ಬೆಳೆಹಾನಿ ಪರಿಹಾರಕ್ಕೆ 1200 ಕೋಟಿ ಹೆಚ್ಚುವರಿ ಹಣ

Written by By: janajagran

Updated on:

1200 crore increased for farmers ಬೆಳೆಹಾನಿ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ನಿಗದಿಪಡಿಸಿದ್ದ ದರದ ಜೊತೆಗೆ ಹೆಚ್ಚುವರಿ ಪರಿಹಾರ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ರಾಜ್ಯದಲ್ಲಿ 2021ನೇ ಜುಲೈನಿಂದ ನವೆಂಬರ್ ವರೆಗೆ ನೆರೆ ಹಾವಳಿಯಿಂದ 12.52 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ. ಬೆಳೆ ಹಾನಿಯ ಜಂಟಿ ಸಮೀಕ್ಷೆಯ ವಿವರಗಳನ್ನು ಪರಿಹಾರ ತಂತ್ರಾಂಶದಲ್ಲಿ ನಮೂದಿಸಿದ ಒಂದು ವಾರದೊಳಗೆ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಬೆಳೆ ಹಾನಿ ಪರಿಹಾರ ಜಮೆ ಮಾಡಲು ಕ್ರಮಕೈಗೊಂಡಿದೆ. ಈವರೆಗೆ ಸುಮಾರು 14.4 ಲಕ್ಷ ರೈತರ ಬ್ಯಾಂಕ್ ಖಾತೆಗೆ 926.40 ಕೋಟಿ ರೂಪಾಯಿ ಮೊತ್ತ ರೈತರ ಖಾತೆಗೆ ಜಮೆ ಮಾಡಲಾಗಿದೆ. ಕಳೆದ ಒಂದು ತಿಂಗಳಲ್ಲಿ ಸುಮಾರು 12.90 ಲಕ್ಷ ರೈತರಿಗೆ 796.00 ಕೋಟಿ ರೂಪಾಯಿ ಬೆಳೆ ಹಾನಿ ಪರಿಹಾರ ಹಣವನ್ನು ಪಾವತಿಸಲಾಗಿದೆ.

ಹೌದು  ರಾಜ್ಯದಲ್ಲಿ ಜುಲೈನಿಂದ ನವೆಂಬರ್ ವರೆಗೆ ಉಂಟಾದ ಅತೀವೃಷ್ಟಿ ಹಾಗೂ ಪ್ರವಾಹದಿಂದ ಸಂತ್ರಸ್ತರಾದ ವಿವಿಧ ವರ್ಗದ ಜನರ ಹಿತರಕ್ಷಣೆಗೆ ಸರ್ಕಾರವು ಹಲವಾರು ಪರಿಹಾರ ಕ್ರಮಗಳನ್ನು ಕೈಗೊಂಡಿದೆ. ಪರಿಷ್ಕೃತ ದರದಲ್ಲಿ ಬೆಳೆ ಪರಿಹಾರ ಪಾವತಿಸಲು ಅಂದಾಜು 1200 ಕೋಟಿ ರೂಪಾಯಿ ಹೆಚ್ಚುವರಿ ವೆಚ್ಚ ಮಾಡಲಿದೆ.

ಮಳೆಯಾಶ್ರಿತ ಬೆಳೆಗೆ ಎಸ್.ಡಿ.ಆರ್.ಎಫ್ ಮಾರ್ಗಸೂಚಿ ಪ್ರಕಾರ ಈಗಾಗಲೇ ಪ್ರತಿ ಹೆಕ್ಟೇರಿಗೆ 6800 ರೂಪಾಯಿ ಪರಿಹಾರ ನೀಡಲು ನಿಗದಿಪಡಿಸಿ ಬಿಡುಗಡೆ ಮಾಡಲಾಗಿತ್ತು. ಈಗ ರಾಜ್ಯ ಸರ್ಕಾರವು ಹೆಚ್ಚುವರಿಯಾಗಿ ಮತ್ತೆ 6800 ರೂಪಾಯಿ ನೀಡುತ್ತಿದೆ. ಮಳೆಯಾಶ್ರಿತ ಜಮೀನಿಗೆ ಒಟ್ಟು 13,600 ರೂಪಾಯಿ ಪರಿಹಾರ ನೀಡಲಾಗುವುದು.

ನೀರಾವರಿ ಜಮಿನಿಗೆ ಎಸ್.ಡಿ.ಆರ್.ಎಪ್ ಮಾರ್ಗಸೂಚಿ ಪ್ರಕಾರ ಪ್ರತಿ ಹೆಕ್ಟೇರಿಗೆ 13,500 ರೂಪಾಯಿ ನೀಡಲಾಗಿತ್ತು. ಈಗ 11,500 ರೂಪಾಯಿ ಹೆಚ್ಚುವರಿಯಾಗಿ ರಾಜ್ಯ ಸರ್ಕಾರವು ನೀಡುತ್ತಿದೆ. ಒಟ್ಟು ನೀರಾವರಿ ಬೆಳೆಗಳಿಗೆ ಪ್ರತಿ ಹೆಕ್ಟೇರಿಗೆ 25,000 ರೂಪಾಯಿ ನೀಡಲಾಗುವುದು.

ಇದನ್ನೂ ಓದಿ : ನಿಮ್ಮ ಜಮೀನಿಗೆ ಹೋಗುವ ಕಾಲುದಾರಿ, ಎತ್ತಿನಬಂಡಿ ದಾರಿ, ಸರ್ವೆನಂಬರ್, ಊರಿನ ಮ್ಯಾಪ್ ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ತೋಟಗಾರಿಕೆ ಬೆಳೆಗಳಿಗೆ ಎಸ್.ಡಿ.ಆರ್.ಎಫ್ ಮಾರ್ಗಸೂಚಿ ದರ ಪ್ರಕಾರ 18000 ರೂಪಾಯಿ ನೀಡಲಾಯಿತು. ಈಗ ರಾಜ್ಯ ಸರ್ಕಾರವು 10 ಸಾವಿರ ರೂಪಾಯಿ ಹೆಚ್ಚುವರಿಯಾಗಿ ನೀಡಲು ನಿರ್ಧರಿಸಿದೆ. ಪರಿಷ್ಕೃತ ದರ ಈಗ ತೋಟಗಾರಿಕೆ ಬೆಳೆಗೆ ಪ್ರತಿ ಹೆಕ್ಟೇರಿಗೆ 28000 ರೂಪಾಯಿ ನೀಡಲಾಗುವುದು.

1200 crore increased for farmers ಮೊಬೈಲ್ ನಲ್ಲೇ ಚೆಕ್ ಮಾಡಿ ಪರಿಹಾರ ಸ್ಟೇಟಸ್

ಬೆಳೆ ಪರಿಹಾರ ಹಣ ನಿಮ್ಮ ಖಾತೆಗೆ ಜಮೆಯಾಗಿರುವುದನ್ನು ನೋಡಲು ರೈತರು ಎಲ್ಲಿಯೂ ಹೋಗಬೇಕಿಲ್ಲ. ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡಬಹುದು.

ಪರಿಹಾರ ಸ್ಟೇಟಸ್ ನೋಡಲು ಈ  https://landrecords.karnataka.gov.in/PariharaPayment/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಸರ್ಕಾರದ ಪರಿಹಾರ ವೆಬ್ ಪೇಜ್ ಓಪನ್ ಆಗುತ್ತದೆ ಅಲ್ಲಿ ಆಧಾರ್ ಸಂಖ್ಯೆ ಆಯ್ಕೆ ಮಾಡಿಕೊಳ್ಳಬೇಕು. ನಂತರ Select calamity type ನಲ್ಲಿ Flood ಆಯ್ಕೆ ಮಾಡಿಕೊಳ್ಳಬೇಕು. ಈ ವರ್ಷದ ಸ್ಟೇಟಸ್ ನೋಡಲು 2021-22 ಆಯ್ಕೆ ಮಾಡಿಕೊಳ್ಳಬೇಕು. ಕೆಳಗಡೆ ಆಧಾರ್ ಸಂಖ್ಯೆ ನಮೂದಿಸಿ ಕ್ಯಾಪ್ಚ್ಯಾ ಕೋಡ್ ನಮೂದಿಸಬೇಕು ನಂತರ ವಿವರಗಳನ್ನು ಪಡೆಯಲು ಮೇಲೆ ಕ್ಲಿಕ್ ಮಾಡಿದರೆ ಸಾಕು ಪರಿಹಾರ ಸ್ಟೇಟಸ್ ಮೊಬೈಲ್ ನಲ್ಲಿಯೇ ನೋಡಿಕೊಳ್ಳಬಹುದು. ಈ ವರ್ಷದಲ್ಲಿ ಎಷ್ಟು ಎಕರೆಗೆ ಬೆಳೆ ಪರಿಹಾರ ನೀಡಲಾಗಿದೆ. ಯಾವ ಬ್ಯಾಂಕಿನಲ್ಲಿ ಹಣ ಜಮೆಯಾಗಿದೆ. ಯಾವ ಬೆಳೆಗೆ ಪರಿಹಾರ ನೀಡಲಾಗಿದೆ ಎಂಬ ಮಾಹಿತಿ ಕಾಣುತ್ತದೆ. ಅದೇ ರೀತಿ 2020-21 ನೇ ಸಾಲಿನ ಹಾಗೂ 2010-20ನೇ ಸಾಲಿನ ಸ್ಟೇಟಸ್ ಸಹ ವರ್ಷ ಆಯ್ಕೆ ಮಾಡಿಕೊಂಡು ನೋಡಿಕೊಳ್ಳಬಹುದು.

Leave a Comment