Bara parihara ಬೆಳೆ ವಿಮೆ ಜಮೆಯ ಸ್ಟೇಟಸ್ ಚೆಕ್ ಮಾಡಿ

Written by Ramlinganna

Published on:

Check drought crop insurance ಬರಗಾಲ ಪರಿಹಾರ ಹಾಗೂ ಬೆಳೆ ವಿಮೆ ಹಣ ಯಾವ ಯಾವ ರೈತರಿಗೆ ಜಮೆಯಾಗಿದೆ ಹಾಗೂ ಅರ್ಜಿ ಯಾವ ಹಂತದಲ್ಲಿದೆ ಮೊಬೈಲ್ ನಲ್ಲೇ  ಚೆಕ್ ಮಾಡಬಹುದು.

ಹೌದು, ಬರಗಾಲ ಪರಿಹಾರ ಹಾಗೂ ಬೆಳೆ ವಿಮೆ ಹಣ ಯಾವ ಯಾವ ರೈತರಿಗೆ ಜಮೆಯಾಗಿದೆ? ಯಾವ ಯಾವ ರೈತರಿಗೆ ಜಮೆಯಾಗಿಲ್ಲ ಎಂಬುದನ್ನು ಕೇವಲ ಒಂದೇ ನಿಮಿಷದಲ್ಲಿ ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಚೆಕ್ ಮಾಡಬಹುದು.  ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.

Check drought crop insurance ಬೆಳೆ ವಿಮೆ ಪರಿಹಾರ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ಬೆಳೆ ವಿಮೆ ಪರಿಹಾರ ಸ್ಟೇಟಸ್ ಚೆಕ್ ಮಾಡಲು ಈ

https://samrakshane.karnataka.gov.in/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಬೆಳೆ ವಿಮೆ ಪೇಜ್ ತೆರೆದುಕೊಳ್ಳುತ್ತದೆ.ಅಲ್ಲಿ ನೀವು ಪ್ರಸಕ್ತ ವರ್ಷದ ಸ್ಟೇಟಸ್ ಚೆಕ್ ಮಾಡಬೇಕಾದರೆ ನೀವು ಮುಂದೆ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ Check status ಮೇಲೆ ಕ್ಲಿಕ್ ಮಾಡಬೇಕು.  ಅಲ್ಲಿ ಮೊಬೈಲ್ ನಂಬರ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ನಂತರ ಸರ್ಚ್ ಮೇಲೆಕ್ಲಿಕ್ಮಾಡಬೇಕು. ಆಗ ನಿಮಗೆ ಬೆಳೆ ವಿಮೆ ಜಮೆಯ ಪೇಜ್ ಕಾಣಿಸುತ್ತದೆ. ಅಲ್ಲಿ ಯಾವ ಬೆಳೆಗೆ ಯಾವ ವರ್ಷ, ಎಷ್ಟು ಹಣ ಜಮೆಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ. ಜಮೆಯಾಗದಿದ್ದರೆ ಅರ್ಜಿ ಯಾವ ಹಂತದಲ್ಲಿದೆ ಎಂಬ ಮಾಹಿತಿ ಕಾಣಿಸುತ್ತದೆ. ಅಂದರೆ ವಿಮಾ ಕಂಪನಿಯಿಂದ ಅರ್ಜಿ ಸ್ವೀಕೃತವಾಗಿದೆಯೋ ಇಲ್ಲವೋ ಎಂಬ ಮಾಹಿತಿಯನ್ನು ಇಲ್ಲೇ ಚೆಕ್ ಮಾಡಬಹುದು.

ಇದನ್ನೂ ಓದಿ ನಿಮ್ಮ ಜಮೀನಿಗೆ ಮುಟೇಶನ್ ಆಗಿದೆಯೇ? ಇಲ್ಲೇ ಚೆಕ್ ಮಾಡಿ

ರೈತರು ಮೊದಲು ಬರಗಾಲ ಪರಿಹಾರ ಅಂದರೆ ಅತೀವೃಷ್ಟಿ ಅನಾವೃ ಷ್ಟಿಯಿಂದ ಬೆಳೆ ಹಾಳಾದರೆ ಸರ್ಕಾರವು ಬೆಳೆ ಹಾನಿಯಾದ ರೈತರಿಗೆ ಪರಿಹಾರ ಹಣ ಘೋಷಿಸುತ್ತದೆ. ಆಗ ರೈತರಿಗೆ ಎಕರೆಗೆ ಇಂತಿಷ್ಟು ಬೆಳೆ ಹಾನಿ ಪರಿಹಾರ ಜಮೆ ಮಾಡುವುದು. ಪ್ರಸಕ್ತ ವರ್ಷ ಮಳೆಯಾಶ್ರಿತ ಬೆಳೆಗಳಿಗೆ 8500 ರೂಪಾಯಿ ನೀಡಲಾಗುವುದು. ಅದೇ ರೀತಿ ಮಳೆಯಾಶ್ರಿತ ಬೆಳೆಗಳಿಗೆ ಪ್ರತಿ ಎಕರೆಗೆ 17000 ರೂಪಾಯಿ ನೀಡಲಾಗುವುದು. ಬಹುವಾರ್ಷಿಕ ಬೆಳೆಗಳಿಗೆ ಪ್ರತಿ ಎಕರೆಗೆ 22500 ರೂಪಾಯಿಯವರೆಗೆ ಪರಿಹಾರ ನೀಡಲಾಗುವುದು.

ಬೆಳೆ ಹಾನಿ ಪರಿಹಾರ ಹಣದ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ಬೆಳೆ ಹಾನಿ ಪರಿಹಾರದ ಸ್ಟೇಟಸ್ ಚೆಕ್ ಮಾಡಲು ಈ

https://landrecords.karnataka.gov.in/PariharaPayment/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪರಿಹಾರ ಹಣ ಸಂದಾಯ ವರದಿ ಕಾಣಿಸುತ್ತದೆ. ಅಲ್ಲಿ ಆಧಾರ್ ಸಂಖ್ಯೆ ಆಯ್ಕೆ ಮಾಡಿಕೊಳ್ಳಬೇಕು. ಇಲ್ಲಿ ಸೆಲೆಕ್ಟ್ ಕಾಲಾಮಿಟಿ ಟೈಪ್ ನಲ್ಲಿ ಫ್ಲಡ್ ಅಥವಾ ಡ್ರಾಟ್ ಆಯ್ಕೆ ಮಾಡಿಕೊಳ್ಳಬೇಕು. ನಂತರ 2023ನೇ  ವರ್ಷ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ನಮೂದಿಸಬೇಕು. ನಂತರ ಕ್ಯಾಪ್ಚ್ಯಾ ಕೋಡ್ ಹಾಕಿ ವಿವರಗಳನ್ನು ಪಡೆಯಿರಿ ಮೇಲೆ ಕ್ಲಿಕ್ ಮಾಡಿದ ನಂತರ ನಿಮಗೆ ಜಮೆಯಾಗಿರುವ ಸ್ಟೇಟಸ್ ಚೆಕ್ ಮಾಡಬಹುದು.

ಕಳೆದ ಸಾಲಿನಲ್ಲಿ ಪ್ರವಾಹದಿಂದಾಗಿ ಉಂಟಾದ ಮಳೆಯಿಂದ ರೈತರ ಬೆಳೆಹಾಳಾಗಿತ್ತು. ಆಗ ಎಷ್ಟು ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡುವುದರೊಂದಿಗೆ ಪ್ರಸಕ್ತ ವರ್ಷದ ಬೆಳೆ ಹಾನಿ ಪರಿಹಾರ ಅತೀ ಶೀಘ್ರದಲ್ಲಿ ಬಿಡುಗಡೆ ಮಾಡಲಾಗುವುದು. ಆಗ ರೈತರು  ತಮಗೆಷ್ಟು ಹಣ ಜಮೆಯಾಗಿದೆ ಎಂಬುದನ್ನು ಫಲಾನುಭವಿಗಳು ಮೊಬೈಲ್ ನಲ್ಲಿ ಚೆಕ್ ಮಾಡಬಹುದು.

Leave a Comment