PM kisan status check here

Written by Ramlinganna

Updated on:

PM kisan status check here ಬೆಳೆ ಹಾನಿ, ಬೆಳೆ ವಿಮೆ ಹಾಗೂ ಪಿಎಂ ಕಿಸಾನ್ ಯೋಜನೆಯ ಸ್ಟೇಟಸ್ ನ್ನು ರೈತರು ಒಂದೇ ನಿಮಿಷದಲ್ಲಿ ಮೊಬೈಲ್ ನಲ್ಲಿ ಚೆಕ್ ಮಾಡಬಹುದು.

ಹೌದು,  ರೈತರು ಯಾರ ಸಹಾಯವೂ ಇಲ್ಲದೆ ಕೇವಲ ಒಂದೇ ನಿಮಿಷದಲ್ಲಿ ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

PM kisan status check here ಪಿಎಂ ಕಿಸಾನ್ ಸ್ಟೇಟಸ್ ಇಲ್ಲಿ ಚೆಕ್ ಮಾಡಿ

ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡಲು ಈ

https://pmkisan.gov.in/BeneficiaryStatus_New.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ಆಗ ನಿಮಗೆ ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡುವ ಪೇಜ್ ಓಪನ್ ಆಗುತ್ತದೆ. ಅಲ್ಲಿ Enter Registration No ನಲ್ಲಿ ರೈತರು  ಪಿಎಂ ಕಿಸಾನ್ ಯೋಜನೆಯ ನೋಂದಣಿ ಸಂಖ್ಯೆ ನಮೂದಿಸಬೇಕು. ನಂತರ ಅಲ್ಲಿ ಕಾಣುವ  Captcha Code ಹಾಕಿ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಮೊಬೈಲಿಗೆ ಓಟಿಪಿ ಸಂದೇಶ ಬರುತ್ತದೆ. ಆ ಓಟಿಪಿ ನಮೂದಿಸಿ ಪಿಎಂ ಕಿಸಾನ್ ಯೋಜನೆಯ ಸ್ಟೇಟಸ್ ಚೆಕ್ ಮಾಡಬಹುದು.

ಅಥವಾ ಗೂಗಲ್ ನಲ್ವಲಿ ಪಿಎಂ ಕಿಸಾನ್ ಸ್ಟೇಟಸ್ ಎಂದು ಟೈಪ್ ಮಾಡಿದಾಗ ಪಿಎಂ ಕಿಸಾನ್ ಪೆಜ್ ಓಪನ್ ಆಗುತ್ತದೆ. ಅಲ್ಲಿ ನೀವು ಪಿಎಂ ಕಿಸಾನ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕು.

ಅಲ್ಲಿ ನಿಮ್ಮ ಮೊಬೈಲ್ ನಂಬರ್   ನಮೂದಿಸಿ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ಗೆಟ್ ಮೊಬೈಲ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಆ ಓಟಿಪಿಯನ್ನು ನಮೂದಿಸಿ ನಿಮ್ಮ ಪಿಎಂ ಕಿಸಾನ್ ನೋಂದಣಿ ಸಂಖ್ಯೆಯನ್ನು ಪಡೆದುಕೊಳ್ಳಬಹುದು. ಆ ನೋಂದಣಿ ಸಂಖ್ಯೆಯಿಂದ ಸ್ಟೇಟಸ್ ಚೆಕ್ ಮಾಡಬಹುದು.

ಇದನ್ನೂ ಓದಿ Pahani Aadhaarcard link ಮೊಬೈಲ್ ನಲ್ಲಿ ಹೀಗೆ ಮಾಡಿ

ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಈ ಎಲ್ಲಾ ಮಾಹಿತಿಗಳನ್ನು ರೈತರು  ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು.

ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ಪ್ರಸಕ್ತ ಸಾಲಿನಲ್ಲಿ 2023-24ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳೆ ವಿಮೆ ಪಾವತಿಸಿದ ರೈತರು ತಮ್ಮ ಅರ್ಜಿಯ ಸ್ಟೇಟಸನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಬೆಳೆ ವಿಮೆ ಅರ್ಜಿಯ ಸ್ಟೇಟಸ್ ಚೆಕ್ ಮಾಡಲು ಈ

https://samrakshane.karnataka.gov.in/publichome.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಫಾರ್ಮರ್ಸ್ ಕೆಳಗಡೆ ಕಾಣುವ ಚೆಕ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕು.ಅಲ್ಲಿ ಮೊಬೈಲ್ ನಂಬರ್ ಆಯ್ಕೆ ಮಾಡಿಕೊಳ್ಳಬೇಕು. ನಿಮ್ಮ ಮೊಬೈಲ್ ನಂಬರ್ ನಮೂದಿಸಿ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ನ್ನು ನಮೂದಿಸಿ ಸರ್ಚ್ ಮೇಲೆ ಕ್ಲಿಕ್ ಮಾಡಿ ಬೆಳೆ ವಿಮೆಯ ಸ್ಟೇಟಸ್ ಚೆಕ್ ಮಾಡಬಹುದು.

ಬೆಳೆ ಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ಕಳೆದ ಮೂರು ವರ್ಷದಲ್ಲಿ ಬೆಳೆ ಹಾನಿ ಯಾವ ಯಾವ ರೈತರಿಗೆ ಎಷ್ಟೆಷ್ಟು ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ

https://landrecords.karnataka.gov.in/PariharaPayment/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲ್ಲಿ ಆಧಾರ್ ಸಂಖ್ಯೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಫ್ಲಡ್ ಹಾಗೂ ಕಳೆದ ವರ್ಷ ಆಯ್ಕೆ ಮಾಡಿಕೊಳ್ಳಬೇಕು. ನಂತರ ಆಧಾರ್ ಸಂಖ್ಯೆ ನಮೂದಿಸಿ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ನ್ನು ನಮೂದಿಸಿ ವಿವರಗಳನ್ನು ಪಡೆಯಲು ಮೇಲೆ ಕ್ಲಿಕ್ ಮಾಡಿದರೆ ಸಾಕು, ನಿಮಗೆ ಯಾವ ಬೆಳೆಗೆ ಯಾವ ಸರ್ವೆ ನಂಬರಿಗೆ ಎಷ್ಟು ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಬಹುದು.

Leave a Comment