ನಿಮ್ಮ ಜಮೀನಿನ ಅಕ್ಕಪಕ್ಕದ ರೈತರ ಹೆಸರಿಗೆಷ್ಟು ಜಮೀನಿದೆ ಇಲ್ಲೇ ಚೆಕ್ ಮಾಡಿ

Written by Ramlinganna

Published on:

Check your land beside information : ರೈತರಿಗೆ ಸಂತಸದ ಸುದ್ದಿ ಇಲ್ಲಿದೆ. ರೈತರು ಈಗ ತಮ್ಮ ಜಮೀನಿನ ಸುತ್ತುಮತ್ತ ಅಂದರೆ ಅಕಪಕ್ಕದಲ್ಲಿರುವ ರೈತರ ಹೆಸರಿಗೆಷ್ಟು ಜಮೀನಿದೆ ಎಂಬುದನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ನೋಡಿ ಮಾಹಿತಿ

Check your land beside information ನಿಮ್ಮ ಜಮೀನಿನ ಅಕ್ಕಪಕ್ಕದ ರೈತರ ಹೆಸರಿಗೆ ಎಷ್ಟು ಎಕರೆ ಇದೆ?

ನಿಮ್ಮ ಜಮೀನಿನ ಅಕ್ಕಪಕ್ಕದ ರೈತರ ಹೆಸರಿಗೆಷ್ಟು ಜಮೀನಿದೆ ಎಂಬುದನ್ನು ಚೆಕ್ ಮಾಡಲು ಈ

https://mahitikanaja.karnataka.gov.in/Revenue/RevenueRTCInfo?ServiceId=1020&Type=TABLE&DepartmentId=2066

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಸರ್ಕಾರದ ಮಾಹಿತಿ ಕಣಜ ಎಂಬ ಲಿಂಕ್ ಓಪನ್ ಆಗುತ್ತದೆ. ಅಲ್ಲಿ ನೀವು ಮಾಹಿತಿ ಕಣಜ ಕೆಳಗಡೆ ಆರ್.ಟಿ.ಸಿ ಮಾಹಿತಿ ವೀಕ್ಷಿಸಿ ಕಾಣಿಸುತ್ತದೆ. ಅಲ್ಲಿ ನೀವು ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನೀವು ನಿಮ್ಮ ಹೋಬಳಿಯನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ಇದಾದ ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ ಸಮೀಕ್ಷೆ ಸಂಕ್ಷೆಯಲ್ಲಿ ನಿಮ್ಮ ಸರ್ವೆ ನಂಬರ್ ನಮೂದಿಸಬೇಕು. ನಂತರ ನೀವು ಸಲ್ಲಿಸಿ ಮೇಲೆ ಕ್ಲಿಕ್ ಮಾಡಬೇಕು. ಇದಾದ ನಂತರ ಹಿಸ್ಸಾ ವಿವರಗಳನ್ನು ಪಡೆಯಿರಿ ಮೇಲೆ ಕ್ಲಿಕ್ ಮಾಡಬೇಕು. ಇದಾದ ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಆರ್.ಟಿಸಿ ಮಾಹಿತಿ ಪಡೆಯಿರಿ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ನೀವು ಇಂದಿನ ದಿನಾಂಕ, ತಾಲುಕು, ಹೋಬಳಿ, ನಿಮ್ಮ ಊರು ಹಾಗೂ ಸರ್ವೆ ನಂಬರ್ ಕಾಣಿಸುತ್ತದೆ. ಅದರ ಕೆಳಗಡೆ ನೀವು ನಮೂದಿಸಿದ ಸರ್ವೆ ನಂಬರ್ ನಲ್ಲಿ ಯಾರ ಯಾರ ಹೆಸರಿದೆ. ಅವರ ಹೆಸರಿಗಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣಿಸುತ್ತದೆ. ಅಂದರೆ ನಿಮ್ಮ ಜಮೀನಿನ ಅಕ್ಕಪಕ್ಕದಲ್ಲಿರುವ ಜಮೀನಿನ ಮಾಲಿಕರ ಹೆಸರು, ಅವರ ಹೆಸರಿಗೆ ಎಷ್ಟು ಎಕರೆ ಜಮೀನಿದೆ. ನಂತರ ಖಾತಾ ನಂಬರ್ ಸಹ ಕಾಣಿಸುತ್ತದೆ.

ಇದನ್ನೂ ಓದಿ ನಿಮ್ಮ ಜಮೀನಿನ ಮೇಲೆ ಬೆಳೆ ಸಾಲ ಎಷ್ಟಿದೆ? ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ

ಹೀಗೆ ನೀವು ನಿಮ್ಮ ಸರ್ವೆ ನಂಬರ್ ಸುತ್ತಮುತ್ತಲಿರುವ ಜಮೀನಿನ ಮಾಲಿಕರ ಹೆಸರಿಗೆಷ್ಟು ಜಮೀನಿದೆ ಎಂಬ ಮಾಹಿತಿಯನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು.

ಏನಿದು ಮಾಹಿತಿ ಕಣಜ

ಮಾಹಿತಿ ಕಣಜ ಸರ್ಕಾರವು ಆರಂಭಿಸಿದ ವೆಬ್ ಆಗಿದೆ. ಈ ಪುಟದ ಮೂಲಕ ನೀವು ಜಮೀನಿಗೆ ಸಂಬಂಧಿಸಿದ ಮಾಹಿತಿಗಳನ್ನು, ಕಂದಾಯ ಇಲಾಖೆಯ ಮಾಹಿತಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ, ಕೃಷಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಇಂಧನ ಇಲಾಖೆ,  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖ, ಸೇರಿದಂತೆ ಸರ್ಕಾರವು ವಿವಿಧ ಇಲಾಖೆಗಳ ಮಾಹಿತಿಗಳನ್ನು ವೀಕ್ಷಿಸಬಹುದು.

ರೈತರು ಕೃಷಿ, ತೋಟಗಾರಿಕೆ ಮತ್ತು ಇತರ ಕೃಷಿ ಸಂಬಂಧಿಸಿದ ಚಟುವಟಿಕೆಗಳಿಗಾಗಿ ಹೊಂದಿರುವ ಭೂಮಿಗೆ ಸುಗಮ ರಸ್ತೆ ಸಂಪರ್ಕ ಕಲ್ಪಿಸಲು ನಮ್ಮ ಹೊಲ ನಮ್ಮ ದಾರಿ ಯೋಜನೆಯಂತಹ ಸರ್ಕಾರಿ ಕಾರ್ಯಕ್ರಮಗಳಿವೆ. ಆದರೆ ಭೂಮಿ ನೋಂದಣಿ ವಿಭಜನೆ ಮತ್ತು ಹಕ್ಕುಗಳ ಕುರಿತು ಆಗಾಗ ಕಾನೂನು ಮತ್ತು ಆಡಳಿತಾತ್ಮಕ ಸಮಸ್ಯೆಗಳು ಎದುರಾಗುತ್ತವ. ಇದಕ್ಕೆ ಕೃಷಿ ಇಲಾಖೆಯ ಸಹಾಯವಾಮಿ 1800 425 3553 ಗೆ ಸಂಪರ್ಕಿಸಬಹುದು.

ರಸ್ತೆ ನಿರ್ಮಾಣಕ್ಕೆ ಸರ್ಕಾರವು 12.5 ಲಕ್ಷ ಸಬ್ಸಿಡಿ

ರೈತರ ಜಮೀನುಗಳಿಗೆ ಹೋಗಲು ರಸ್ತೆ ನಿರ್ಮಿಸಲು 12.5 ಲಕ್ಷ ರೂಪಾಯಿ ಸಹಾಯಧನ ನೀಡುತ್ತದೆ. ಹೌದು, ನಮ್ಮ ಹೊಲ ನಮ್ಮ ದಾರಿ ಯೋಜನೆಯನ್ನು ಕರ್ನಾಟಕ ಸರ್ಕಾರವು ಜಾರಿಗೆ ತಂದಿದೆ. ಈ ಯೋಜನೆಯಡಿ ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ರಸ್ತೆ ನಿರ್ಮಾಣ ಮಾಡಬಹುದು. ಈಗಲು ಎಷ್ಟೋ ರೈತರು ತಮ್ಮ ಜಮೀನಿಗಳಿಗೆ ಹೋಗಲು ರಸ್ತೆಯಿಲ್ಲದೆ ಪರದಾಡುತ್ತಿರುತ್ತಾರೆ. ಅಂತಹ ರೈತರಿಗಾಗಿ ಸರ್ಕಾರವು ಈ ಯೋಜನೆಯನ್ನು ಜಾರಿಗೆ ತಂದಿದೆ.

Leave a Comment