crop damage compensation ಬೆಳೆ ಹಾನಿ ಪರಿಹಾರ ಜಮೆ ಚೆಕ್ ಮಾಡಿ

Written by Ramlinganna

Updated on:

ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಬೆಳೆ ವಿಮೆ ಹಾಗೂ crop damage compensation ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು, ತಮಗೆಲ್ಲಾ ಗೊತ್ತಿದ್ದ ಹಾಗೆ ಕೆಲವು ಜಿಲ್ಲೆಯ ರೈತರಿಗೆ ಮುಂಗಾರು ಹಂಗಾಮಿನ ಬೆಳೆ ವಿಮೆ ಹಣ ಬಿಡುಗಡೆಯಾಗಿದೆ. ಇನ್ನೂ ಕೆಲವು ರೈತರಿಗೆ ಅತೀ ಶೀಘ್ರದಲ್ಲಿ ಬೆಳೆ ವಿಮೆ ಹಣ ಜಮೆಯಾಗಲಿದೆ. ಇದರೊಂದಿಗೆ ಬೆಳೆ ಹಾನಿ ಪರಿಹಾರವನ್ನು ಸಹ ರೈತರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಇದರೊಂದಿಗೆ ಬರಗಾಲ ಪರಿಹಾರ ಸ್ಟೇಟಸ್ ಸಹ ಚೆಕ್ ಮಾಡಬಹುದು.

ಬೆಳೆ ವಿಮೆ ಪರಿಹಾರ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ಬೆಳೆ ವಿಮೆ ಪರಿಹಾರ ಸ್ಟೇಟಸ್ ಚೆಕ್ ಮಾಡಲು ಈ

 https://samrakshane.karnataka.gov.in/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಬೆಳೆ ವಿಮೆ ಜಮೆಯ ಸ್ಟೇಟಸ್ ಚೆಕ್ ಮಾಡುವ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ರೈತರು Rabi ಸ್ಥಳದಲ್ಲಿ Kharif ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ / Go ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲ್ಲಿ ಕಾಣುವ Check Status ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ಮೊಬೈಲ್ ನಂಬರ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಮೊಬೈಲ್ ನಂಬರ್ ನಮೂದಿಸಿ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ನಂತರ ಸರ್ಚ್ ಮೇಲೆ ಕ್ಲಿಕ್ ಮಾಡಿ ಮುಂಗಾರು ಹಂಗಾಮಿನ ಬೆಳೆ ವಿಮೆ ಜಮೆಯ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.

crop damage compensation ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ಬೆಳೆ ಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡಲು ಈ

https://landrecords.karnataka.gov.in/PariharaPayment/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಸೆಲೆಕ್ಟ್ ಕಾಲಾಮಿಟಿ ಟೈಪ್ ನಲ್ಲಿ Flood ಆಯ್ಕೆ ಮಾಡಿಕೊಳ್ಳಬೇಕು.  ನಂತರ 2023-223 ಆಯ್ಕೆ ಮಾಡಿಕೊಳ್ಳಬೇಕು. ನಿಮ್ಮ ಆಧಾರ್ ಕಾರ್ಡ್ ನಮೂದಿಸಬೇಕು. ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ವಿವರಗಳನ್ನು ಪಡೆಯಲು / Fetch Details ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮಗೆ ಯಾವ ಬ್ಯಾಂಕಿನಲ್ಲಿ ಹಣ ಜಮೆಯಾಗಿದೆ ಹಾಗೂ ಎಷ್ಟು ಹಣ ಜಮೆಯಾಗಿದೆ ಇದರೊಂದಿಗೆ ನಿಮಮ ಹೆಸರು ಬ್ಯಾಂಕ್ ಅಕೌಂಟ್ ಕೊನೆಯ ಮೂರು ಅಂಕಿಗಳು, ಯಾವ ದಿನಾಂಕದಂದು ಜಮೆಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ. ಅದರ ಕೆಳಗಡೆ ನಿಮ್ಮ ಆಧಾರ್ ಸಂಖ್ಯೆ, ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ, ಸರ್ವೆ ನಂಬರ್, ಬೆಳೆ, ಬೆಳೆ ನಷ್ಟವಾದ ವಿಸ್ತೀರ್ಣದ ಮಾಹಿತಿ ಇರುತ್ತದೆ,

crop damage compensation ಚೆಕ್ ಮಾಡುವುದು ಹೇಗೆ?

ಬರಗಾಲ ಪರಿಹಾರ ಸ್ಟೇಟಸ್ ಮೊಬೈಲ್ ನಲ್ಲಿ ಚೆಕ್ ಮಾಡಲು ಈ

https://landrecords.karnataka.gov.in/PariharaPayment/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ಆಧಾರ್ ಸಂಖ್ಯೆ ಆಯ್ಕೆ ಮಾಡಿಕೊಳ್ಳಬೇಕು. ಸೆಲೆಕ್ಟ್ ಕಾಲಾಮಿಟಿ ಟೈಪ್ ನಲ್ಲಿ Drought ಆಯ್ಕೆ ಮಾಡಿಕೊಳ್ಳಬೇಕು. ನಂತರ ಸೆಲೆಕ್ಟ್ ಇಯರ್ ಟೈಪ್ ನಲ್ಲಿ 2023-24 ಆಯ್ಕೆ ಮಾಡಿಕೊಳ್ಳಬೇಕು. ನಿಮ್ಮ 12 ಅಂಕಿಗಳ ಆಧಾರ್ ಕಾರ್ಡ್ನಮೂದಿಸಬೇಕು. ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ನಂತರ ವಿವರಗಳನ್ನು ಪಡೆಯಲು ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು ಬರಗಾಲ ಪರಿಹಾರ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಇದರೊಂದಿಗೆ ನೀವು ನಿಮ್ಮಕುಟುಂಬದ ಇತರ ಸದಸ್ಯರ ಹೆಸರಿಗೆ ಜಮೀನಿದ್ದರೆ ಅವರಿಗೆ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಬಹುದು.  ಚೆಕ್ ಮಾಡಲು ನಿಮ್ಮ ಬಳಿ ಸ್ಮಾರ್ಟ್ ಫೋನ್ ಇದ್ದರೆ ಸಾಕು.

ಇದನ್ನೂ ಓದಿ PM kisan Helpline number ಗೆ ಕರೆ ಮಾಡಿ ಹಣ ಪಡೆಯಿರಿ

Leave a Comment