Check Parihara payment report ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಯಾದ ರೈತರು ಬೆಳೆ ಹಾನಿ ಪರಿಹಾರ ಸ್ಟೇಟಸನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಹೌದು, ಕಳೆದ ನಾಲ್ಕು ತಿಂಗಳಲ್ಲಿ ಸುರಿದ ಮಳೆಯಿಂದಾಗಿ ರೈತರ ಅಪಾರ ಬೆಳೆ ಹಾನಿಯಾಗಿತ್ತು. ಬೆಳೆ ಹಾನಿಯಾದ ರೈತರಿಗೆ ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಪರಿಹಾರ ಹಣ ಸಹ ಬಿಡುಗಡೆ ಮಾಡಿದೆ. ರೈತರ ಖಾತೆಗೆ ಹಣ ಜಮೆಯಾಗಿದೆ. ಇನ್ನೂ ಕೆಲವು ಜಿಲ್ಲೆಯ ರೈತರಿಗೆ ಬೆಳೆ ಹಾನಿ ಪರಿಹಾರ ಜಮೆಯಾಗುತ್ತಿದೆ. ಆದರೆ ರೈತರು ತಮ್ಮ ಖಾತೆಗೆ ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿದೆಯೋ ಇಲ್ಲವೋ ಮತ್ತು ಯಾವ ಬ್ಯಾಂಕಿಗೆ ಜಮೆಯಾಗಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಬೆಳೆ ಹಾನಿ ಸ್ಟೇಟಸ್ ಚೆಕ್ ಮಾಡಿ
ರೈತರು ಬೆಳೆ ಹಾನಿ ಸ್ಟೇಟಸ್ ಚೆಕ್ ಮಾಡಲು ಈ
https://landrecords.karnataka.gov.in/PariharaPayment/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಬೆಳೆ ಹಾನಿ ಪರಿಹಾರ ಪೆಜ್ ತೆರೆದುಕೊಳ್ಳುತ್ತದೆ. ರೈತರು ಆಧಾರ್ ಸಂಖ್ಯೆ ಮೇಲೆ ಕ್ಲಿಕ್ ಮಾಡಬೇಕು. ನಂತರ select calamity Type ಕಾಲಂನಲ್ಲಿ Flood ಆಯ್ಕೆ ಮಾಡಿಕೊಳ್ಳಬೇಕು. Select Year Type ನಲ್ಲಿ 2022-23 ಆಯ್ಕೆ ಮಾಡಿಕೊಳ್ಲಬೇಕು. ನಂತರ ಆಧಾರ್ ಸಂಖ್ಯೆ ನಮೂದಿಸಿ ಕೆಳಗಡೆ ನಿಮ್ಮ ಆಧಾರ್ ಸಂಖ್ಯೆ ಹಾಕಬೇಕು. ಕ್ಯಾಪ್ಚ್ಯಾ ಕೋಡ್ ನಲ್ಲಿ ಅಲ್ಲಿ ಕಾಣುವ ಕೋಡ್ ಹಾಕಬೇಕು. ಇದಾದಮೇಲೆ ವಿವರಗಳನ್ನು ಪಡೆಯಲು ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಯಾವ ಬ್ಯಾಂಕಿಗೆ ಎಷ್ಟು ಹಣ ಜಮೆಯಾಗಿದೆ. ನಿಮ್ಮ ಹೆಸರು, ಬ್ಯಾಂಕಿನ ಕೊನೆಯ ನಾಲ್ಕುಅಂಕಿಗಳು, ಯಾವ ದಿನ ಜಮೆಯಾಗಿದೆ ಎಂಬ ಮಾಹಿತಿ ಇರುತ್ತದೆ.ಇದರ ಕೆಳಗಡೆ ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ, ಸರ್ವೆ ನಂಬರ್ ಎಷ್ಟು ಎಕರೆಗೆ ಜಮೆಯಾಗಿದೆ ಎಂಬ ಮಾಹಿತಿ ಇರುತ್ತದೆ.
Check Parihara payment report ಪ್ರತಿ ಹೆಕ್ಟೇರಿಗೆ ಎಷ್ಟು ಹಣ ಜಮೆಯಾಗಲಿದೆ?
ಎನ್.ಡಿ.ಆರ್.ಎಫ್ ನಿಯಮದ ಪ್ರಕಾರದ ಒಣಭೂಮಿಗೆ 6800 ರೂಪಾಯಿ ಹಾಗೂ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿದೆ 6800 ರೂಪಾಯಿ ಒಟ್ಟು ಬೆಳೆ ಹಾನಿಯಾದ ಪ್ರತಿ ಹೆಕ್ಟೇರಿಗೆ 13500 ರೂಪಾಯಿ ಜಮೆಯಾಗಲಿದೆ.
ಎನ್.ಡಿ.ಆರ್.ಎಫ್ ನಿಯಮದ ಪ್ರಕಾರ ನೀರಾವರಿ ಜಮೀನಿಗೆ 13500 ರೂಪಾಯಿ ಹಾಗೂ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ 11500ರೂಪಾಯಿ ಸೇರಿಸಿ ಒಟ್ಟು 25 ಸಾವಿರ ರೂಪಾಯಿ ಜಮೆಯಾಗಲಿದೆ.
ಇದನ್ನೂ ಓದಿ : ಪಿಎಂ ಕಿಸಾನ್ ಹಣ ನಿಮಗೆ ಬಂದಿಲ್ಲವೇ? ಏಕೆ ಬಂದಿಲ್ಲ? ಏನು ಮಾಡಬೇಕು? ಇಲ್ಲಿದೆ ಮಾಹಿತಿ
ಎನ್.ಡಿ.ಆರ್.ಎಫ್ ನಿಯಮದ ಪ್ರಕಾರ ಬಹುವಾರ್ಷಿಕ ಪ್ರತಿ ಹೆಕ್ಟೇರಿಗೆ 18 ಸಾವಿರ ರೂಪಾಯಿ ಜೊತೆಗೆ ರಾಜ್ಯ ಸರ್ಕಾರದಿಂದ 10 ಸಾವಿರ ರೂಪಾಯಿ ಸೇರಿಸಿ 28 ಸಾವಿರ ರೂಪಾಯಿ ಜಮೆಯಾಗಲಿದೆ.
ಅಕ್ಟೋಬರ್ 30 ರೊಳಗೆ ಅರ್ಜಿ ಸಲ್ಲಿಸಿ ಪರಿಹಾರ ಪಡೆಯಿರಿ
ಬೆಳೆ ಹಾನಿಯಾದ ರೈತರು ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನವಾಗಿದೆ. ಹಾನಿಗೊಳಗಾದ ರೈತರು ಇದರ ಸದುಪಯೋಗ ಪಡೆದುಕೊಂಡು ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆಗೆ ಅರ್ಜಿ ಸಲ್ಲಿಸಬಹುದು.
ಗ್ರಾಮ ಪಂಚಾಯತ್ ನಲ್ಲೂ ಅರ್ಜಿ ಸಲ್ಲಿಸಬಹುದು
ರೈತರು ಗ್ರಾಮ ಪಂಚಾಯತಿಯಲ್ಲಿ ಅರ್ಜಿ ಸಬೇಕು. ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಜಮೀನನ ಪಹಣಿಯೊಂದಿಗೆ ಅರ್ಜಿ ಸಲ್ಲಿಸಬೇಕು. ಆಗ ಗ್ರಾಮ ಪಂಚಾಯತ್ ವತಿಯಿಂದ ಅರ್ಜಿ ಸ್ವೀಕರಿಸಿ ಪರಿಹಾರ ತಂತ್ರಾಂಶದಲ್ಲಿ ರೈತರ ಮಾಹಿತಿಯನ್ನು ಅಪ್ಲೋಡ್ ಮಾಡಲಾಗುತ್ತದೆ. ನಂತರ ರೈತರ ಖಾತೆಗೆ ನೇರವಾಗಿ ಪರಿಹಾರ ಹಣ ಜಮೆಯಾಗುತ್ತದೆ. ಕೊನೆಯ ದಿನಾಂಕದವರಿೆಗೆ ಕಾಯದೆ ಅಕ್ಟೋಬರ್ 30 ರೊಳಗೆ ಅರ್ಜಿ ಸಲ್ಲಿಸಬಹುದು.