Gruhalakshmi ಹಣ ಯಾರಿಗೆ ಜಮೆ? ಚೆಕ್ ಮಾಡಿ

Written by Ramlinganna

Updated on:

Gruhalakshmi ಯೋಜನೆಗೆ ನೋಂದಣಿ ಮಾಡಿಸಿದ ಪ್ರತಿಯೊಬ್ಬರಿಗೂ ಹಣ ಜಮೆಯಾಗಿಲ್ಲ. ಕೆಲವರಿಗೆ ಜಮೆಯಾದರೆ ಇನ್ನೂ ಕೆಲವರಿಗೇಕೆ ಜಮೆಯಾಗಿಲ್ಲ? ಏಕೆ ಜಮೆಯಾಗಿಲ್ಲ? ಇಲ್ಲಿದೆ ಮಾಹಿತಿ.

ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದ ಪ್ರಮುಖ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆಯೂ ಒಂದಾಗಿದೆ. ಈ ಯೋಜನೆಯಡಿಯಲ್ಲಿ ರಾಜ್ಯದ ಒಟ್ಟು 1.28 ಕೋಟಿ ಫಲಾನುಭವಿಗಳ ಪೈಕಿ 1.12 ಕೋಟಿ ಫಲಾನುಭವಿಗಳು ಇಲ್ಲಿಯವರೆಗೆ ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. ಆದರೆ ಇಲ್ಲಿಯವರೆಗೆ ಕೇವಲ 80 ಲಕ್ಷ ಮಹಿಳೆಯರಿಗೆ ಹಣ ಜಮೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಆದರೆ ನೋಂದಣಿ ಮಾಡಿಸಿದ 1.12 ಕೋಟಿ ಫಲಾನುಭವಿಗಳಲ್ಲಿ ಕೇವಲ 80 ಲಕ್ಷ ಮಹಿಳೆಯರಿಗೆ ಮಾತ್ರ ಹಣ ಜಮೆಯಾಗಿದೆ. ಉಳಿದ ಕುಟುಂಬದ ಮಹಿಳಾ ಮುಖ್ಯಸ್ಥರಿಗೇಕೆ ಜಮೆಯಾಗಿಲ್ಲ. ಯಾವ ಕಾರಣಕ್ಕಾಗಿ ಹಣ ಜಮೆ ಮಾಡುವುದನ್ನು ತಡೆಹಿಡಿಡಯಲಾಗಿದೆ ಎಂಬುದರ ಮಾಹಿತಿ ಇಲ್ಲಿದೆ.

Gruhalakshmi ಯೋಜನೆಯ ಹಣ ಯಾರಿಗೆ ಜಮೆಯಾಗಿದೆ? ಚೆಕ್ ಮಾಡುವುದು ಹೇಗೆ?

ಗೃಹಲಕ್ಷ್ಮೀ ಯೋಜನೆಯ ಹಣ ಯಾರಿಗೆ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ

https://play.google.com/store/apps/details?id=com.dbtkarnataka

ಲಿಂಕ್ ಮೇಲೆ ಕ್ಲಿಕ್ ಮಾಡಿ ಚೆಕ್ ಮಾಡಬಹುದು. ಲಿಂಕ್ ಮೇಲೆ ಕ್ಲಿಕ್ ಮಾಡಿದ ನಂತರ ಡಿಬಿಟಿ ಆ್ಯಪ್ ತೆರೆದುಕೊಳ್ಳುತ್ತದೆ. ಅಥವಾ ನೀವು ಗೂಗಲ್ ಪ್ಲೇ ಸ್ಟೋರ್ ಮೂಲಕ ಡಿಬಿಟಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಬಹುದು. ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದ ನಂತರ ಇನಸ್ಟಾಲ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲೋ ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದು ಸಲ ಅಲೋ ಮೇಲೆ ಕ್ಲಿಕ್ ಮಾಡಬೇಕು. ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಮಹಿಳೆಯ ಆಧಾರ್ ಕಾರ್ಡ್ ನಮೂದಿಸಬೇಕು.

ಐ ಅಗ್ರಿ ಬಾಕ್ಸ್ಆಯ್ಕೆ ಮಾಡಿಕೊಂಡು ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು.  ಆಗ ಓಟಿಪಿ ಸಂಖ್ಯೆ ಬರುವುದು. ನಿಮ್ಮ ಮೊಬೈಲಿಗೆ ಬಂದ ಓಟಿಪಿಯನ್ನು ನಮೂದಿಸದ ನಂತರ ನೀವು ಪಿನ್ ನಂಬರ್ ಕ್ರಿಯೇಟ್ ಮಾಡಿಕೊಳ್ಳಬೇಕು. ಅಂದರೆ ನಿಮ್ಮ ಎಟಿಎಂ ಕಾರ್ಡ್ ನಂಬರ್ ನಂತೆ ನೀವು ಯಾವುದಾದರೂ ನಂಬರ್ ಗಳನ್ನು ನಮೂದಿಸಿ ಪಿನ್ ಕ್ರಿಯೇಟ್ ಮಾಡಿಕೊಳ್ಳಬೇಕು. ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿದಾಗ ನಿಮ್ಮ ಭಾವಚಿತ್ರ ಕಾಣಿಸುತ್ತದೆ.

ಇದನ್ನೂ ಓದಿ ಈ ಪಟ್ಟಿಯಲ್ಲಿರುವ ರೈತರಿಗೆ ಈ ದಿನ ಪಿಎಂ ಕಿಸಾನ್ ಹಣ ಜಮೆ- ನಿಮ್ಮ ಹೆಸರಿದೆಯೇ? ಚೆಕ್ ಮಾಡಿ

ಅಲ್ಲಿ ಆಧಾರ್ ಕಾರ್ಡ್ ನಲ್ಲಿರುವಂತೆ ನಿಮ್ಮ ಹೆಸರು, ನಿಮ್ಮ ಊರು, ನಿಮ್ಮ ಜನ್ಮ ದಿನಾಂಕ ಕಾಣಿಸುತ್ತದೆ. ಅಲ್ಲಿ ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು. ನಂತರ ಓಕೆ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನಿಮಗೆ ಕಾಣುವ ಮೂರು ಆಯ್ಕೆಗಳಲ್ಲಿ ಪೇಮೆಂಟ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕು.  ಆಗ ನಿಮಗೆ ಯಾವ ಯಾವ ಯೋಜನೆಗಳಿಂದ ಹಣ ಜಮೆಯಾಗಿದೆ. ಅಂದರೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳಿಂದ ಎಷ್ಟು ಹಣ ಜಮೆಯಾಗಿದೆ? ಯಾವಾಗ ಜಮೆಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ.

ನೋಂದಣಿ ಮಾಡಿಸಿದ ಕುಟುಂಬದ ಮಹಿಳಾ ಮುಖ್ಯಸ್ಥರಿಗೇಕೆ ಜಮೆಯಾಗಿಲ್ಲ

ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿರುವ ಕುಟುಂಬದ ಮಹಿಳಾ ಮುಖ್ಯಸ್ಥರ ಹೆಸರು ಎಲ್ಲಾ ದಾಖಲೆಗಳಲ್ಲಿ ಒಂದೇ ರೀತಿಯಾಗಿರಬೇಕು. ಬ್ಯಾಂಕ್ ಖಾತೆ, ಆಧಾರ್ ಕಾರ್ಡ್, ರೇಶನ್ ಕಾರ್ಡ್ ಹಾಗೂ ಅರ್ಜಿಯೊಂದಿಗೆ ಸಲ್ಲಿಸಿರುವ ಎಲ್ಲಾ ದಾಖಲೆಗಳಲ್ಲಿ ಹೆಸರು ಒಂದೇ ರೀತಿಯಾಗಿರಬೇಕು. ಒಂದು ವೇಳೆ ಹೆಸರು ಒಂದು ದಾಖಲೆಗೂ ಇನ್ನೊಂದು ದಾಖಲೆಗೂ ತಾಳೆ ಯಾಗದೆ ವ್ಯತ್ಯಾಸವಾಗಿದ್ದರೂ ಜಮೆಯಾಗುವುದಿಲ್ಲ. ಅಂತಹವರು ಕೂಡಲೇ ತಮ್ಮ ಹೆಸರುಗಳನ್ನು ಪರಿಶೀಲಿಸಿಕೊಳ್ಳಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಹಣ ಏಕೆ ಜಮೆಯಾಗಿಲ್ಲ?

ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸದವರಲ್ಲಿ 1 ಲಕ್ಷದ 59 ಸಾವಿರ ಅರ್ಜಿದಾರರ ಡೆಮೋ ದೃಢೀಕರಣ ವಿಫಲವಾಗಿದೆ. 5  ಲಕ್ಷ 96 ಸಾವಿರ ಅರ್ಜಿದಾರರ ಬ್ಯಾಂಕ್ ಆಧಾರ್ ಜೋಡಣೆಯಾಗಿಲ್ಲ. 1 ಲಕ್ಷದ 75 ಸಾವಿರ ಅರ್ಜಿದಾರರ ಹೆಸರು ಮತ್ತು ವಿಳಾಸದಲ್ಲಿ ವ್ಯತ್ಯಾಸ ಇದೆ. ಈಗ 9677 ಅರ್ಜಿ ಸೇವಾಸಿಂಧು ವತಿಯಿಂದ ಪುನರ್ ಪರಿಶೀಲನೆ ನಡೆಯುತ್ತಿದೆ.

Leave a Comment