ರೈತರ ಎಫ್ಐಡಿ ಆಗಿದೆಯೋ ಇಲ್ಲವೋ? ಮೊಬೈಲ್ ನಲ್ಲೇ ಚೆಕ್ ಮಾಡಿ

Written by Ramlinganna

Published on:

Check farmer FID  ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಆಧಾರ್ ನಂಬರ್ ಹಾಕಿ ಎಫ್ಐಡಿ ಹಾಗೂ ಪಿಎಂ ಕಿಸಾನ್ ಐಡಿಯನ್ನು  ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು.

ಹೌದು, ಈಗ ರೈತರು ತೋಟಗಾರಿಕೆ, ಕೃಷಿ, ಪಶುಸಂಗೋಪನೆ, ಮೀನುಗಾರಿಕೆ, ರೇಷ್ಮೆ ಇಲಾಖೆಯ ವತಿಯಿಂದ ಸಬ್ಸಿಡಿ ಪಡೆಯಲು ಎಫ್ಐಡಿ ಇರುವದು ಕಡ್ಡಾಯವಾಗಿದೆ. ಇದರೊಂದಿಗೆ ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡಲು ಪಿಎಂಕೆಐಡಿ ಬೇಕಾಗುತ್ತದೆ. ಹಾಗದರೆ ಎಫ್ಐಡಿ ಹಾಗೂ ಪಿಎಂಕೆಐಡಿಯನ್ನು ಚೆಕ್ ಮಾಡುವುದು ಹೇಗೆ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಕೃಷಿ ಇಲಾಖೆಯ ಬಳಿಯಿರುವ ರೈತರ ದಾಖಲೆಗಳ ಆಧಾರದ ಮೇಲೆ ಈಗಾಗಲೇ ಬಹಳಷ್ಟು ರೈತರ ಎಫ್ಐಡಿ ಮಾಡಲಾಗಿದೆ. ಆದರೂ ಸಹ ಇನ್ನೂ ಬಹಳಷ್ಟು ರೈತರಿಗೆ ಎಫ್ಐಡಿ ಆಗಿದೆಯೋ ಇಲ್ಲವೋ ಎಂಬುದು ಗೊತ್ತಿರುವುದಿಲ್ಲ. ಹಾಗಾಗಿ ರೈತರು ತಮ್ಮ ಹೆಸರಿಗೆ ಎಫ್ಐಡಿ ಆಗಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಲು  ಈ

https://fruitspmk.karnataka.gov.in/MISReport/GetDetailsByAadhaar.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಫ್ರೂಟ್ಸ್ ತಂತ್ರಾಂಶದ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ರೈತರು ಆಧಾರ್ ಕಾರ್ಡ್ ನಮೂದಿಸಬೇಕು. ನಂತರ Search ಮೇಲೆ ಕ್ಲಿಕ್ ಮಾಡಬೇಕು.

ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ಫಾರ್ಮರ್ಸ್ ಡಿಟೇಲ್ಸ್ ಕೆಳಗಡೆ FruitID ಇರುತ್ತದೆ. ನಿಮ್ಮ ಎಫ್ಐಡಿ ಸಂಖ್ಯೆಯು  FID ಇದ್ದು, ಅದರ ಮುಂದುಗಡೆ ಕೆಲವು ಅಂಕಿಗಳು ಇರುತ್ತದೆ. ಉದಾಹರಣೆಗೆ FID0395494984848484  ಹೀಗೆ ಇರುತ್ತದೆ.  ಅದರ ಕೆಳಗಡೆ ಪಿಎಂಕೆಐಡಿ ಇರುತ್ತದೆ. ಈ ಪಿಎಂಕೆಐಡಿ ಸಹಾಯದಿಂದ ನೀವು ನಿಮ್ಮ ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡಬಹುದು. ಅಂದರೆ ಇಲ್ಲಿಯವರೆಗೆ ನಿಮಗೆ ಪಿಎಂ ಕಿಸಾನ್ ಯೋಜನೆಯ ಎಷ್ಟು ಕಂತುಗಳು ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಬಹುದು.

ಇದನ್ನೂ ಓದಿ PM kisan Helpline number ಗೆ ಕರೆ ಮಾಡಿ ಹಣ ಪಡೆಯಿರಿ

Check farmer FID ಎಫ್ಐಡಿ ಆಗದಿದ್ದರೆ ರೈತರೇನು ಮಾಡಬೇಕು?

ಯಾವ ರೈತರಿಗೆ ಎಫ್ಐಡಿ ಆಗಿಲ್ಲವೋ ಅವರು ಮೊಬೈಲ್ ನಲ್ಲೇ ಎಫ್ಐಡಿ ಗೆ ಅರ್ಜಿ ಸಲ್ಲಿಸಬಹುದು. ಅಥವಾ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರದಲ್ಲಿ ಸಲ್ಲಿಸಬಹುದು.  ಅರ್ಜಿ ಸಲ್ಲಿಸುವಾಗ ನಿಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಝರಾಕ್ಸ್ ಪ್ರತಿ, ಜಮೀನಿನ ದಾಖಲೆಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದರೆ ಆರ್.ಡಿ. ಸಂಖ್ಯೆಯಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಇತ್ತೀಚನ ಭಾವಚಿತ್ರ ಸಲ್ಲಿಸಬೇಕು.

ಪಿಎಂ ಕಿಸಾನ್  ಇಕೆವೈಸಿ ಆಗಿದೆಯೋ ಇಲ್ಲವೋ? ಮೊಬೈಲ್ ನಲ್ಲೇ ಚೆಕ್ ಮಾಡಿ

ಯಾವ ರೈತರು ಪಿಎಂ ಕಿಸಾನ್ ಯೋಜನೆಗೆ ಇಕೆವೈಸಿ ಮಾಡಿಸಿಲ್ಲವೋ ಕೂಡಲೇ ಇಕೆವೈಸಿ ಮಾಡಿಸಿಕೊಳ್ಳಬೇಕು. ಇಕೆವೈಸಿ ಮಾಡಿಸಿದರೆ ಮಾತ್ರ ನಿಮಗೆ ಪಿಎಂ ಕಿಸಾನ್ ಯೋಜನೆಯ ಹಣ ಜಮೆಯಾಗುತ್ತದೆ. ಪಿಎಂ ಕಿಸಾನ್ ಯೋಜನೆಗೆ ಅರ್ಜಿ ಸಲ್ಲಿಸಿದ ರೈತರು ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://exlink.pmkisan.gov.in/aadharekyc.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಓಟಿಪಿ ಬೇಸ್ಡ್ ಇಕೆವೈಸಿ ಕೆಳಗಡೆ ನಿಮ್ಮ ಆಧಾರ್ ಕಾರ್ಡ್ ನಮೂದಿಸಿ ಸರ್ಚ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇಕೆವೈಸಿ ಆಗಿದೆಯೋ ಇಲ್ಲವೋ ಎಂಬ ಮೆಸೆಜ್ ಬರುತ್ತದೆ. ಒಂದು ವೇಳೆ ಇಕೆವೈಸಿ ಆಗಿರದಿದ್ದರೆ ಕೂಡಲೇ ಬಯೋಮೆಟ್ರಿಕ್ ಆಧಾರಿತ ಇಕೆವೈಸಿ ಮಾಡಿಸಿಕೊಳ್ಳಲು ಕೋರಲಾಗದೆ. ನಿಮ್ಮ ಮೊಬೈಲ್ ನಲ್ಲಿ ಈಗಲೇ ಚೆಕ್ ಮಾಡಿ

Leave a Comment