ರೈತರು ಈಗ ಮನೆಯಲ್ಲಿಯೇ ಕುಳಿತು ತಮ್ಮ ಜಮೀನುಗಳ ಪಹಣಿ, ಆಕಾರಬಂದ್, ಮುಟೇಶನ್ ಹಾಗೂ ಖಾತಾ ಗಳನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಹೌದು, ಜಮೀನಿನ ದಾಖಲೆಗಳನ್ನು ಪಡೆಯಲು ರೈತರು ಈಗ ಎಲ್ಲಿಯೂ ಹೋಗಬೇಕಿಲ್ಲ, ಮನೆಯಲ್ಲಿಯ ಕುಳಿತು ಯಾರ ಸಹಾಯವೂ ಇಲ್ಲದೆ ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಜಮೀನಿನ ಪಹಣಿ, ಆಕಾರಬಂದ್, ಖಾತಾ ಹಾಗೂ ಮುಟೇಶನ್ ಪ್ರತಿಗಳನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಜಮೀನಿನ ಇಷ್ಟೆಲ್ಲಾ ದಾಖಲೆಗಳನ್ನು ಮೊಬೈಲ್ ನಲ್ಲಿ ಹೇಗೆ ಚೆಕ್ ಮಾಡಬೇಕು ಎಂಬ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.
ಜಮೀನಿನ ಪಹಣಿ ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ?
ರೈತರು ತಮ್ಮ ಯಾವುದು ಜಮೀನನ ಪಹಣಿಗಳನ್ನು ಮೊಬೈಲ್ ನಲ್ಲೇ ಚೆಕ್ ಮಾಡಲು ಈ
https://landrecords.karnataka.gov.in/Service2/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ರೈತರು ಜಿಲ್ಲೆ, ತಾಲೂಕು, ಹೋಬಳಿ ಗ್ರಾಮ ಹಾಗೂ ಯಾವ ಜಮೀನಿನ ಸರ್ವೆ ನಂಬರ್ ಪಹಣಿ ಪಡೆದುಕೊಳ್ಳಬೇಕೆಂದುಕೊಂಡಿದ್ದಾರೋ ಆ ಸರ್ವೆ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಬೇಕು. ನಂತರ Sunoc ನಲ್ಲಿ * ಆಯ್ಕೆ ಮಾಡಿಕೊಳ್ಳಬೇಕು. Hissa Number ನಲ್ಲಿ * ಆಯ್ಕೆ ಮಾಡಿಕೊಳ್ಳಬೇಕು. Period ನಲ್ಲಿ2021 2022-2023 ಆಯ್ಕೆ ಮಾಡಿಕೊಳ್ಳಬೇಕು. Year ನಲ್ಲಿ 2022-2023 ಆಯ್ಕೆ ಮಾಡಿಕೊಂಡು Fetch details ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು ನಮೂದಿಸಿ ಸರ್ವೆ ನಂಬರಿನಲ್ಲಿ ಬರುವ ಜಮೀನಿನ ಮಾಲಿಕರ ಹೆಸರು ಕಾಣುತ್ತದೆ. ಅವರ ಹೆಸರಿನಲ್ಲಿ ಎಷ್ಟು ಎಕರೆ ಜಮೀನಿದೆ ಎಂಬುದು ಕಾಣುತ್ತದೆ. ಅಲ್ಲಿ ಕಾಣುವ View ಮೇಲೆ ಕ್ಲಿಕ್ ಮಾಡಿದಾಗ ಪಹಣಿ ಓಪನ್ ಆಗುತ್ತದೆ.
ಜಮೀನಿನ ಆಕಾರಬಂದ್ ಚೆಕ್ ಮಾಡುವುದು ಹೇಗೆ?
ರೈತರು ತಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡಲು ಈ
https://bhoomojini.karnataka.gov.in/service39/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ ಆಯ್ಕೆ ಮಾಡಿಕೊಂಡು ಸರ್ವೆ ನಂಬರ್ ನಮೂದಿಸಬೇಕು . ನಂತರ Sunoc ನಲ್ಲಿ * ಆಯ್ಕೆ ಮಾಡಿಕೊಳ್ಳಬೇಕು. Hissa Number ನಲ್ಲಿ * ಆಯ್ಕೆ ಮಾಡಿಕೊಳ್ಳಬೇಕು. ನಂತರ View Akarband ಮೇಲೆ ಕ್ಲಿಕ್ ಮಾಡಿದರೆ ಸಾಕು, ಆಕಾರಬಂದ್ ಪ್ರತಿ ಓಪನ್ ಆಗುತ್ತದೆ.
ಜಮೀನಿನ ಮುಟೇಶನ್ ಚೆಕ್ ಮಾಡುವುದು ಹೇಗೆ?
ರೈತರು ತಮ್ಮ ಜಮೀನಿನ ಮುಟೇಶನ್ ಚೆಕ್ ಮಾಡಲು ಈ
https://landrecords.karnataka.gov.in/Service11/MR_MutationExtract.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ ಆಯ್ಕೆ ಮಾಡಿಕೊಂಡು ಸರ್ವೆ ನಂಬರ್ ನಮೂದಿಸಿ Fetch Details ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು ನಮೂದಿಸಿದ ಜಮೀನಿನ ಸರ್ವೆ ನಂಬರ್ ಹಾಗೂ ಹಿಸ್ಸಾ ನಂಬರ್ ನಲ್ಲಿ ಜಮೀನಿನ ವರ್ಗಾವಣೆ ಹೇಗಾಗಿದೆ ಎಂಬ ಮಾಹಿತಿ ಇರುತ್ತದೆ. ಅಲ್ಲಿ ನಿಮ್ಮ ಹಿಸ್ಸಾ ನಂಬರ್ ಹಿಂದೆ ಕಾಣುವ Select ಮೇಲೆ ಕ್ಲಿಕ್ ಮಾಡಿ ನಂತರ Preview ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಜಮೀನಿನ ಮುಟೇಶನ್ ಪ್ರತಿ ಓಪನ್ ಆಗುತ್ತದೆ.
ನಿಮ್ಮ ಜಮೀನಿನ ಖಾತಾ ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ?
ರೈತರು ತಮ್ಮ ಜಮೀನಿನ ಖಾತಾ ಮೊಬೈಲ್ ನಲ್ಲಿ ಚೆಕ್ ಮಾಡಲು ಈ
https://landrecords.karnataka.gov.in/service64/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ Search by Survey Number ಮೇಲೆ ಕ್ಲಿಕ್ ಮಾಡಿ, ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ ಆಯ್ಕೆ ಮಾಡಿಕೊಂಡು ಸರ್ವೆ ನಂಬರ್ ಹಾಕಿದ ನಂತರ Go ಮೇಲೆ ಕ್ಲಿಕ್ ಮಾಡಬೇಕು. ನಂತರ ಸರ್ನೋಕ್ ನಲ್ಲಿ ಸ್ಟಾರ್ ಆಯ್ಕೆ ಮಾಡಿ ಹಿಸ್ಸಾ ನಂಬರ್ ಆಯ್ಕೆ ಮಾಡಿಕೊಳ್ಳಬೇಕು. ನಂತರ Get Report ಮೇಲೆ ಕ್ಲಿಕ್ ಮಾಡಿದ ನಂತರ ಖಾತಾ ನಂಬರ್ ಕಾಣುತ್ತದೆ. ಸೆಲೆಕ್ಟ್ ಮೇಲೆ ಕ್ಲಿಕ್ ಮಾಡಿದ ಮೇಲೆ Preview ಮೇಲೆ ಕ್ಲಿಕ್ ಮಾಡಿ ಖಾತಾ ಪ್ರತಿ ಪಡೆದುಕೊಳ್ಳಬಹುದು.