ಅಡುಗೆ ಸಹಾಯಕರ ನೇಮಕಕ್ಕೆ ಅರ್ಜಿ ಆಹ್ವಾನ

Written by Ramlinganna

Updated on:

Cook helpers job notification 2023-24ನೇ ಸಾಲಿನ ಅಕ್ಷರ ದಾಸೋಹ ಯೋಜನೆಯಡಿ ಮುಖ್ಯ ಅಡುಗೆಯವರು ಮತ್ತು ಸಹಾಯಕ ಅಡುಗೆಡವಯರನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಚಿಕ್ಕಬಳ್ಳಾಪುರ ಜಿಲ್ಲೆಯ  ಚಿಂತಾಮಣಿ ನಗರಸಭೆ ವ್ಯಾಪ್ತಿಯ ವಾರ್ಡ್ ಸಂಖ್ಯೆ 10ಕ್ಕೆ ಸೊಣ್ಣಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಗೆ 2023-24ನೇ ಸಾಲಿನ ಅಕ್ಷರ ದಾಸೋಹ ಯೋಜನೆಯಡಿ ಮುಖ್ಯ ಅಡುಗೆಯವರು ಹಾಗೂ ಸಹಾಯಕ ಅಡುಗೆಯವರನ್ನು ನೇಮಕcಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಜನವರಿ 16 ರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಯನ್ನು ಜನವರಿ 23 ರೊಳಗೆ ಸಲ್ಲಿಸಲು ಕೊನೆಯ ಅವಕಾಶವಿದೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿ ಸಮಯದ ವೇಳೆ ಚಿಂತಾಮಣಿ ನಗರಸಭೆ ದೂರವಾಣಿ ಸಂಖ್ಯೆ 08154 252117 ಗೆ ಸಂಪರ್ಕಿಸಲು ಕೋರಲಾಗಿದೆ.

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ತುಮಕೂರು ಜಿಲ್ಲೆಯ ಹಿರೇಹಳ್ಳಿ ಕೈಗಾರಿಕಾ ಪ್ರದೇಶ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ದಲ್ಲಿ ಡಿಪ್ಲೋಮಾ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಕೋರ್ಸಿಗೆ ಒಂದು ವರ್ಷದ ಅವಧಿಗಾಗಿ ಅತಿಥಿ ಉಪನ್ಯಾಸಕರ ಸೇವೆ ಸಲ್ಲಿಸುವದರಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಲೆಕ್ಟ್ರಿಕಲ್ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ಬಿಇ ಅಥವಾ ಎಂ.ಟೆಕ್ ಪದವಿ ಹಾಗೂ  ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು. ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವ ವಿವರ ಮತ್ತು ವಿದ್ಯಾರ್ಹತೆ ಪ್ರಮಾಣ ಪತ್ರದೊಂದಿಗೆ ಜನವರಿ 22 ರೊಳಗಾಗಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಹಿರೇಹಳ್ಳಿ, ಕೈಗಾರಿಕಾ ಪ್ರದೇಶ, ತುಮಕೂರು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

23 ರಂದು ಹನಿ ನೀರಾವರಿ ರಸಾವರಿ ಪದ್ಧತಿಗಳ ಕುರಿತು ತರಬೇತಿ

ಮೈಸೂರು ಜಿಲ್ಲೆಯ ನಾಗನಹಳ್ಳಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರ ವತಿಯಿಂದ ಜನವರಿ 3 ರಂದು ತೋಟಗಾರಿಕೆ ಹಾಗೂ ರೇಷ್ಮೆ ಬೆಳೆಯಲ್ಲಿ ಹನಿ ನೀರಾವರಿ ಹಾಗೂ ರಸಾವರಿ ಪದ್ದತಿಗಳ ಅಳವಡಿಕೆ ಎಂಬ ವಿಷಯದ ಬಗ್ಗೆ ರೈತರು, ರೈತ ಮಹಿಳೆಯರಿಗೆ ಒಂದು ದಿನದ ಕ್ಷೇತ್ರಾಧಾರಿತ ತರಬೇತಿಯನ್ನು ಎಚ್.ಡಿ. ಕೋಟೆ ತಾಲೂಕಿನ ಕಸಬಾ ಹೋಬಳಿಯ ಸೊಳ್ಳೇಪುರಹಾಡಿ ಗ್ರಾಮದ ಪುನರ್ವಸತಿ ಕೇಂದ್ರದಲ್ಲಿಆಯೋಜಿಸಿದೆ.

ತರಬೇತಿಯಲ್ಲಿ ಭಾಗವಹಿಸಲು ಇಚ್ಚಿಸುವ ಆಸಕ್ತ ರೈತರು, ರೈತ ಮಹಿಳೆಯರು ತಮ್ಮ ಹೆಸರನ್ನು ತರಬೇತಿ ಕೇಂದ್ರದ ಕೃಷಿ ಅಧಿಕಾರಿಗಳ ಮೊಬೈಲ್ ಸಂಖ್ಯೆ 91643 97 510 ಗೆ ಕರೆ ಮಾಡಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಕೇವಲ 50 ರೈತರು, ರೈತ ಮಹಿಳೆಯರಿಗೆ ತರಬೇತಿಯಲ್ಲಿ ಭಾಗವಹಿಸಲು ಅವಕಾಶವಿದೆ. ಮೊದಲು ನೋಂದಣಿ ಮಾಡಿದವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.

22 ರಿಂದ 24 ರವರಗೆ ರೈತರಿಗೆ ವಿವಿಧ ತರಬೇತಿ

ಮೈಸೂರು ಜಿಲ್ಲೆಯ ನಾಗನಹಳ್ಳಿ ಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜನವರಿ 22 ರಿಂದ 24 ರವರೆಗೆ ಬಾಳೆ ಬೆಳೆಯಲ್ಲಿ ತಳಿ ಆಯ್ಕೆ, ಆಧುನಿಕ ಕೃಷಿ ಪದ್ಧತಿಗಳು, ಸೂಕ್ಷ್ಮ ನೀರಾವರಿ ಕುರಿತು ರೈತರಿಗೆ ಮೂರು ದಿನಗಳ ಕಾಲ ತರಬೇತಿ ಆಯೋಜಿಸಲಾಗಿದೆ. ತರಬೇತಿಯಲ್ಲಿ ಭಾಗವಹಿಸುವ ರೈತರು, ರೈತ ಮಹಿಳೆಯರಿಗೆ ಊಟ ಮತ್ತು ವಸತಿ ವ್ಯವಸ್ಥೆಯನ್ನು ಒದಗಿಸಲಾಗುವುದು. ಆಸಕ್ತರು 9945493589 ಗೆ ಕರೆ ಮಾಡಿ ತಮ್ಮ ಹೆಸರು ನೋಂದಾಯಿಸಿಕೊಳ್ಳಲು ಕೋರಲಾಗಿದೆ.

ಕೇವಲ ಜಿಲ್ಲೆಯ 30 ರೈತರಿಗೆ ಮಾತ್ರ ಅವಕಾಶವಿರುವುದರಿಂದ ಕೂಡಲೇ ತಮ್ಮ ಹೆಸರು ನೋಂದಣಿ ಮಾಡಿಕೊಳ್ಳಲು ಕೋರಲಾಗಿದೆ.

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾಂತರ ಕಲ್ಯಾಣ ಇಲಾಖಾ ವತಿಯಿಂದ ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ ಹಾಗೂ ಮೆರಿಟ್ ಕಂ. ಮೀನ್ಸ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಆರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಮತೀಯ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿರುವವರು ವಿದ್ಯಾರ್ಥಿಗಳು ಮಾತ್ರ ಎಸ್.ಎಸ್.ಪಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕಡ್ಡಾಯಾಗಿದೆ. ಅರ್ಹ ವಿದ್ಯಾರ್ಥಿಗಳು ವೆಬ್ಸೈಟ್ ಮಾಹಿತಿಗಾಗಿ ಇಲಾಖೆಯ ವೆಬ್ಸೈಟ್ ನ್ನು ಪರಿಶೀಲಿಸಲು ಕೋರಲಾಗಿದೆ.

Leave a Comment