ಪಿಎಂ ಕಿಸಾನ್ 14ನೇ ಕಂತಿನ ಫಲಾನುಭವಿಗಳ ಪಟ್ಟಿ ಬಿಡುಗಡೆ

Written by Ramlinganna

Updated on:

pmkisan 14th installment list ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಹಣ ಈ ತಿಂಗಳ ರೈತರ ಖಾತೆಗೆ ಜಮೆಯಾಗಲಿದೆ. ಲಿಸ್ಟ್ ನಲ್ಲಿ ನಿಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು, ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಗಳ ಜುಲೈ ತಿಂಗಳಲ್ಲಿನಲ್ಲಿಯೇ ರೈತರ ಖಾತೆಗೆ ಜಮೆ ಮಾಡಲಾಗುವುದು. ಏಕೆಂದರೆ ಇಕೆವೈಸಿ ಮಾಡಿಸಲು ಜೂನ್ 30 ಕೊನೆಯ ದಿನವಾಗಿತ್ತು.ಈಗ ಅವಧಿ ಮುಗಿದಿರುವುದರಿಂದ ಯಾವ ರೈತರಿಗೆ ಜಮೆ ಯಾಗುತ್ತದೆ ? ಯಾವ ರೈತರಿಗೆ ಜಮೆಯಾಗುವುದಿಲ್ಲ? ಎಂಬುದನ್ನು ಒಂದೇ ನಿಮಿಷದಲ್ಲಿ ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

pmkisan 14th installment list ಲಿಸ್ಟ್ ನಲ್ಲಿ ನಿಮ್ಮ ಹೆಸರಿದೆಯೇ? ಇಲ್ಲೇ ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಲಿಸ್ಟ್ ನಲ್ಲಿ ನಿಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡಲು ಈ

https://pmkisan.gov.in/Rpt_BeneficiaryStatus_pub.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಬೆನಿಫಿಶಿಯರಿ ಲಿಸ್ಟ್ ಪೇಜ್ ಓಪನ್ ಆಗುತ್ತದೆ. ಅಲ್ಲಿ ಕರ್ನಾಟಕ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ಇದಾದನಂತರ ನಿಮ್ಮ ತಾಲೂಕು ಆಯ್ಕೆ ಮಾಡಿಕೊಂಡು ಬ್ಲಾಕ್ ನಲ್ಲಿಯೂ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಊರು ಆಯ್ಕೆ ಮಾಡಿಕೊಂಡು ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಿದಾಗ ನಿಮ್ಮ ಊರಿನಲ್ಲಿ ಯಾವ ಯಾವ ರೈತರು ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿದ್ದಾರೆ ಅವರ ಹೆಸರು ಕಾಣಿಸುತ್ತದೆ. ಅಲ್ಲಿ ನಿಮ್ಮ ಹೆಸರು ಯಾವ ಅಕ್ಷರದಿಂದ ಆರಂಭವಾಗುತ್ತದೆ ಎಂಬುದರ ಪ್ರಕಾರ ಕೆಳಗಡೆ ಮುಂದಿನ ನಂಬರ್ ಕ್ಲಿಕ್ ಮಾಡಿ ಚೆಕ್ ಮಾಡಿಕೊಳ್ಳಬೇಕು.

ಲಿಸ್ಟ್ ನಲ್ಲಿದ್ದ ರೈತರೆಲ್ಲರೂ ಪಿಎಂ ಕಿಸಾನ್ ಹಣ ಜಮೆಯಾಗುತ್ತದೆಯೇ?

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಲಿಸ್ಟ್ ನಲ್ಲಿರುವ ರೆತರೆಲ್ಲರಿಗೂ ಮುಂದಿನ 14ನೇ ಕಂತಿನ ಹಣ ಜಮೆಯಾಗುತ್ತದೆ ಎಂದು ಹೇಳಲಿಕ್ಕಾಗುವುದಿಲ್ಲ. ಏಕೆಂದರೆ  ರೈತರಿಗೆ ಇಕೆವೈಸಿ ಮಾಡಿಸುವುದು ಕಡ್ಡಾಯಗೊಳಿಸಲಾಗಿತ್ತು. ಇದಕ್ಕೆ ಜೂನ್ 30 ಕೊನೆಯ ದಿನಾಂಕವಾಗಿತ್ತು. ಈ ದಿನಾಂಕದೊಳಗೆ ಇಕೆವೈಸಿ ಮಾಡಿಸಿದ್ದರೆ ಅವರಿಗೆ ಮುಂದಿನ ಕಂತು ಜಮೆಯಾಗುತ್ತದೆ.

ಇದನ್ನೂ ಓದಿ : ನಿಮಗೇಕೆ ಪಿಎಂ ಕಿಸಾನ್ ಹಣ ಜಮೆಯಾಗುತ್ತಿಲ್ಲ? ಮೊಬೈಲ್ ನಲ್ಲೇ ಚೆಕ್ ಮಾಡಿ

ಇದರೊಂದಿಗೆ ತಮ್ಮ ಜಮೀನಿನ ಪಹಣಿ (ಉತಾರ), ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್ ನಲ್ಲಿ ನಿಮ್ಮ ಹೆಸರು ಒಂದೇ ರೀತಿಯಾಗಿರಬೇಕು. ಹೆಸರು ತಂದೆಯ ಹೆಸರು ವ್ಯತ್ಯಾಸವಾಗಿದ್ದರೆ ಜಮೆಯಾಗುವ ಸಾಧ್ಯತೆ ಕಡಿಮೆ ಇರುತ್ತದೆ. ಹಾಗಾಗಿ ನೀವು ಒಮ್ಮೆ ನಿಮ್ಮಲ್ಲಿರುವ ದಾಖಲೆಗಳನ್ನು ಪರಿಶೀಲಿಸಿಕೊಳ್ಳಬೇಕು.  ಹೆಸರಿನಲ್ಲಿ ಏನಾದರೂ ವ್ಯತ್ಯಾಸವಿದ್ದರೆ ಸರಿಪಡಿಸಿಕೊಳ್ಳುವುದು ಅತೀ ಮುಖ್ಯವಾಗಿದೆ. ಹೆಸರಿನಲ್ಲಿ ಏನಾದರೂ ವ್ಯತ್ಯಾಸವಿದ್ದರೆ ಮುಂದಿನ ಕಂತುಜಮೆಯಾಗಲು ಯಾವುದರಲ್ಲಿ ಹೆಸರು ತಪ್ಪಾಗಿದೆ ಎಂಬುದನ್ನು ಸರಿಪಡಿಸಿಕೊಳ್ಳಬೇಕು.

ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಹಣ ಯಾವಾಗ ಜಮೆಯಾಗಲಿದೆ?

ಪಿಎಂ ಕಿಸಾನ್ ಯೋಜನೆಯ 13ನೇ ಕಂತು ಫೆಬ್ರವರಿ 27 ರಂದು ಬಿಡುಗಡೆಯಾಗಿತ್ತು  ಈ ಯೋಜನೆಯ ಹಣ ಪ್ರತಿ ನಾಲ್ಕು ತಿಂಗಳಿಗೊಮ್ಮೆ ಜಮೆಯಾಗುತ್ತದೆ.  ಜೂನ್ 27ಕ್ಕೆ ನಾಲ್ಕು ತಿಂಗಳ ಪೂರ್ಣಗೊಳ್ಳುತ್ತದೆ. ಹಾಗಾಗಿ ಜುಲೈ ತಿಂಗಳಲ್ಲಿ 14ನೇ ಕಂತಿನ ಹಣ ಬಿಡುಗಡೆಯಾಗಲಿದೆ. ಯಾವ ದಿನಾಂಕದಂದು ಬಿಡುಗಡೆ ಮಾಡಲಾಗುವುದೆಂಬುದನ್ನು ಕೇಂದ್ರ ಸರ್ಕಾರದ ಕೃಷಿ ಇಲಾಖೆಯಿಂದ ಯಾವುದೇ ಅದಿಸೂಚನೆ ಹೊರಡಿಸಿಲ್ಲ.  ಹಿಂದಿನ ಕಂತುಗಳ ಪ್ರಕಾರ ಜುಲೈ ತಿಂಗಳ ಅವಧಿಯಲ್ಲಿಯೇ 14ನೇ ಕಂತಿನ ಹಣ ಜಮೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Leave a Comment