ರೇಷನ್ ಕಾರ್ಡ್ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲೇ ಚೆಕ್ ಮಾಡಿ

Written by Ramlinganna

Updated on:

Check your Ration card status ಆಧಾರ್ ಕಾರ್ಡ್, ಎಲೆಕ್ಷನ್ ಕಾರ್ಡ್ ನಂತೆ ರೇಷನ್ ಕಾರ್ಡ್ ಸ್ಟೇಟಸನ್ನ ಸಹ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು  ತಮ್ಮ ಹತ್ತಿರ ಸ್ಮಾರ್ಟ್ ಫೋನ್ ಇದ್ದರೆ ಸಾಕು, ಕ್ಷಣಾರ್ಧದಲ್ಲಿ ರೇಷನ್ ಕಾರ್ಡ್ ಸ್ಟೇಟಸ್ ಅಂದರೆ ನಿಮ್ಮ ರೇಷನ್ ಕಾರ್ಡ್ ಆ್ಯಕ್ಟಿವ್ ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಬಹುದು. ಇದರೊಂದಿಗೆ ನೀವು ಪ್ರತಿ ತಿಂಗಳು ತೆಗೆದುಕೊಳ್ಳುವ ರೇಷನ್ ಸ್ಟೇಟಸ್ ಸಹ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ಸಂಪೂರ್ಣ ಮಾಹಿತಿ.

https://ahara.kar.nic.in/Home/EServices

ಈ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಬಲಗಡೆ ವಿಧಾನ, ಈ ಪಡಿತರ ಚೀಟಿ, ಇ-ಸ್ಥಿತಿ, ಇ ನ್ಯಾಯಾಲಯ ಅಂಗಡಿ, ಎಸ್.ಎಂಎಸ್ ಸೇವೆ ಹೀಗೆ ವಿವಿಧ ಸೇವೆಗಳ ಪಟ್ಟಿ ಕಾಣುತ್ತದೆ. ಅಲ್ಲಿ ಇ ಪಡಿತರ ಚೀಟಿ ಮೇಲೆ ಕ್ಲಿಕ್ ಮಾಡಬೇಕು.  ನಂತರ ಅಲ್ಲಿ ಕೆಳಗಡೆ ಕಾಣುವ ಹಳ್ಳಿ ಪಟ್ಟಿ ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಗ್ರಾಮ ಪಂಚಾಯತ್ ಆಯ್ಕೆ ಮಾಡಿಕೊಳ್ಳಬೇಕು.

ಗ್ರಾಮ ಆಯ್ಕೆ ಮಾಡಿಕೊಂಡು ಗೋ ಮೇಲೆ ಕ್ಲಿಕ್ ಮಾಡಬೇಕು.  ಆಗ ನಿಮ್ಮೂರಿನಲ್ಲಿ ಯಾರ ಯಾರ ಹೆಸರಿನಲ್ಲಿ ರೇಷನ್ ಕಾರ್ಡ್ ಇದೆ ಎಂಬ ಪಟ್ಟಿಕಾಣುತ್ತದೆ. ರೇಷನ್ ಕಾರ್ಡ್ ನಂಬರ್, ಹೆಸರು, ವಿಳಾ ಹಾಗೂ ರೇಷನ್ ಕಾರ್ಡ್ ವಿಧ ಬಿಪಿಎಲ್ ಕಾರ್ಡ್ ಅಥವಾ ಎಪಿಎಲ್ ಕಾರ್ಡ್ ಹಾಗೂ ಕುಟುಂಬದಲ್ಲಿ ಎಷ್ಟು ಜನರಿದ್ದಾರೆ ಎಂಬ ಮಾಹಿತಿ ಕಾಣುತ್ತದೆ.

ಕೆಳಗಡೆ 1, 2, 3, 4, 5 ಹೀಗೆ ಪೇಜ್ ಗಳಿರುತ್ತವೆ. ನಿಮ್ಮ ಹೆಸರಿದೆಯೋ ಇಲ್ಲವೋ ಎಂಬದನ್ನು ಚೆಕ್ ಮಾಡಲು ಮುಂದಿನ ಪೇಜ್ ಮೇಲೆ  ಕ್ಲಿಕ್ ಮಾಡುತ್ತಾ ಹೋಗಬೇಕು. ನಿಮ್ಮಹೆಸರು ಇದ್ದರೆ ರೇಷನ್ ಕಾರ್ಡ್ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೆಂದರ್ಥ. ಅಲ್ಲಿ ನಿಮ್ಮ ಹೆಸರಿನ ಹಿಂದಿರುವ ನಂಬರ್ ನಿಮ್ಮ ರೇಷನ್ ಕಾರ್ಡ್ ನಂಬರ್ ಆಗಿರುತ್ತದೆ. ಅದನ್ನು ಬರೆದಿಟ್ಟುಕೊಳ್ಳಬೇಕು. ಅಥವಾ ಕಾಪಿ ಮಾಡಿಕೊಳ್ಳಬೇಕು.

ಇದನ್ನೂ ಓದಿ : ಮೊಬೈಲ್ ನಲ್ಲೇ ಚೆಕ್ ಮಾಡಿ ನಿಮ್ಮ ಪಿಎಂ ಕಿಸಾನ್ ಇಕೆವೈಸಿ ಸ್ಟೇಟಸ್

ನಿಮ್ಮ ಪಡಿತರ ಚೀಟಿ ಆ್ಯಕ್ಟಿವ್ ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು  ಪಡಿತರ ಚೀಟಿ ತೋರಿಸು ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು  ಪೇಜ್ ತೆರೆದುಕೊಳ್ಳುತ್ತದೆ. ನೀವು ಬರೆದಿಟ್ಟುಕೊಂಡ ನಿಮ್ಮ ರೇಷನ್ ಕಾರ್ಡ್ ನಮೂದಿಸಬೇಕು. ನಂತರ ಗೋ ಮೇಲೆ ಕ್ಲಿಕ್ ಮಾಡಬೇಕು. ಸದಸ್ಯರನ್ನು ಆಯ್ಕೆ ಮಾಡಿ ಬಾಕ್ಸ್ ನಲ್ಲಿ ನಿಮ್ಮ ಕುಟುಂಬದ ಸದಸ್ಯರ ಹೆಸರು ಹಾಗೂ ಹೆಸರು ಆ್ಯಕ್ಟಿವ್ ಇದೆಯೋ ಇಲ್ಲವೋ ಎಂಬುದು ಕಾಣುತ್ತದೆ.

Check your Ration card status ರೇಷನ್ ಕಾರ್ಡ್ ಮೊಬೈಲ್ ನಲ್ಲೇ ನೋಡಬೇಕೇ?

ಮುಖಪುಟದಲ್ಲಿ ಬಲಗಡೆ ಕಾಣುವ ಇ ಸ್ಥಿತಿ ಮೇಲೆ ಕ್ಲಿಕ್ ಮಾಡಬೇಕು. ನಂತರ ಹೊಸ ಹಾಲಿ ಪಡಿತರ ಚೀಟಿಯ ಸ್ಥಿತಿ ಮೇಲೆ ಕ್ಲಿಕ್ ಮಾಡಬೇಕು.  ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಯಾವ ಜಿಲ್ಲೆಗೆ ಸಂಬಂಧಿಸಿದ್ದೀರೋ ಆ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಪಡಿತರ ಚೀಟಿ ವಿವರ ಮೇಲೆ ಕ್ಲಿಕ್ ಮಾಡಬೇಕು.

ಆಗ ಮತ್ತೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ವಿತ್ ಓಟಿಪಿ ವಿಥೌಟ್ ಓಟಿಪಿ ಎಂಬ ಎರಡು ಆಪಶನ್ ಇರುತ್ತದೆ. ಅಲ್ಲಿ ನೀವು ಓಟಿಪಿ ಇಲ್ಲದೆಯೇ ಚೆಕ್ ಮಾಡಬೇಕಾದರೆ ವಿಥೌಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು.

ನಂತರ ನಿಮ್ಮ ಆರ್.ಸಿ ನಂಬರ್ ನಮೂದಿಸಿ ಗೋ ಮೇಲೆ ಕ್ಲಿಕ್  ಮಾಡಬೇಕು.  ಆಗ ರೇಶನ್ ಕಾರ್ಡ್ ಓಪನ್ ಆಗುತ್ತದೆ. ಇಲ್ಲಿ ನಿಮ್ಮ ಹೆಸರು, ನಿಮ್ಮ ರೇಷನ್ ಕಾರ್ಡ್ ಆ್ಯಕ್ಟಿವ್ ಇದೆಯೋ ಇಲ್ಲವೋ ಎಂಬ ಮೆಸೆಜ್ ಕಾಣುತ್ತದೆ. ನಿಮಗೆ ನ್ಯಾಯಬೆಲೆ ಅಂಗಡಿಯಿಂದ ಏನೇನು ಸಿಗುತ್ತದೆ ಎಂಬ ಪಟ್ಟಿಯೂ ಕಾಣುತ್ತದೆ.

Leave a Comment