ಪಿಎಂ ಕಿಸಾನ್ 12 ಕಂತಿನ ಫಲಾನುಭವಿ ಪಟ್ಟಿ ಬಿಡುಗಡೆ

Written by Ramlinganna

Updated on:

12th installment of PM Kisan ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ಇನ್ನೂ ಮುಂದೆ ಮೊಬೈಲ್ ನಲ್ಲೇ ತಮ್ಮ ಹೆಸರಿರುವುದನ್ನು ಚೆಕ್ ಮಾಡಬಹುದು.  ರೈತರ ಬಳಿ ಸ್ಮಾರ್ಟ್ ಫೋನ್ ಇದ್ದರೆ ಸಾಕು, ಅತೀ ಸುಲಭವಾಗಿ ಕ್ಷಣ ಮಾತ್ರದಲ್ಲಿ ಪಿಎಂ ಕಿಸಾನ್ ಯೋಜನೆಯ 12 ನೇ ಕಂತಿನ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ… ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿಸುತ್ತಿರುವವರು ನೋಂದಣಿ ಮಾಡಿಸಿದ್ದರಿಂದ ಇಂತಹರನ್ನುತಪ್ಪಿಸಲು ಇಕೆವೈಸಿ ಕಡ್ಡಾಯಗೊಳಿಸಲಾಗಿತ್ತು. ನಿಜವಾದ ಫಲಾನುಭವಿಗಳಿಗೆ ಪಿಎಂ ಕಿಸಾನ್ ಯೋಜನೆಯ ಸೌಲಭ್ಯ ಸಿಗಲೆಂದು ಸರ್ಕಾರವು ರೈತರಿಗೆ ಇಕವೈಸಿ ಮಾಡಿಸುವುದು ಕಡ್ಡಾಯಗೊಳಿಸಲಾಗಿತ್ತು. ಜುಲೈ 31ಕ್ಕೆ ಇಕೆವೈಸಿ ಅವಧಿಯೂ ಮುಗಿದಿದ್ದರಿಂದ ಈಗ 12ನೇ ಕಂತಿನ ಫಲಾನುಭವಿಗಳ ಪಟ್ಟಿಯಲ್ಲಿ ತಮ್ಮ ಹೆಸರಿರುವುದನ್ನು ಚೆಕ್ ಮಾಡಬಹುದು.

12th installment of PM Kisan ಪಿಎಂ ಕಿಸಾನ್ 12ನೇ ಕಂತಿನ ಫಲಾನಭವಿ ಪಟ್ಟಿಯಲ್ಲಿ ಹೆಸರು ಚೆಕ್ ಮಾಡುವುದು ಹೇಗೆ?

ಪಿಎಂ ಕಿಸಾನ್ ಯೋಜನೆಯ 12ನೇ ಕಂತಿನ ಫಲಾನುಭವಿ ಪಟ್ಟಿಯಲ್ಲಿ ತಮ್ಮ ಹೆಸರಿರುವುದನ್ನು ಚೆಕ್ ಮಾಡಲು ಈ

https://pmkisan.gov.in/Rpt_BeneficiaryStatus_pub.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ.  ಅಲ್ಲಿ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿ ನೋಡಬಹುದು. ಮೊದಲು ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ಕರ್ನಾಟಕದವರಾಗಿದ್ದರಿಂದ ಕರ್ನಾಟಕ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು.

ನಿಮ್ಮ ಜಿಲ್ಲೆ ಆಯ್ಕೆಮಾಡಿಕೊಳ್ಳಬೇಕು. ಸಬ್ ಡಿಸ್ಟ್ರಿಕ್ಟ್ ನಲ್ಲಿ ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಬ್ಲಾಕ್ ನಲ್ಲಿ ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ವಿಲೇಜ್ ನಲ್ಲಿ ನಿಮ್ಮ ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ನಿಮ್ಮ ಗ್ರಾಮದ ಹೆಸರು ಇರದಿದ್ದರೆ ನಿಮ್ಮಗ್ರಾಮ ಪಂಚಾಯತ್ ಆಯ್ಕೆ ಮಾಡಿಕೊಳ್ಳಬೇಕು. ಇದೆಲ್ಲಾ ಆದ ಮೇಲೆ ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.

ಆಗ ನೀವು ಆಯ್ಕೆ ಮಾಡಿಕೊಂಡ ಗ್ರಾಮದಲ್ಲಿರುವ ಫಲಾನುಭವಿಗಳ ಪಟ್ಟಿ ತೆರೆದುಕೊಳ್ಳುತ್ತದೆ.  ಹೆಸರು, ತಂದೆಯ ಹೆಸರು, ಊರು ಇರುವ ಪಟ್ಟಿ ಕಾಣುತ್ತದೆ.ನಿಮ್ಮ ಹೆಸರು ಯಾವ ಅಕ್ಷರದಿಂದ ಆರಂಭವಾಗುತ್ತದೆಯೋ ಎಂಬುದನ್ನು ನೋಡಿಕೊಂಡು ಕೆಳಗಡೆ 1,2,3,4,5 ಹೀಗೆ ಪೇಜ್ ಗಳಿರುತ್ತವೆ. ನಿಮ್ಮ ಹೆಸರು ಯಾವ ಅಕ್ಷರದಿಂದ ಆರಂಭವಾಗುತ್ತದೆ ಎಂಬುದನ್ನು ಚೆಕ್ ಮಾಡಿಕೊಂಡು ನಿಮ್ಮಹೆಸರು ಇರುವುದನ್ನು ಚೆಕ್ ಮಾಡಬಹುದು. ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಪಿಎಂ ಕಿಸಾನ್ ಯೋಜನೆಯ 12ನೇ ಕಂತಿನ ಹಣ ಜಮೆಯಾಗುವ ಸಾಧ್ಯತೆಯಿದೆ.

ಪಿಎಂ ಕಿಸಾನ್ ಯೋಜನೆಯ 12ನೇ ಕಂತಿನ ಹಣ ಯಾವಾಗ ಜಮೆಯಾಗುತ್ತದೆ?

ಪಿಎಂ ಕಿಸಾನ್ ಯೋಜನೆಯ 12ನೇ ಕಂತಿನ ಹಣ ಆಗಸ್ಟ್ ತಿಂಗಳ ಕೊನೆಯ ವಾರ ಅಥವಾ ಸೆಪ್ಟೆಂಬರ್ ತಿಂಗಳ ಮೊದಲ ವಾರ ಜಮೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಪಿಎಂ ಕಿಸಾನ್ ಯೋಜನೆಯ ಹಣ ಪ್ರತಿ ವರ್ಷ ಮೂರು ಕಂತುಗಳಲ್ಲಿ ಜಮೆಯಾಗುತ್ತದೆ.  ಮೊದಲ ಕಂತಿನ ಹಣ ಏಪ್ರೀಲ್ – ಜುಲೈ ತಿಂಗಳ ಮಧ್ಯದಲ್ಲಿ ಜಮೆಯಾಗುತ್ತದೆ.

ಇದನ್ನೂ ಓದಿ ನಿಮ್ಮ ಜಮೀನಿನ ಅಕ್ಕಪಕ್ಕ ಯಾರಿಗೆಷ್ಟು ಜಮೀನಿದೆ? ಚೆಕ್ ಮಾಡಿ

ಎರಡನೇ ಕಂತಿನ ಹಣ ಆಗಸ್ಟ್ –ನವೆಂಬರ್ ತಿಂಗಳ ಮಧ್ಯದಲ್ಲಿ ಜಮೆಯಾಗುತ್ತದೆ. ಮೂರನೇ ಕಂತಿನ ಹಣ ಡಿಸೆಂಬರ್ – ಮಾರ್ಚ್ ತಿಂಗಳ ಮಧ್ಯದಲ್ಲಿ ಜಮೆಯಾಗುತ್ತದೆ. ಪಿಎಂ ಕಿಸಾನ್ ಯೋಜನೆಯ11ನೇ ಕಂತಿನ ಹಣ ಮೇ 31 ರಂದು ಬಿಡುಗಡೆ ಮಾಡಿದ್ದರಿಂದ ಆಗಸ್ಟ್ ಕೊನೆಯ ವಾರ ಅಥವಾ ಸೆಪ್ಟೆಂಬರ್ ತಿಂಗಳ ಮೊದಲ ವಾರ ಜಮೆಯಾಗುವ ಸಾಧ್ಯತೆಯಿದೆ. ಹಾಗಾಗಿ 12ನೇ ಕಂತಿನ ಹಣ ಯಾವ ರೈತರಿಗೆ ಜಮೆಯಾಗುತ್ತೋ ಯಾವ ರೈತರಿಗೆ ಜಮೆಯಾಗುವುದಿಲ್ಲ ಎಂಬುದು ಬಿಡುಗಡೆ ದಿನ ಗೊತ್ತಾಗಲಿದೆ.

Leave a Comment