ಕಾಫಿ ಮಂಡಳಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಒಳಪಡುವ ಸಣ್ಣ ಕಾಫಿ ಬೆಳೆಗಾರರಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಮಡಿಕೇರಿ ಕಾಫಿ ಮಂಡಳಿಯಿಂದ ಪ್ರಸ್ತುತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಒಳಪಡುವ ಸಣ್ಣ ಬೆಳೆಗಾರರು 2022 ರ ಸೆಪ್ಟೆಂಬರ್ 30ರವರೆಗೆ ಕೈಗೊಳ್ಳುವ ರೈತರಿಗೆ ಸಹಾಯಧನ ನೀಡಲು ಅರ್ಜಿ ಕರೆಯಲಾಗಿದೆ.

ಕಾಫಿ ಮರುನಾಟಿ, ಹೊಸದಾಗಿ ಕೆರೆ ನಿರ್ಮಿಸಲು, ಪಲ್ಪರ್, ಕಾಫಿ ಕಣ ಹಾಗೂ ಗೋದಾಮು ನಿರ್ಮಿಸಲು 2 ಹೆಕ್ಟೇರ್ ವರೆಗೆ ಕಾಫಿತೋಟ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬೆಳೆಗಾರರಿಗೆ ಶೇ. 90 ರಷ್ಟು ಹಾಗೂ 2 ಹೆಕ್ಟೇರ್ರಿಂದ 10 ಹೆಕ್ಟೇರ್ವರೆಗೆ ಕಾಫಿ ತೋಟ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬೆಳೆಗಾರರಿಗೆ ಶೇ. 75 ರಷ್ಟು ಸಹಾಯಧನದ ಸೌಲಭ್ಯ ವಿಸ್ತರಿಸಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಒಳಪಡುವ ಕಾಫಿ ಬೆಳೆಗಾರರು ಕಾಫಿ ಮಂಡಳಿಯಿಂದ ಪ್ರಯೋಜನ ಪಡೆಯಬಹುದು.  ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಕಾಫಿ ಮಂಡಳಿಯ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕಾಫಿ ಮಂಡಳಿಯ ಉಪ ನಿರ್ದೇಶಕ ಶಿವಕುಮಾರ ಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೃಷಿ ಯಾಂತ್ರೀಕರಣ ಯೋಜನೆ ಬಗ್ಗೆ ನಿಮಗೆ ಗೊತ್ತೇ?

ತೋಟಗಾರಿಕೆ ಕ್ಷೇತ್ರದಲ್ಲಿ ಕೂಲಿ ಕಾರ್ಮಿಕರ ಕೊರತೆ ನಿವಾರಿಸಲು ಕಡಿಮೆ ಸಮಯದಲ್ಲಿ ಹೆಚ್ಚಿನ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಅಗತ್ಯವಾದ ಕೃಷಿ ಉಪಕರಣಗಳನ್ನು ಸ್ವಯಂ ಚಾಲಿತ ಯಂತ್ರೋಪಕರಣಗಳು 20 ಹೆಚ್.ಪಿ ಗಿಂತ ಕಡಿಮೆ ಸಾಮರ್ಥ್ಯದ ಟ್ರ್ಯಾಕ್ಟರ್ ಹಾಗೂ ಪವರ್ ಟಿಲ್ಲರ್ ಗಳನ್ನು ಖರೀದಿಸಲು ರೈತರಿಗೆ ಗರಿಷ್ಟ 75 ಸಾವಿರ ರೂಪಾಯಿಯವರೆಗೆ ಸಹಾಯಧನ  ನೀಡಲು ಅವಕಾಶವಿದೆ.

ಬೇಕಾಗುವ ದಾಖಲೆಗಳು

ತೋಟಗಾರಿಕೆ ಇಲಾಖೆಯಿಂದ ರೈತರು ಸಹಾಯಧನ ಪಡೆಯಲು ಆಧಾರ್ ಕಾರ್ಡ್ ಹೊಂದಿರಬೇಕು. ಮೊಬೈಲ್ ನಂಬರ್ ಇರಬೇಕು.ಜಮೀನಿನ ಪಹಣಿ ಇರಬೇಕು. ಬ್ಯಾಂಕ್ ಪಾಸ್ ಬುಕ್ ಇರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕು.

ಎಲ್ಲಿ ಸಂಪರ್ಕಿಸಬೇಕು?

ಕೃಷಿ ಯಾಂತ್ರೀಕರಣ ಯೋಜನೆಯಡಿಯಲ್ಲಿ ರೈತರು ಸಹಾಯಧನ ಪಡೆಯಲು ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬೇಕು. ಅಥವಾ ತೋಟಗಾರಿಕೆ ಇಲಾಖೆ ಅಥವಾ ಕೃಷಿ ಇಲಾಖೆಯಲ್ಲಿ ಸಂಪರ್ಕಿಸಿ ಅಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು. ಲಭ್ಯತೆಯ ಆಧಾರದ ಮೇಲೆ ಹಿರಿತನ ನೋಡಿ ಮೊದಲು ಅರ್ಜಿ ಸಲ್ಲಿಸಿದವರಿಗೆ  ಸಹಾಯಧನದಡಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ನೀಡಲಾಗುವುದು.

Leave a Reply

Your email address will not be published. Required fields are marked *