Corona death relief ಕೋವಿಡ್-19 ವೈರಾಣು ಸೋಕಿನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ವಿತರಣೆ ಮಾಡುವ ಯೋಜನೆಯಡಿ ಮೃತಪಟ್ಟ ವ್ಯಕ್ತಿಗಳ ಕುಟುಂಬಗಳ ವಾರಸುದಾರರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕೋವಿಡ್-೧೯ ವೈರಾಣು ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದ ಸದಸ್ಯರು ಜಿಲ್ಲೆಯ ಸಂಬಂಧಪಟ್ಟ ಅಯಾ ತಾಲೂಕುಗಳ ಕಚೇರಿ, ನಾಡ ಕಚೇರಿಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ನಿಗದಿಪಡಿಸಿದ ನಮೂನೆ-1, ನಮೂನೆ-2 ಹಾಗೂ ನಮೂನೆ-3 ರಲ್ಲಿ ಮೃತವ್ಯಕ್ತಿ ಮತ್ತು ಅರ್ಜಿದಾರರ ವಿವರಗಳೊಂದಿಗೆ ಕೆಳಕಂಡ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.
Corona death relief ಪರಿಹಾರ ಪಡೆಯಲು ಯಾವ ದಾಖಲೆ ಸಲ್ಲಿಸಬೇಕು?
ಮೃತ ವ್ಯಕ್ತಿಯ ಪಾಸಿಟಿವ್ ವರದಿ, ಕೋವಿಡ್ ರೋಗಿ ಸಂಖ್ಯೆ-ಪಿ ನಂಬರ್, ಮರಣ ಪ್ರಮಾಣಪತ್ರ ಅಥವಾ ಮರಣ ಕಾರಣ ಪ್ರಮಾಣಪತ್ರ, ಆಧಾರ್ ಕಾರ್ಡ್ ಅಥವಾ ಇತರೆ ಗುರುತಿನ ಚೀಟಿ ಲಗತ್ತಿಸಬೇಕು.
ಇದಲ್ಲದೇ ಅರ್ಜಿದಾರರ ಆಧಾರ ಪ್ರತಿ, ಬಿ.ಪಿ.ಎಲ್. ಪಡಿತರ ಚೀಟಿ, ಬ್ಯಾಂಕ್, ಅಂಚೆ ಖಾತೆ ಪಾಸ್ಬುಕ್ ಪ್ರತಿ, ಅರ್ಜಿದಾರರ ಸ್ವಯಂ ಘೋಷಣೆ, ಮೃತ ವ್ಯಕ್ತಿಯ ಪತಿ, ಪತ್ನಿಯನ್ನು ಹೊರತುಪಡಿಸಿ ಕುಟುಂಬದ ಇತರೆ ಸದಸ್ಯರು ಅರ್ಜಿ ಸಲ್ಲಿಸಿದಲ್ಲಿ ಮಾತ್ರ ಕುಟುಂಬದ ಉಳಿದ ಸದಸ್ಯರಿಂದ ನಿರಾಕ್ಷೇಪಣಾ ಪತ್ರ ಪಡೆದು ಅರ್ಜಿ ಸಲ್ಲಿಸಬೇಕು.
ಇದನ್ನೂ ಓದಿ : ನಿಮ್ಮ ಜಮೀನಿಗೆ ದಾರಿ ಬೇಕಾದರೆ ಅರ್ಜಿ ಎಲ್ಲಿ ಹೇಗೆ ಸಲ್ಲಿಸಬೇಕು? ಏನೇನು ದಾಖಲೆಗಳು ಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ
ರಾಜ್ಯ ಸರ್ಕಾರವು ಘೋಷಿಸಿದಂತೆ ಕೋವಿಡ್ದಿಂದ ಮೃತಪಟ್ಟ ಬಡತನ ರೇಖೆಗಿಂತ ಕೆಳಗಿನ ಕುಟುಂಬದ ಒಬ್ಬ ಕಾನೂನು ಬದ್ಧ ವಾರಸುದಾರರಿಗೆ ಸಂಧ್ಯಾ ಸುರಕ್ಷಾ ಯೋಜನೆಯಡಿ 1 ಲಕ್ಷ ರೂಪಾಯಿ, ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ 50 ಸಾವಿರ ರೂಪಾಯಿ ಸೇರಿದಂತೆ ಒಟ್ಟು 1.50 ಲಕ್ಷ ರೂಪಾಯಿ ಪಾವತಿಸಲು ಹಾಗೂ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ಕೋವಿಡ್ದಿಂದ ಮೃತಪಟ್ಟಿ ಇತರ ಎಲ್ಲಾ ಪ್ರಕರಣಗಳಲ್ಲಿ ಕುಟುಂಬದ ವಾರಸುದಾರರಿಗೆ 50 ಸಾವಿರ ರೂಪಾಯಿ ಪರಿಹಾರ ಮೊತ್ತವನ್ನು ಪಾವತಿಸಲು ಅನುಮತಿ ನೀಡಿ ಸರ್ಕಾರ ಆದೇಶಿಸಿದೆ.
ಎಪಿಎಲ್ ಕಾರ್ಡ್ ಹೊಂದಿರುವವರಿಗೆ ಕೇಂದ್ರ ಸರ್ಕಾರದ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು. ಕೇಂದ್ರ ಸರ್ಕಾರದ ಪರಿಹಾರ ಹಣ ಆರ್.ಟಿಜಿಎಸ್ ಮೂಲಕ ಫಲಾನುಭವಿಗಳ ಖಾತೆಗೆ ಹಾಕಲಾಗುವುದು. ಈ ಕಮಿಟಿಯಲ್ಲಿ ಜಿಲ್ಲಾಧಿಕಾರಿ, ವೈದ್ಯಾಧಿಕಾರಿ, ಸದಸ್ಯ ಕಾರ್ಯದರ್ಶಿ ಇರುತ್ತಾರೆ.
ಕೋವಿಡ್ ನಿಂದ ಮೃತಪಟ್ಟ ಹಲವಾರು ಜನರಿಗೆ ಇನ್ನೂ ಪರಿಹಾರ ಹಣ ಸಿಕ್ಕಿಲ್ಲ. ಏಕೆಂದರೆ ಅವರು ಕೋರಾನಾದಿಂದ ಮೃತಪಟ್ಟರೂ ಸಹ ಅವರ ಬಳಿ ಅಗತ್ಯ ದಾಖಲೆಗಳು ಇರುವುದಿಲ್ಲ. ದಾಖಲೆಗಳ ಸಮಸ್ಯೆಯಿಂದಾಗಿ ಪರಿಹಾರ ಹಣದಿಂದ ವಂಚಿತರಾಗಿದ್ದಾರೆ. ಗ್ರಾಮಾಂತರ ಪ್ರದೇಶಗಳಲ್ಲಿ ಹೆಚ್ಚು ಜನ ಕೋರೋನಾದಿಂದ ಸಾವನ್ನಪ್ಪಿರುತ್ತಾರೆ. ಆಸ್ಪತ್ರೆಗೆ ದಾಖಲೆ ಮಾಡದೆ ಇರುವುದರಿಂದ ಅವರಿಗೆ ಕೋರೋನಾ ಸರ್ಟಿಫಿಕೆಟ್ ಇಲ್ಲದೆ ಹಲವಾರು ಕುಟುಂಬಗಳು ಪರಿಹಾರದಿಂದ ವಂಚಿತರಾಗಿದ್ದಾರೆ.