ಅನ್ನಭಾಗ್ಯ ಯೋಜನೆಯಡಿಯಲ್ಲಿ ನೋಂದಣಿ ಮಾಡಿಸಿಕೊಂಡ ಫಲಾನುಭವಿಗಳು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ Annabhagya scheme money ಎಷ್ಟು ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಬಹುದು.
ಹೌದು, ತಮಗೆಲ್ಲಾ ಗೊತ್ತಿದ್ದ ಹಾಗೆ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ಶಕ್ತಿ ಯೋಜನೆ, ಅನ್ನಭಾಗ್ಯ ಯೋಜನೆ, ಗೃಹಶಕ್ತಿ ಯೋಜನೆ, ಗೃಹಲಕ್ಷ್ಮೀ ಯೋಜನೆ ಹಾಗೂ ಯುವ ನಿಧಿ ಯೋಜನೆ ಜಾರಿಗೆ ತರಲಾಗುವುದು ಎಂದು ಹೇಳಿತ್ತು.ಈಗ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ನಂತರ ಒಂದೊಂದಾಗಿ ಯೋಜನೆಗಳನ್ನುಜಾರಿಗೆ ತರುತ್ತಿದೆ. ಶಕ್ತಿಯೋಜನೆಯು ರಾಜ್ಯದಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ಗೃಹಶಕ್ತಿಯೋಜನೆಯಡಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿದ್ದಾರೆ. ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ 2 ಸಾವಿರ ರೂಪಾಯಿ ಸಹ ಮೊದಲೆರಡು ಕಂತಿನ ಹಣ ಜಮೆ ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯಡಿಯಲ್ಲಿ 5 ಕೆಜಿ ಅಕ್ಕಿಯ ಬದಲಾಗಿ ಹಣ ಜಮೆ ಮಾಡಲಾಗುತ್ತಿದೆ.
ಈಗಾಗಲೇ ಜುಲೈ, ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ. ಈಗ ಅಕ್ಟೋಬರ್ ತಿಂಗಳ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು. ಆದರೆ ಜುಲೈ, ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳ ಹಣ ನಿಮಗೆ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ. ಇಲ್ಲಿದೆ ನೋಡಿ ಮಾಹಿತಿ.
Annabhagya scheme money ಜಮೆಯಾಗಿದೆಯೋ ಇಲ್ಲವೋ ಚೆಕ್ ಮಾಡಿ
ಅನ್ನಭಾಗ್ಯ ಯೋಜನೆಯಡಿಯಲ್ಲಿ ನೋಂದಣಿ ಮಾಡಿಸಿಕೊಂಡ ಫಲಾನುಭವಿಗಳು ತಮ್ಮ ಖಾತೆಗೆ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://ahara.kar.nic.in/Home/EServices
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಆಹಾರ ಇಲಾಖೆಯ ಪೇಜ್ ಓಪನ್ ಆಗುತ್ತದೆ. ಅಲ್ಲಿ ಈ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕು. ಇದಾದ ಮೇಲೆ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ನೀವು ಯಾವ ಜಿಲ್ಲೆಯ ವಿಭಾಗದವರೂ ಆ ಜಿಲ್ಲೆಯ ಮೇಲ್ಗಡೆ ಕಾಣಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮಗೆ ಅಲ್ಲಿ ಕೆಲವು ಆಯ್ಕೆಗಳು ಕಾಣಿಸುತ್ತವೆ. ಅದರಲ್ಲಿ ನೇರ ನಗದು ವರ್ಗಾವಣೆಯ ಸ್ಥಿತಿ (DBT) ಮೇಲೆ ಕ್ಲಿಕ್ ಮಾಡಬೇಕು.
ಆಗ ನೀವು ಯಾವ ತಿಂಗಳ ಸ್ಟೇಟಸ್ ಚೆಕ್ ಮಾಡಬೇಕೆಂದುಕೊಂಡಿದ್ದೀರೋ ಆ ತಿಂಗಳು ಆಯ್ಕೆ ಮಾಡಿಕೊಳ್ಳಬೇಕು. ಅಲ್ಲಿ ನಿಮ್ಮ ರೇಶನ್ ಕಾರ್ಡ್ ( ಆರ್.ಸಿ. ನಂಬರ್) ನಮೂದಿಸಬೇಕು. ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ನಮೂದಿಸಿ ನಂತರ ಗೋ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಬಹುದು.
ಯಾರಿಗೆ ಈ ಹಣ ಜಮೆಯಾಗುತ್ತದೆ?
ಅನ್ನಭಾಗ್ಯ ಯೋಜನೆಯಡಿಯಲ್ಲಿ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವವರಿಗೆ ಹಣ ಜಮೆಯಾಗುತ್ತಿದೆ. ನಿಮ್ಮ ಕುಟುಂಬದಲ್ಲಿ ಎಷ್ಟು ಜನ ಸದಸ್ಯರಿದ್ದಾರೋ ಆ ಸದಸ್ಯರನುಗುಣವಾಗಿ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲಾಗುವುದು.
ಇದನ್ನೂ ಓದಿ : ಬೆಳೆ ವಿಮೆ ಪರಿಹಾರ ಬಿಡುಗಡೆ: ನಿಮಗೂ ಜಮೆಯಾಗಿದೆಯೇ? ಮೊಬೈಲ್ ನಲ್ಲೇ ಚೆಕ್ ಮಾಡಿ
ಉದಾಹರಣೆಗೆ ನಿಮ್ಮ ಕುಟುಂಬದಲ್ಲಿಪ್ರತಿ ಸದಸ್ಯರಿಗೆ ಒಂದು ಕೆಜಿ ಅಕ್ಕಿಗೆ 34 ರೂಪಾಯಿಯಂತೆ ಒಬ್ಬರಿಗೆ 170 ರೂಪಾಯಿ ಜಮೆ ಮಾಡಲಾಗುವುದು. ನಿಮ್ಮ ಕುಟುಂಬದಲ್ಲಿ ಐದು ಜನ ಸದಸ್ಯರಿದ್ದರೆ 850 ರೂಪಾಯಿ ಹಣ ಜಮೆ ಮಾಡಲಾಗುವುದು.
ನಿಮ್ಮ ಕುಟುಂಬದಲ್ಲಿ ನಾಲ್ಕು ಜನ ಸದಸ್ಯರಿದ್ದರೆ ಒಬ್ಬ ಸದಸ್ಯರಿಗೆ 170 ರೂಪಾಯಿ ಜಮೆ ಮಾಡಲಾಗುವುದು. ನಾಲ್ಕು ಜನ ಸದಸ್ಯರಿದ್ದರೆ 680 ರೂಪಾಯಿ ಹಣ ಜಮೆ ಮಾಡಲಾಗುವುದು.