯೋದಯ ಅನ್ನ ಯೋಜನೆ, ಆದ್ಯತೆಯ ಮನೆಯವರು (ಬಿಪಿಎಲ್) ಹಾಗೂ ಆದ್ಯತೆ ಇಲ್ಲದ ಮನೆಯವರು ಎಂಬ ಆಯ್ಕೆಗಳಿರುತ್ತವೆ. ಅದರಲ್ಲಿ ನೀವು ಆದ್ಯತೆಯ ಮನೆಯವರು (ಬಿಪಿಎಲ್) ಆಯ್ಕೆ ಮಾಡಿಕೊಳ್ಳಬೇಕು. ನಂತರ ಸಲ್ಲಿಸಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮೂರಿನಲ್ಲಿ ಯಾರು ಯಾರು ಬಿಪಿಎಲ್ ಕಾರ್ಡ್ ಹೊಂದಿದ್ದಾರೆ ಅವರ ಹೆಸರು ಕಾಣಿಸುತ್ತದೆ. ಅಂದರೆ ಕುಟುಂಬದ ಮುಖ್ಯಸ್ಥರ ಹೆಸರು ಕಾಣಿಸುತ್ತದೆ.
ಇದನ್ನೂ ಓದಿ : ನಿಮ್ಮ ಜಮೀನು ಯಾರ ಹೆಸರಿನೊಂದಿಗೆ ಎಷ್ಟು ಎಕರೆ ಜಂಟಿಯಾಗಿದೆ? ಇಲ್ಲೇ ಚೆಕ್ ಮಾಡಿ
ಅದೇ ರೀತಿ ಆದ್ಯತೆಯಿಲ್ಲದ ಮನೆಯವರು (ಎಪಿಎಲ್) ಆಯ್ಕೆ ಮಾಡಿಕೊಂಡರೆ ಸಾಕು, ನಿಮ್ಮ ಊರಿನಲ್ಲಿ ಯಾರು ಯಾರು ಎಪಿಎಲ್ ಕಾರ್ಡ್ ಹೊಂದಿರುವವರ ಪಟ್ಟಿ ಕಾಣಿಸುತ್ತದೆ. ಅದೇ ರೀತಿ ಅಂತ್ಯೋದಯ ಕಾರ್ಡ್ ಹೊಂದಿರುವವ ಪಟ್ಟಿಯೂ ಕಾಣಿಸುತ್ತದೆ.