ಈ ದಿನ ಬರ ಪರಿಹಾರ ಹಣ ಬಿಡುಗಡೆ: ನಿಮ್ಮ ಹೆಸರು ಇಲ್ಲೇ ಚೆಕ್ ಮಾಡಿ

Written by Ramlinganna

Updated on:

ಮುಂದಿನ ವಾರ ತಾತ್ಕಾಲಿಕವಾಗಿ 2 ಸಾವಿರ ರೂಪಾಯಿ ಬರಗಾಲ ಪರಿಹಾರ ಹಣವನ್ನು ರೈತರ ಖಾತೆಗೆ ಜಮೆ ಮಾಡಲಾಗುವುದು.

ಹೌದು, ಈ ಕುರಿತು ಕಂದಾಯ ಸಚಿವ ಕೃಷ್ಣ ಭೈರೇಗೌಡ ಸ್ಪಷ್ಟಪಡಿಸಿದ್ದಾರೆ. ಕೇಂದ್ರದಿಂದ ಬರ ಪರಿಹಾರ ಹಣ ಬಿಡುಗಡೆಯಾಗುತ್ತಿದ್ದಂತೆ ರೈತರಿಗೆ ಪಾವತಿ ಮಾಡಲು ಕ್ರಮಕೈಗೊಳ್ಳಲಾಗುವುದು. ಅಲ್ಲಿಯವರೆಗೆ ತಾತ್ಕಾಲಿಕವಾಗಿ 2 ಸಾವಿರ ರೂಪಾಯಿ ಪರಿಹಾರದ ಮೊದಲ ಕಂತನ್ನು ಮುಂದಿನ ವಾರ ರೈತರ ಖಾತೆಗೆ ಜಮೆ ಮಾಡಲಾಗುತ್ತದೆ ಎಂದು ತಿಳಿಸಿದರು.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ ಪ್ರಶ್ನೆಗೆ ಉತ್ತರಿಸಿದ ಸಚಿವರು ಈ ವರ್ಷ ಬರ ಜನರಿಗೆ ಬಾಧೆಯಾಗುತ್ತಿದೆ. ಸರ್ಕಾರ ಏನೆಲ್ಲಾ ಮಾಡಬೇಕೋ ಅದನ್ನು ನಿರಂತರವಾಗಿ ಮಾಡುತ್ತಿದ್ದೇವೆ. ಸಿಎಂ ಅಧ್ಯಕ್ಷತೆಯಲ್ಲಿ ರಾಜ್ಯ ವಿಪತ್ತು ಪ್ರಾಧಿಕಾರ ಮೂರು ಸಭೆ ಮಾಡಿದೆ.

ಸಂಪುಟ ಉಪ ಸಮಿತಿ ಇದೆ.10 ಸಭೆ ಬರದ ಸಲುವಾಗಿ ಮಾಡಿದ್ದೇವೆ. ದೇಶದ 12 ರಾಜ್ಯಗಳಲ್ಲಿ ಮುಂಗಾರು ಅವಧಿಯ ಬರಗಾಲ ಇದೆ. 18 ರಾಜ್ಯಗಳಲ್ಲಿ ಹಿಂಗಾರು ಅವಧಿಯಲ್ಲಿ ಬರಗಾಲ ಆವರಿಸಿದೆ.  ಮುಂಗಾರು ಅವಧಿಯಲ್ಲಿಸೆಪ್ಟೆಂಬರ್ 13 ರಂದೇ ರಾಜ್ಯದಲ್ಲಿ ಬರಗಾಲ ಘೋಷಣೆ ಆಗಿತ್ತು.

ಇದನ್ನೂ ಓದಿ ಯಾವ ಬೆಳೆಗೆ ಎಷ್ಟು ಬೆಳೆ ವಿಮೆ ಜಮೆ ಆಗಲಿದೆ? ಇಲ್ಲೇ ಚೆಕ್ ಮಾಡಿ

ಬೇರೆ ರಾಜ್ಯಗಳು ನಾವು ಘೋಷಿಸಿದ 2 ತಿಂಗಳ ನಂತರ ಘೋಷಣೆ ಮಾಡಿವೆ.  ಬರ ಪರಿಹಾರ ಕೊಡುವ ವಿಚಾರದಲ್ಲಿ ಕೇಂದ್ರಕ್ಕೆ ಈಗಾಗಲೇ ಮನವಿ ಸಲ್ಲಿಸಲಾಗಿದೆ. ಕೇಂದ್ರ ಸರ್ಕಾರ ಇನ್ನೂತೀರ್ಮಾನ ಮಾಡದ ಕಾರಣ ಭಾಗಶಃ ಪರಿಹಾರವಾಗಿ 2 ಸಾವಿರ ರೂಪಾಯಿಗಳಹಣವನ್ನು ಕೊಡಲು ಮುಖ್ಯಮಂತ್ರಿ ತೀರ್ಮಾನಿಸಿದ್ದಾರೆ.

ಡಿಬಿಟಿ ಮೂಲಕ ಮುಂದಿನ ವಾರ ಭಾಗಶಃ ಪರಿಹಾರದ ಮೊದಲ ಕಂತನ್ನು ಹಾಕಲಿದ್ದು, ಕೇಂದ್ರದಿಂದ ಪರಿಹಾರದ ಹಣ ಬರುತ್ತಿದ್ದಂತ ಬಾಕಿ ಪರಿಹಾರದ ಹಣ ಜಮೆ ಮಾಡಲಾಗುತ್ತಿದೆ. ಪರಿಹಾರ ಹಣ ಕಡಿಮೆ ಎನ್ನುವುದು ನಿಜ. ವಿಮೆ ಮೂಲಕ ಪರಿಹಾರವೂಸಿಗಲಿದೆ. ಎಲ್ಲಾ ಸೇರಿ 4 ಸಾವಿರ ಕೋಟಿ ರೂಪಾಯಿ ಪರಿಹಾರ ಕೊಡುವ ಚಿಂತನೆ ಇದ.

ಬೆಳೆ ಹಾನಿ ಪರಿಹಾರದ ಮೊತ್ತ ಕಡಿಮೆ ಇದೆ.ಇದನ್ನು ಪರಿಷ್ಕರಿಸಲು ಕೇಂದ್ರಕ್ಕೆ ಮನವಿ ಮಾಡಿದ್ದೇವೆ. ಇದರ ಜೊತೆಗೆನಾವು ನಮ್ಮ ಸರ್ಕಾರದ ವತಿಯಿಂದ ರೈತರಿಗೆ ಉಂಟಾಗುವಲ ನಷ್ಟ ಕಡಿಮೆ ಮಾಡಲು ಎಲ್ಲಾರೀತಿಯ ಪ್ರಯತ್ನ ನಡೆಸಲಿದೆ. ಕೇಂದ್ರದ ಹಣ ಬಂದರೆ ಕೂಡ ತನ್ನ ಇತರ ಸಂಪನ್ಮೂಲ ಕ್ರೊಢೀಕರಿಸಿ ರೈತರಿಗೆ ನೆರವು ನೀಡಲು ಬದ್ದವಿದೆಎಂದು ಸಚಿವರು ತಿಳಿಸಿದ್ದಾರೆ.

ಬರ ಪರಿಹಾರದ ಸ್ಟೇಟಸ್ ಮೊಬೈಲ್ ನಲ್ಲೇ ಚೆಕ್ ಮಾಡಿ

ರೈತರು ಬರ ಪರಿಹಾರದ ಸ್ಟೇಟಸ್ ಮೊಬೈಲ್ ನಲ್ಲಿ ಚೆಕ್ ಮಾಡಲು ಈ

https://landrecords.karnataka.gov.in/PariharaPayment/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಪರಿಹಾರ ಹಣ ಸಂದಾಯ ವರದಿ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಆಧಾರ್ ಸಂಖ್ಯೆ ಆಯ್ಕೆ ಮಾಡಿಕೊಳ್ಳಬೇಕು. ಸೆಲೆಕ್ಟ್ ಕಾಲಾಮಿಟಿ ಟೈಪ್ ನಲ್ಲಿ Drought ಆಯ್ಕೆ ಮಾಡಿಕೊಳ್ಳಬೇಕು. ನಂತರ ಇಯರ್ ನಲ್ಲಿ 2023-24 ಆಯ್ಕೆ ಮಾಡಿಕೊಳ್ಳಬೇಕು. ನಂತರ ಅಲ್ಲಿ ಕಾಣುವ ಆಧಾರ್ ಸಂಖ್ಯೆ ನಮೂದಿಸಿ ಕೆಳಗಡೆ  ಆಧಾರ್ ಕಾರ್ಡ್ ನಂಬರ್ ಹಾಕಬೇಕು. ನಂತರ ಕ್ಯಾಪ್ಚ್ಯಾ ಕೋಡ್ ನಮೂದಿಸಬೇಕು. ನಂತರ ವಿವರಗಳನ್ನು ಪಡೆಯಲು / Fetch Details ಮೇಲೆ ಕ್ಲಿಕ್ ಮಾಡಬೇಕು.

ಅಲ್ಲಿ ನಿಮ್ಮ ಜಿಲ್ಲೆ ಕಾಣಿಸುತ್ತದೆ. ಬ್ಯಾಂಕಿನ ಹೆಸರು, ನಿಮಗೆ ಜಮೆಯಾದ ಹಣದ ಮೊತ್ತ, ನಿಮ್ಮ ಹೆಸರು, ಅಕೌಂಟ್ ನಂಬರ್, ಸಂದಾಯವಾದ ದಿನಾಂಕ, ಕೆಳಗೆ ಆಧಾರ್ ನಂಬರ್, ಜಿಲ್ಲೆ, ತಾಲೂಕು, ಹೋಬಳಿ ಗ್ರಾಮ ಕಾಣಿಸುತ್ತದೆ. ಸರ್ವೆ ನಂಬರ್, ಬೆಳೆಯ ಹೆಸರು, ಬೆಳೆಯ ವಿಧ ಹಾಗೂ ಎಷ್ಟು ಎಕರೆಗೆ ನಿಮಗೆ ಹಣ ಜಮೆಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ. ಇದನ್ನೆಲ್ಲಾ ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಯಾರ ಸಹಾಯವೂ ಇಲ್ಲದೆ ಚೆಕ್ ಮಾಡಿಕೊಳ್ಳಬಹುದು.

Leave a Comment