ಪಿಎಂ ಕಿಸಾನ್ ಗ್ರಾಮವಾರು ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

Written by Ramlinganna

Updated on:

village wise beneficiaries list ಪಿಎಂ ಕಿಸಾನ್ ಯೋಜನೆಯ 12ನೇ ಕಂತಿನ ಫಲಾನುಭವಿ ಗ್ರಾಮವಾರು ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ರೈತರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಈ ಪಟ್ಟಿಯನ್ನು ನೋಡಲು ರೈತರು ಎಲ್ಲಿಯೂ ಹೋಗಬೇಕಿಲ್ಲ. ತಮ್ಮ ಬಳಿಯಿರುವ ಸ್ಮಾರ್ಟ್ ಫೋನ್ ನಲ್ಲಿಯೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.

ಪಿಎಂ ಕಿಸಾನ್ ಯೋಜನೆಯ 12ನೇ ಕಂತಿನ ಜಮೆಗೆ ಈಗ ಕ್ಷಣಗಣನೆ ಶುರುವಾಗಿದೆ. ಏಕೆಂದರೆ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಇಕೆವೈಸಿ ಮಾಡಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ. ಇಕೆವೈಸಿ ಪ್ರಕ್ರಿಯೆ ಪೂರ್ಣಗೊಳ್ಳುತ್ತಿದ್ದಂತೆ ಮುಂದಿನ ತಿಂಗಳು ಸೆಪ್ಟೆಂಬರ್  ತಿಂಗಳಲ್ಲಿ ರೈತರ ಖಾತೆಗೆ ಪಿಎಂ ಕಿಸಾನ್ ಯೋಜನೆಯ 12ನೇ ಕಂತಿನ ಹಣ ಜಮೆ ಮಾಡುವ ಸಾಧ್ಯತೆಯಿದೆ.

ಪಿಎಂ ಕಿಸಾನ್ ಯೋಜನೆಯ12ನೇ ಕಂತಿನ ಗ್ರಾಮವಾರು ಫಲಾನುಭವಿ ಪಟ್ಟಿಯಲ್ಲಿ ರೈತರು ತಮ್ಮ ಹೆಸರಿರುವುದನ್ನು ಚೆಕ್ ಮಾಡಲು ಈ

https://pmkisan.gov.in/Rpt_BeneficiaryStatus_pub.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ರಾಜ್ಯ, ಜಿಲ್ಲೆ, ತಾಲೂಕು, ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು, ಆಗ ಆ ಗ್ರಾಮದಲ್ಲಿ ಯಾವ ಯಾವ ರೈತರು ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿದ್ದಾರೆ ಎಂಬ ಪಟ್ಟಿ ತೆರೆದುಕೊಳ್ಳುತ್ತದೆ. ಅಲ್ಲಿ ಅಲ್ಪಾಬೆಟಿಕ್ ಆರ್ಡರ್ ನಲ್ಲಿ ಹೆಸರು ಎ ದಿಂದ ಆರಂಭವಾಗುತ್ತದೆ.

ನಿಮ್ಮ ಹೆಸರು ಯಾವ ಅಕ್ಷರದಿಂದ ಆರಂಭವಾಗುತ್ತದೆ ಎಂಬುದನ್ನು ನೋಡಿಕೊಂಡು ಹೆಸರು ಹುಡುಕಬಹುದು. ಆದರೆ ಇಲ್ಲಿ ರೈತರು ಒಂದು ಮಾತು ನೆನಪಿಟ್ಟುಕೊಳ್ಳಬೇಕು. ಗ್ರಾಮವಾರು ಪಟ್ಟಿಯಲ್ಲಿದ್ದ ಎಲ್ಲಾ ರೈತರಿಗೆ ಪಿಎಂ ಕಿಸಾನ್ ಹಣ ಜಮೆಯಾಗುತ್ತದೆ ಎಂಬುದನ್ನು ಹೇಳಲಿಕ್ಕಾಗುವುದಿಲ್ಲ. ಏಕೆಂದರೆ ಪಿಎಂ ಕಿಸಾನ್ ಹಣ ಪಡೆಯಲು ಇಕೆವೈಸಿ ಕಡ್ಡಾಯಗೊಳಿಸಿದ್ದರಿಂದ 12ನೇ ಕಂತಿನ ಪಟ್ಟಿಯಿಂದ ಕೆಲವು ರೈತರ ಹೆಸರುಗಳನ್ನು ಕೈಬಿಡುವ ಸಾಧ್ಯತೆಯಿದೆ. ಇಕೆವೈಸಿ ಪೂರ್ಣಗೊಳಿಸಿದ ರೈತರಿಗೆ ಮಾತ್ರ ಇನ್ನೂಮುಂದೆ ಪಿಎಂ ಕಿಸಾನ್ ಹಣ ಜಮೆಯಾಗಲಿದೆ.

village wise beneficiaries list ನಿಮ್ಮ ಹೆಸರು ಇಕೆವೈಸಿ ಆಗಿರುವುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವುದು ಹೇಗೆ?

ರೈತರು ಇಕೆವೈಸಿ ಆಗಿರಿವುದನ್ನು ಚೆಕ್ ಮಾಡಲು ಗೂಗಲ್ ನಲ್ಲೇ PM kisan ಎಂದು ಟೈಪ್ ಮಾಡಬೇಕು.ನಂತರ ಕೇಂದ್ರ ಸರ್ಕಾರದ ಪಿಎಂ ಪೇಜ್ ಓಪನ್ ಮಾಡಿಕೊಳ್ಳಬೇಕು. ಅಲ್ಲಿ ಮುಖಪುಟದಲ್ಲಿ ಫಾರ್ಮರ್ ಕಾರ್ನರ್ ಕೆಳಗಡೆ ಕಾಣುವ  ಇಕೆವೈಸಿ ನ್ಯೂ ಮೇಲೆ ಕ್ಲಿಕ್ ಮಾಡಬೇಕು. ಓಟಿಪಿ ಬೇಸ್ಡ್ ಇಕೆವೈಸಿ ಪೇಜ್ ನಲ್ಲಿ ನಿಮ್ಮ ಆಧಾರ್ ಕಾರ್ಡ್ ನಮೂದಿಸಿದ ನಂತರ ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಬೇಕು. ಇಕೆವೈಸಿ ಮಾಡಿಸಿದ್ದರೆ ಆಗ ಇಕೆವೈಸಿ ಇಸ್ ಆಲರಡಿ ಡನ್ ಎಂಬ ಮೆಸೇಜ್ ಪರದೆಯ ಮೇಲೆ ಕಾಣುತ್ತದೆ.

ಇದನ್ನೂ ಓದಿ : ಈ ರೈತರಿಗೆ ಮಾತ್ರ ಬೆಳೆ ವಿಮೆ ಪರಿಹಾರ ಮತ್ತು ಬೆಳೆ ಹಾನಿ ಪರಿಹಾರ ಜಮೆ: ಇಲ್ಲಿದೆ ಸಂಪೂರ್ಣ ಮಾಹಿತಿ

ಒಂದು ವೇಳೆ ನೀವು ಇಕೆವಾಸಿ ಮಾಡಿಸದೆ ಇದ್ದರೆ ನಿಮ್ಮ ಆಧಾರ್ ಕಾರ್ಡ್ ನಮೂದಿಸಿದ ನಂತರ ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಿದಾಗ ನಿಮ್ಮ ಮೊಬೈಲ್ ನಂಬರ್ ನಮೂದಿಸಿ ಎಂದು ಕೇಳಲಾಗುತ್ತದೆ. ಮೊಬೈಲ್ ನಂಬರ್ ನಮೂದಿಸಿದ ನಿಮ್ಮಮೊಬೈಲಿಗೆ ಓಟಿಪಿ ಬರುತ್ತದೆ. ಓಟಿಪಿ ನಮೂದಿಸಿ ಇಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಹಹುದು.

ಪಿಎಂ ಕಿಸಾನ್ ಹಣ ಯಾವಾಗ ಜಮೆಯಾಗುತ್ತದೆ?

ಪಿಎಂ ಕಿಸಾನ್ ಹಣ ಬಿಡುಗಡೆಗೆ ಕ್ಷಣಗಣನೆ ಶುರವಾಗಿದೆ. ಸೆಪ್ಟಂಬರ್ ತಿಂಗಳಲ್ಲಿ ದೇಶದ ಎಲ್ಲಾ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಖಾತೆಗೆ ಜಮೆ ಮಾಡುವ ಸಾಧ್ಯತೆಯಿದೆ.  ಒಂದು ವೇಳೆ ನೀವು ಇಕೆವೈಸಿ ಮಾಡಿಸಿದಿದ್ದರೆ ಆಗಸ್ಟ್ 31 ರೊಳಗಾಗಿ ಇಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಬಹುದು. ರೈತರು ಇಕೆವೈಸಿ ಮಾಡಿಸಲು ಕೇವಲ ಮೂರು ದಿನಗಳ ಬಾಕಿ ಇದೆ. ಹಾಗಾಗಿ ಇಕೆವೈಸಿ ಮಾಡಿಸಿಲ್ಲವೆಂದರೆ ಕೂಡಲೇ ಇಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಿ ಪಿಎಂ ಕಿಸಾನ್ ಯೋಜನೆಯ ಲಾಭ ಪಡೆದುಕೊಳ್ಳಬಹುದು.

Leave a Comment