ಹಸು ಎತ್ತು ಸತ್ತರೆ 15 ಸಾವಿರ ಕುರಿ ಸತ್ತರೆ 7 ಸಾವಿರ ಪರಿಹಾರ

Written by Ramlinganna

Updated on:

Compensation amount increased : ರೈತರ ಜಾನುವಾರುಗಳು ಆಕಸ್ಮಿಕವಾಗಿ ಮೃತಪಟ್ಟರೆ ಪರಿಹಾರ ಹಣವನ್ನು ಹೆಚ್ಚಿಸಲಾಗಿದೆ. ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ನಲ್ಲಿ ಪರಿಹಾರ ಹಣವನ್ನು ಹೆಚ್ಚಿಸಿದ್ದಾರೆ

ಇದರೊಂದಿಗೆ ಬಜೆಟ್ ನಲ್ಲಿ  ದೇಶದ ಬೆನ್ನೆಲಬು ರೈತರ ಪರವಾಗಿ ಕೃಷಿ ಕ್ಷೇತ್ರಕ್ಕೆ ಬಂಪರ್ ಕೊಡುಗೆಯನ್ನು ನೀಡಿದ್ದಾರೆ.

ಜಾನುವಾರುಗಳು ಆಕಸ್ಮಿಕ ಸಾವಿನಿಂದ ರೈತರು ಅನುಭವಿಸುವ ಆರ್ಥಿಕ ಸಂಕಷ್ಟ ನಿವಾರಣೆಗೆ ಅನುಗ್ರಹ ಯೋಜನೆ ಜಾರಿಗೆ ತರಲಾಗಿದ್ದು, ಈ ಯೋಜನೆಯಡಿ ನೀಡಲಾಗುತ್ತಿರುವ ಪರಿಹಾರ ಮೊತ್ತವನ್ನು ಹೆಚ್ಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ .

Compensation amount increased ಪರಿಹಾರ ಹೆಚ್ಚಳ

2025-26ನೇ ಸಾಲಿನ ಬಜೆಟ್ ಮಂಡಿಸಿದ ಅವರು, ಈಗಾಗಲೇ ಅನುಗ್ರಹ ಯೋಜನೆ ಜಾರಿಗೆ ತರಲಾಗಿದ್ದು, ಈ ಯೋಜನೆಯಡಿ ಹಸು, ಎಮ್ಮೆ ಮತ್ತು ಎತ್ತುಗಳಿಗೆ ಪ್ರಸ್ತುತ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು 10 ಸಾವಿರದಿಂದ 15 ಸಾವಿರ ರೂಪಾಯಿಗಳಿಗೆ, ಕುರಿ-ಮೇಕೆಗಳಿಗೆ ನೀಡುತ್ತಿರುವ 5 ಸಾವಿರ ರೂಪಾಯಿಗಳಿಂದ 7500 ರೂಪಾಯಿ. ಹಾಗೂ 3 ರಿಂದ 6 ತಿಂಗಳ ಕುರಿ, ಮೇಕೆಗಳಿಗೆ ನೀಡಲಾಗುತ್ತಿರುವ ಮೊತ್ತವನ್ನು 3500 ರೂಪಾಯಿಗಳಿಂದ 5000 ರೂಪಾಯಿಗಳಿಗೆ ಹೆಚ್ಚಿಸಲಾಗುವುದು ಎಂದು ಹೇಳಿದರು.

ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 ಸಾವಿರ ರೈತರಿಗೆ ಸಹಾಯಧನ ಒದಗಿಸಲು 428 ಕೋಟಿ ರೂಪಾಯಿ ಅನುದಾನ ಕಲ್ಪಿಸಲಾಗುವುದು.

ಮಳೆಯಾಶ್ರಿತ ಪ್ರದೇಶದಲ್ಲಿ ಕೃಷಿ ಉತ್ಪಾದನೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಂದಾಜು 1 ಲಕ್ಷ 81 ಸಾವಿರ  ರೈತರಿಗೆ ಹನಿ ಮತ್ತು ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ 440 ಕೋಟಿ ರೂ. ಸಹಾಯಧನ ಒದಗಿಸಲಾಗುವುದು.

ಕೃಷಿ ಭಾಗ್ಯ ಯೋಜನೆಯಡಿ ಮೂರು ಲಕ್ಷಕ್ಕಿಂತ ಅಧಿಕ ಕೃಷಿ ಹೊಂಡಗಳನ್ನು ನಿರ್ಮಿಸಿ ಸಹಾಯಧನನೀಡಲಾಗುವುದು. ಪ್ರಸಕ್ತ ವರ್ಷದಲ್ಲಿ ಈ ಯೋಜನೆಯಡಿ 12,000, ಕೃಷಿ ಹೊಂಡಗಳನ್ನು ನಿರ್ಮಿಸಲಾಗುವುದು.

ಇದನ್ನೂ ಓದಿ : ನಿಮ್ಮ ಜಮೀನಿನ ಮೇಲೆ ಸಾಲವೆಷ್ಟಿದೆ? ಇಲ್ಲೇ ಚೆಕ್ ಮಾಡಿ

ಕಳೆದ ಎರಡು ವರ್ಷಗಳಲ್ಲಿ 60 ಹೊಸ ಪಶು ಚಿಕಿತ್ಸಾಲಯಗಳನ್ನು ಕಾರ್ಯಾರಂಭಗೊಳಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ನೂತನ 50 ಚಿಕಿತ್ಸಾಲಯಗಳನ್ನು ಪ್ರಾರಂಭಿಸಲಾಗುವುದು ಎಂದರು.

ನೂರು ಪಶು ವೈದ್ಯಕೀಯ ಸಂಸ್ಥೆಗಳ ನೂತನ ಕಟ್ಟಡಗಳನ್ನು ನಬಾರ್ಡ್ ಸಹಯೋಗದೊಂದಿಗೆ ನಿರ್ಮಿಸಲಾಗುವುದು. ರಾಜ್ಯದ ಹೆಮ್ಮೆಯ ತಳಿಗಳಾದ ಹಳ್ಳಿಕಾರ್, ಕಿಲಾರಿ, ಅಮೃತ್ ಮಹಲ್ ಹಾಗೂ ಬಂಡೂರ್ ಕುರಿ ತಳಿಯ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ 2 ಕೋಟಿ ರೂ. ಒದಗಿಸಲಾಗುವುದು. ಆಧುನಿಕ ಕುರಿ ಸಾಕಾಣಿಕೆ ಪದ್ಧತಿಗಳು ಮತ್ತು ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ವಲಸೆ ಕುರಿಗಾರರಿಗೆ ಕರ್ನಾಟಕ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದಲ್ಲಿ ತರಬೇತಿ ನೀಡಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ 2025-26 ನೇ ಸಾಲಿನಲ್ಲಿ 50 ನೂತನ ಪಶು ಚಿಕಿತ್ಸಾಲಯಗಳ ಆರಂಭ, ದೇಶಿ ದನದ ತಳಿಗಾಳದ ಹಳ್ಳಿಕಾರ್, ಕಿಲಾರಿ, ಅಮೃತ್ ಮಹಲ್ ಹಾಗೂ ಬಂಡೂರು ಕುರಿ ತಳಿಯ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ೨ ಕೋಟಿ ರೂಪಾಯಿಗಳನ್ನು ಬಜೆಟ್‌ನಲ್ಲಿ ಮೀಸಲಿರಿಸಲಾಗಿದೆ.

ಇದನ್ನೂ ಓದಿ : ಸ್ವಾವಲಂಬಿ ಆ್ಯಪ್ ಮೂಲಕ ಜಮೀನಿನ ಸರ್ವೆ, ಪೋಡಿ, ನಕ್ಷೆ ಪಡೆಯಿರಿ

ದೇಶಿ ತಳಿಗಳ ಬೀಜ ಬ್ಯಾಂಕ್ ಸ್ಥಾಪನೆ, ಗದಗ ಜಿಲ್ಲೆಯ ಡಂಬಳದಲ್ಲಿ ತೋಟಗಾರಿಕಾ ಕಾಲೇಜು ಸ್ಥಾಪನೆಯನ್ನು ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ.
ರಾಮನಗರ ಮತ್ತು ಶಿಡ್ಲಘಟ್ಟದಲ್ಲಿ ೨ನೇ ಹಂತದ ಹೈಟೆಕ್ ರೇಷ್ಮೆಗೂಡಿನ ಕಾಮಗಾರಿಗಳಿಗೆ ೨೫೦ ಕೋಟಿ ರೂಪಾಯಿ, ಮೈಸೂರಿನಲ್ಲಿ ರೇಷ್ಮೆ ಗೂಡಿನ ಮಾರುಕಟ್ಟೆಯನ್ನು ನಬಾರ್ಡ್ ಸಹಯೋಗದಲ್ಲಿ ಸ್ಥಾಪನೆಯನ್ನು ಬಜೆಟ್‌ನಲ್ಲಿ ಪ್ರಕಟಿಸಲಾಗಿದೆ.

Leave a Comment