ಕೊರೋನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಸರ್ಕಾರ ಘೋಷಣೆ ಮಾಡಿರುವ ಪರಿಹಾರವನ್ನು ಸಂಕಷ್ಟಕ್ಕೊಳಗಾದ ತರಕಾರಿ,  ಹೂವು,  ಹಣ್ಣು ಬೆಳೆದ ರೈತರ ಖಾತೆಗೆ ನೇರವಾಗಿ ಜಮೆ (compensation without application to farmers)ಮಾಡಲಾಗುವುದು. ಇದಕ್ಕಾಗಿ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬೇಕಾಗಿಲ್ಲ. ಇ-ಆಡಳಿತ ಇಲಾಖೆಯಲ್ಲೇ ತರಕಾರಿ, ಹಣ್ಣು ಹಾಗೂ ಹೂವು ಬೆಳೆಗಾರರ ದತ್ತಾಂಶ ಆಧರಿಸಿ ಪರಿಹವಾರ ರೈತರ ಖಾತೆಗೆ ಜಮೆ ಮಾಡಲು ನಿರ್ಧರಿಸಲಾಗಿದೆ.

ಸರ್ಕಾರದ ಪರಿಹಾರ ಪ್ಯಾಕೇಜ್ ನಡಿ ನೆರವು ಪಡೆಯಲು ರೈತರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬೇಕಿಲ್ಲ. ಕಂದಾಯ ಇಲಾಖೆಯಲ್ಲಿ ಪ್ರತಿ ರೈತರ ಭೂ ದಾಖಲೆ ಮತ್ತು ಬೆಳೆ ಕುರಿತ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಇದರೊಂದಿಗೆ ರೈತರ ಆಧಾರ್ ಮತ್ತು ಬ್ಯಾಂಕ್ ಖಾತೆಯ ಮಾಹಿತಿಯೂ ಲಭ್ಯವಿದ್ದು, ಏಪ್ರೀಲ್ ಮತ್ತು ಮೇ ತಿಂಗಳಲ್ಲಿ ಸಂತ್ರಸ್ತರಾದ ರೈತರಿಗೆ ಈ ಸೌಲಭ್ಯ ದೊರೆಯಲಿದೆ. ಏಪ್ರೀಲ್ ಮತ್ತು ಮೇ ತಿಂಗಳಲ್ಲಿ ಸಂತ್ರಸ್ತರಾದ ರೈತರಿಗೆ ಮಾತ್ರ ಈ ಸೌಲಭ್ಯ ಸಿಗಲಿದೆ ಎಂದು ಇ-ಆಡಳಿತ ಇಲಾಖೆ ಮಾಹಿತಿ ನೀಡಿದೆ.

ಸರ್ಕಾರದ ಅನೇಕ ಸೌಲಭ್ಯಗಳನ್ನು ನೇರ ವರ್ಗಾವಣೆ ಮೂಲಕ ರೈತರ ಖಾತೆಗೆ ಸಂದಾಯ ಮಾಡುತ್ತಿದ್ದು, ಕಳೆದ ಬಾರಿ ರಾಜ್ಯ ಸರ್ಕಾರ ಘೋಷಣೆ ಮಾಡಿದ್ದ ಪರಿಹಾರವನ್ನು ಕೂಡ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗಿತ್ತು.

ನಷ್ಟದ ಮಾಹಿತಿ ಈಗಾಗಲೇ ಲಭ್ಯವಿದೆ. ಮಾಹಿತಿಗಳ ಪ್ರಕಾರ ಸುಮಾರು32 ಸಾವಿರ ಹೂವು ಬೆಳೆಗಾರರು, 35 ಸಾವಿರ ಹಣ್ಣು ಬೆಳೆಗಾರರು, 40 ಸಾವಿರ ತರಕಾರಿ ಬೆಳೆಗಾರರಿಗೆ ಈ ಸೌಲಭ್ಯ ಸಿಗಲಿದೆ.

Leave a Reply

Your email address will not be published. Required fields are marked *