Gruha jyothi application status ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದವರು ಈಗ ಅರ್ಜಿಯ ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಇದಕ್ಕಾಗಿ ಫಲಾನುಭವಿಗಳು ಎಲ್ಲಿಯೂ ಹೋಗಬೇಕಿಲ್ಲ, ಯಾರ ಸಹಾಯವೂ ಕೇಳಬೇಕಿಲ್ಲ, ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
Gruha jyothi application status ಗೃಹ ಜ್ಯೋತಿ ಅರ್ಜಿ ಸ್ಟೇಟಸ್ ಚೆಕ್ ಮಾಡುವುದು ಹೇಗೆ?
ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳು ತಮ್ಮ ಅರ್ಜಿಯ ಸ್ಟೇಟಸ್ ನ್ನು ಚೆಕ್ ಮಾಡಲು ಈ
https://sevasindhu.karnataka.gov.in/StatucTrack/Track_Status
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.ಆಗ ಗೃಹ ಜ್ಯೋತಿಯ ಅರ್ಜಿಯ ಸ್ಟೇಟಸ್ ಚೆಕ್ ಮಾಡುವ ಪೇಜ್ ಓಪನ್ ಆಗುತ್ತದೆ. ಹೌದು, Track Your application status ಎಂಬ ಮೆಸೇಜ್ ಕಾಣಿಸುತ್ತದೆ. ಅದರ ಕೆಳಗಡೆ Select ESCOM Name ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ BESCOM, MESCOM, CESE, HESCOM, GESCOM ಹೀಗೆ ನಿಮಗೆ ಕೆಲವು ಆಯ್ಕೆಗಳು ಕಾಣಿಸುತ್ತವೆ. ನೀವು ಯಾವ ವಿಭಾಗದ ವ್ಯಾಪ್ತಿಯಲ್ಲಿದ್ದೀರೋ ಆ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು.
ಉದಾಹರಣೆಗೆ ನೀವು ಕಲಬುರಗಿ ವಿಭಾಗದವರಾಗಿದ್ದರೆ GESCOM ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ವಿದ್ಯುತ್ ಬಿಲ್ ನಲ್ಲಿ ನಮೂದಿಸಲಾಗಿರುವ ಅಕೌಂಟ್ ಐಡಿಯನ್ನು ನಮೂದಿಸಬೇಕು. ನಂತರ ನೀವು Check Status ಮೇಲೆ ಕ್ಲಿಕ್ ಮಾಡಿದರೆ ಸಾಕು, ನಿಮ್ಮ ಅರ್ಜಿ ಸ್ವೀಕೃತವಾಗಿದೆಯೋ ಇಲ್ಲವೋ ಎಂಬ ಸಂದೇಶ ಕಾಣಿಸುತ್ತದೆ. ಅಂದರೆ ನೀವು ನಮೂದಿಸಿದ ಅಕೌಂಟ್ ಐಡಿ ಯಾವ ದಿನಾಂಕ ಹಾಗೂ ಯಾವ ಸಮಯಕ್ಕೆಅರ್ಜಿ ಸಲ್ಲಿಸಲಾಗಿದೆ.
ಅರ್ಜಿ ಸ್ಟೇಟಸ್ Your application for Gruhajyothi scheme is received and sent to ESCOM for Processing ಎಂಬ ಮೆಸೆಜ್ ಕಂಡರೆ ನಿಮ್ಮ ಅರ್ಜಿ ಸ್ವೀಕೃತವಾಗಿದೆ ಎಂದರ್ಥ. ಆಗಸ್ಟ್ ತಿಂಗಳಿನ ಬಿಲ್ ನಲ್ಲಿ ಒಂದು ವೇಳೆ ನೀವು 200 ಯೂನಿಟ್ ಗಿಂತ ಕಡಿಮೆ ಯೂನಿಟ್ ಬಳಸಿದ್ದರೆ ನಿಮಗೆ ಝೀರೋ ಬಿಲ್ ನೀಡಲಾಗುವುದು. ನೀವು ವಿದ್ಯುತ್ ಬಿಲ್ ಪಾವತಿಸುವ ಅಗತ್ಯವಿಲ್ಲ.
ಇದನ್ನೂ ಓದಿ : ಈ ಪಟ್ಟಿಯಲ್ಲಿರುವವರಿಗೆ ಗೃಹಲಕ್ಷ್ಮೀ ಯೋಜನೆಯ 2 ಸಾವಿರ ರೂಪಾಯಿ ಜಮೆ- ಚೆಕ್ ಮಾಡಿ ಅರ್ಜಿ ಸಲ್ಲಿಸಿ
ಒಂದು ವೇಳೆ ನೀವು 200 ಯೂನಿಟ್ ಗಿಂತ ಹೆಚ್ಚು ಯೂನಿಟ್ ಬಳಸಿದ್ದರೆ ಪೂರ್ಣ ಪ್ರಮಾಣದ ಬಿಲ್ ನ್ನು ಪಾವತಿಸಬೇಕಾಗುತ್ತದೆ. ಹಾಗಾಗಿ ನಿಮ್ಮ ವಿದ್ಯುತ್ ನ್ನು ಮಿತವಾಗಿ ಬಳಸಿ 200 ಯೂನಿಟ್ ಮೀರದಂತೆ ನೋಡಿಕೊಳ್ಳಿ.
ಈ ಯೋಜನೆಯ ಲಾಭ ಯಾರಿಗೆ ಸಿಗಲಿದೆ?
ಗೃಹ ಜ್ಯೋತಿ ಯೋಜನೆಯ ಲಾಭ ಗೃಹ ಬಳಕೆಯ ವಿದ್ಯುತ್ ಸಂಪರ್ಕಗಳಿಗೆ ಮಾತ್ರ ಅನ್ವಯವಾಗುವುದು. ಪ್ರತಿ ತಿಂಗಳು ವಿದ್ಯುತ್ ಬಿಲ್ ನ ಮೀಟರ್ ರೀಡಿಂಗ್ ಮಾಡುವಾಗ ಒಟ್ಟು ವಿದ್ಯುತ್ ಬಳಕೆಯ ಪ್ರಮಾಣಕ್ಕೆ ಬಿಲ್ ನಮೂದಿಸಲಾಗುವುದು. ಗೃಹ ವಿದ್ಯುತ್ ಬಳಕೆದಾರರ ಅರ್ಹ ಮೊತ್ತವನ್ನು ಬಿಲ್ ನಲ್ಲಿ ಕಡಿತಗೊಳಿಸಿ ಉಳಿದ ಮೊತ್ತವನ್ನು ಗ್ರಾಹಕರಿಗೆ ನೆಟ್ ಬಿಲ್ ನೀಡಲಾಗುವುದು. ಗ್ರಾಹಕರು ನೆಟ್ ಬಿಲ್ ನ್ನು ಪಾವತಿಸಬೇಕಾಗುತ್ತದೆ. ಗ್ರಾಹಕರು 200 ಯೂನಿಟ್ ಗಿಂತ ಕಡಿಮೆ ಯೂನಿಟ್ ಬಳಸಿದ್ದರೆ ಅಂತಹ ಗ್ರಾಹಕರಿಗೆ ಶೂನ್ಯ ಬಿಲ್ ನ್ನು ನೀಡಲಾಗುವುದು. ಜೂನ್ ಅಂತ್ಯಕ್ಕೆ ಬಳಿಸಿದ ವಿದ್ಯುತ್ ಬಿಲ್ ನ್ನು ಗ್ರಾಹಕರು ಪೂರ್ಣ ಪ್ರಮಾಣದಲ್ಲಿ ಪಾವತಿಸಿರಬೇಕು. ಗೃಹ ವಿದ್ಯುತ್ ಬಳಕೆದಾರರ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಸ್ಥಾವರಗಳಿದ್ದಲ್ಲಿ ಒಂದು ಸ್ಥಾವರಕ್ಕೆ ಮಾತ್ರ ಈ ಯೋಜನೆಯಡಿ ಸೌಲಭ್ಯಕ್ಕೆ ಅರ್ಹರಾಗುವುದು.
ಪ್ರತಿ ಫಲಾನುಭವಿಯು ಸೇವಾ ಸಿಂಧು ಮೂಲಕವೇ ಅರ್ಜಿ ಸಲ್ಲಿಸಿರಬೇಕು. ಅರ್ಜಿಯನ್ನು ಆನ್ ಲೈನ್ ಮೂಲಕವೇ ಸಲ್ಲಿಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದವರು ಈ ಗೃಹ ಜ್ಯೋತಿ ಯೋಜನೆಯ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.