ಜಮೆಯಾಯಿತು ಬೆಳೆ ಹಾನಿ ಪರಿಹಾರ ಹಣ- ನಿಮ್ಮ ಹೆಸರು ಚೆಕ್ ಮಾಡಿ

Written by Ramlinganna

Updated on:

Crop damage compensation money ಬೆಳೆ ಹಾನಿ ಪರಿಹಾರ ಹಣ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಒಂದೊಂದಾಗಿ ಜಮೆ ಮಾಡಲಾಗುತ್ತಿದೆ. ಹೌದು, ಮುಗಾರು ಹಂಗಾಮಿನಲ್ಲಿ ಸುರಿದ ಮಳೆಯಿಂದಾಗಿ ರಾಜ್ಯದಲ್ಲಿ ಪ್ರಸಕ್ತ ವರ್ಷ ಅಪಾರ ಬೆಳೆ ಹಾನಿಯಾಗಿತ್ತು. ಹಾಗಾಗಿ ರಾಜ್ಯ ಸರ್ಕಾರವು ಪರಿಹಾರ ತಂತ್ರಾಂಶದಲ್ಲಿ ರೈತರ ಮಾಹಿತಿ ಅಪ್ಲೋಡ್ ಮಾಡುತ್ತಿದ್ದಂತೆ ರೈತರ ಖಾತೆಗೆ ಪರಿಹಾರ ಹಣ ಜಮೆ ಮಾಡಲಾಗುತ್ತಿದೆ.

Crop damage compensation money ಹಾವೇರಿ ಜಿಲ್ಲೆಯ ಹಿರೇಕೇರೂರ ಹಾಗೂ ರಟ್ಟೇಹಳ್ಳಿ ರೈತರಿಗೂ ಪರಿಹಾರ ಹಣ ಜಮೆ

ಪ್ರಸಕ್ತ ವರ್ಷ ಮುಂಗಾರು ಹಂಗಾಮಿನಲ್ಲಿ ಸುರಿದ ಮಳೆಯಿಂದಾಗಿ ಬೆಳೆ ಹಾನಿಯಾದ ಹಿರೇಕೇರೂರ ಹಾಗೂ ರಟ್ಟೇಹಳ್ಳಿ ತಾಲೂಕಿನ ರೈತರಿಗೆ ಖಾತೆಗೆ ಬೆಳೆ ಹಾನಿ ಪರಿಹಾರ ಹಣ ಜಮೆ ಮಾಡಲಾಗಿದೆ ಎಂದು ಇತ್ತೀಚೆಗೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿಕೆ ನೀಡಿದ್ದರು. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ,  ಬೆಳೆ ಹಾನಿಯಾದ ರೈತರ ಖಾತೆಗೆ ಡಿಬಿಟಿ ಮೂಲಕ ರೈತರ ಖಾತೆಗೆ ನೇರವಾಗಿ ಜಮೆ ಮಾಡಲಾಗಿದೆ. ಹಿರೇಕೇರೂರ ತಾಲೂಕಿನ ರೈತರಿಗೆ 27.77 ಹಾಗೂ ರಟ್ಟೇಹಳ್ಳಿ ತಾಲೂಕಿನಗೆ 33.97 ಕೋಟಿ ರೂಪಾಯಿರೈತರ ಖಾತೆಗೆ ಜಮೆ ಮಾಡಲಾಗಿದೆ  ಎಂದು ತಿಳಿಸಿದ್ದರು.

ಚಿತ್ರದುರ್ಗ ಜಿಲ್ಲೆಯ ರೈತರ ಖಾತೆಗೂ 223 ಕೋಟಿ ರೂಪಾಯಿ ಬೆಳೆ ಹಾನಿ ಪರಿಹಾರ ಹಣ ಜಮೆ

ಮುಂಗಾರು ಹಂಗಾಮಿನಲ್ಲಿ ಅತೀವೃಷ್ಠಿಯಿಂದಾಗಿ ಸಂಭವಿಸಿದ ಬೆಳೆ ಹಾನಿಗೆ ಚಿತ್ರದುರ್ಗ ಜಿಲ್ಲೆಯ ರೈತರ ಖಾತೆಗೆ 223.30 ಕೋಟಿ ರೂಪಾಯಿ ಬೆಳೆ ಹಾನಿ ಪರಿಹಾರ ಹಣ ಜಮೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.

ಇದನ್ನೂ ಓದಿ : ನಿಮ್ಮ ಸರ್ವೆ ನಂಬರ್ ಅಕ್ಕಪಕ್ಕದ ಯಾವ ಮಾಲಿಕರಿಗೆ ಎಷ್ಟು ಜಮೀನಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ

ಅವರು ಚಿತ್ರದುರ್ಗ ಜಿಲ್ಲೆಯ ನಗರ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ  ಜಿಲ್ಲಾಮಟ್ಟದ ವಿವಿಧ ಇಲಾಖಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಬೆಳೆ ಹಾನಿಯಾದ ರೈತರ ಮಾಹಿತಿ ಪರಿಹಾರ ತಂತ್ರಾಂಶದಲ್ಲಿ ದಾಖಲಿಸಿದ ನಂತರ ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗಿದೆ.

ನಿಮ್ಮ ಖಾತೆಗೆ ಜಮೆಯಾಗಿದೆಯೇ? ಇಲ್ಲೇ ಚೆಕ್ ಮಾಡಿ

ಚಿತ್ರದುರ್ಗ ಹಾಗೂ ಹಾವೇರಿ ಜಿಲ್ಲೆ ಸೇರಿದಂತೆ ಇತರ ಜಿಲ್ಲೆಯ ರೈತರೂ ತಮ್ಮ ಖಾತೆಗೆ ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿರುವುದನ್ನು ಹಾಗೂ ಎಷ್ಟು ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ

https://landrecords.karnataka.gov.in/PariharaPayment/

ಲಿಂಕ್ ಮೇಲೆ ಕ್ಲಿಕ್ ಮಾಡಲೇಬೇಕು. ಆಗ  ಪರಿಹಾರ ಪೇಮೆಂಟ್ ರಿಪೋರ್ಟ್ ಪೇಜ್ ಕಾಣಿಸುತ್ತದೆ. ಅಲ್ಲಿ ಆಧಾರ್ ಸಂಖ್ಯೆ ಆಯ್ಕೆ ಮಾಡಿ ನಂತರ Flood  ಹಾಗೂ 2022-23 ಆಯ್ಕೆ ಮಾಡಿಕೊಳ್ಳಬೇಕು.  ಆಧಾರ್ ಸಂಖ್ಯೆ ಹಾಗೂ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ನಮೂದಿಸಿದ ನಂತರ ವಿವರಗಳನ್ನು ಪಡೆಯಲು ಕ್ಲಿಕ್ ಮಾಡಿ ನಿಮಗೆ ಜಮೆಯಾಗಿರುವ ಕುರಿತು ಚೆಕ್ ಮಾಡಬಹುದು.

ಬೆಳೆ ಹಾನಿ ಪರಿಹಾರ ಹಣ ಯಾವ ರೈತರಿಗೆ ಜಮೆಯಾಗುತ್ತದೆ?

ಪ್ರಸಕ್ತ ವರ್ಷ ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಯಾದ ಎಲ್ಲಾ ರೈತರಿಗೂ ಪರಿಹಾರ ಹಣ ಜಮೆಯಾಗಬೇಕು. ಆದರೆ ಬೆಳೆ ಹಾನಿಯಾಗಿರುವ ಕುರಿತು ರೈತರು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತ್ ನಲ್ಲಿ ಬೆಳೆ ಹಾನಿಯಾಗಿರುವ ಕುರಿತು ಮಾಹಿತಿ ನೀಡಿರಬೇಕು. ಜಮೀನಿನ ಪಹಣಿ, ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ ಬುಕ್ ಝರಾಕ್ಸ್ ಪ್ರತಿ ನೀಡಿರಬೇಕು. ಅಂತಹ ರೈತಿಗೆ ಬೆಳೆ ಹಾನಿ ಪರಿಹಾರ ಹಣ ಜಮೆಯಾಗುವುದು. ಯಾವ ರೈತರು ಬೆಳೆಹಾನಿಯಾಗಿರುವ ಕುರಿತು ಗ್ರಾಮ ಪಂಚಾಯತ್ ನಲ್ಲಿ ಅರ್ಜಿ ಸಲ್ಲಿಸಿರುವುದಿಲ್ಲವೋ ಅಂತಹ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಹಣ ಜಮೆಯಾಗುವುದು ಸಾಧ್ಯತೆ ಕಡಿಮೆಯಿರುತ್ತದೆ.

Leave a Comment