ಬೆಳೆಹಾನಿಯಾಗಿ ಸಂಕಷ್ಟಕ್ಕೊಳಗಾದ ರೈತರಿಗೆ ರಾಜ್ಯ ಸರ್ಕಾರ ಸಂತಸದ ಸುದ್ದಿ ನೀಡಿದೆ. ಇತ್ತೀಚೆಗೆ ಸುರಿದ ಮಳೆಯಿಂದಾಗಿ ರೈತರ ಅಪಾರ ಬೆಳೆ ಹಾನಿಯಾಗಿತ್ತು, ಬೆಳೆ ಹಾನಿಯಾದ ರಾಜ್ಯದ 4.61 ಲಕ್ಷ ರೈತರಿಗೆ 318.87 ಕೋಟಿ ರೂಪಾಯಿ ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆಮಾಡಲಾಗಿದೆ ಎಂದು  ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಇತ್ತೀಚೆಗೆ ರಾಜ್ಯಾದ್ಯಂತ ಸುರಿದ ಅಕಾಲಿಕ ಮಳೆಯಿಂದಾಗಿ ರೈತರ ಅಪಾರ ಬೆಳೆ ಮತ್ತು ಆಸ್ತಿ ಹಾನಿಯಾಗಿತ್ತು.  ಬೆಳೆ ಪರಿಹಾರ ಮೊತ್ತವನ್ನು ಮದ್ಯವರ್ತಿಗಳಿಗೆ ಅವಕಾಶವಿಲ್ಲದಂತೆ ನೇರವಾಗಿ ರೈತರ ಖಾತೆಗಳಿಗೆ ವರ್ಗಾಯಿಸಲಾಗಿದೆ. ಬೆಳೆ ಪರಿಹಾರಕ್ಕೆ ಸಂಬಂಧಿಸಿದಂತೆ ಇಂದಿನವರೆಗೆ 3 ಲಕ್ಷ ರೈತರಿಗೆ 276.57 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. ಇಂದು (ಬುಧವಾರ) 1.61 ಲಕ್ಷ ರೈತರಿಗೆ 92.30 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ. ಒಟ್ಟು 4.61 ಲಕ್ಷ ರೈತರಿಗೆ 318.87 ಕೋಟಿ ರೂಪಾಯಿ ನೇರವಾಗಿ ರೈತರ ಖಾತೆಗೆ ಜಮೆಮಾಡಲಾಗಿದೆ. ಇದೇ ಮೊದಲ ಬಾರಿಗೆ ಬೆಳೆ ಹಾನಿ ವರದಿ ಬಂದ ತಕ್ಷಣ ಹಣ ಸಂದಾಯ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಹಿಂದೆ ಮೂರು ತಿಂಗಳಿಗೊಮ್ಮೆ  ಪರಿಹಾರ ವಿತರಿಸಲಾಗುತ್ತಿತ್ತು. ಆದರೆ ಈ ವರ್ಷ ಎರಡು- ಮೂರು ದಿನಕ್ಕೊಮ್ಮೆ ತಂತ್ರಾಂಶದಲ್ಲಿ ನಮೂದಿಸಿದ ಪರಿಹಾರ ಹಣ ಬಿಡುಗಡೆ ಮಾಡಲು ಆದೇಶಿಸಲಾಗಿದೆ. ಈ ವ್ಯವಸ್ಥೆಯನ್ನು ಸಂಪೂರ್ಣವ ಗಿ ಬದಲಾವಣೆ ಮಾಡಲಾಗಿದೆ. ಬೆಳೆ  ಪರಿಹಾರ ನೀಡಲು ರಾಜ್ಯದಲ್ಲಿ ಹಣಕಾಸಿನ ಕೊರತೆಯಿಲ್ಲ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಪರಿಹಾರದ ಹಣ ನಿಮ್ಮ ಖಾತೆಗೆ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲಿಯೇ ನೋಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ. ಇಲ್ಲಿದೆ ಮಾಹಿತಿ

ರೈತರು ಪರಿಹಾರ ಸ್ಟೇಟಸ್ ನೋಡಲು  ಈ  https://landrecords.karnataka.gov.in/PariharaPayment/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪರಿಹಾರ ವೆಬ್ ಪೇಜ್ ಓಪನ್ ಆಗುತ್ತದೆ. ಅಲ್ಲಿ ಆಧಾರ್ ಸಂಖ್ಯೆಯನ್ನು ಆಯ್ಕೆ ಮಾಡಿಕೊಂಡು ವಿಪತ್ತು (calamity Type) ಕಾಲಂನಲ್ಲಿ  Flood ಆಯ್ಕೆ ಮಾಡಿಕೊಳ್ಳಬೇಕು.ವರ್ಷದಲ್ಲಿ 2021-22 ಆಯ್ಕೆ ಮಾಡಿಕೊಳ್ಳಬೇಕು. ನಂತರ ಕ್ಯಾಪ್ಚ್ಯಾ ಕೋಡ್ ನಮೂದಿಸಿ Fetch details ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಖಾತೆಗೆ ಹಣ ಜಮೆಯಾಗಿದೆಯೋ ಇಲ್ಲವೋ ಹಾಗೂ ಎಷ್ಟು ಜಮೆಯಾಗಿದೆ. ಯಾವ ಬ್ಯಾಂಕಿನಲ್ಲಿ ಯಾವ ದಿನಾಂಕದಂದು ಜಮೆಯಾಗಿದೆ ಎಂಬ ಮಾಹಿತಿ ಕಾಣುತ್ತದೆ. ಕಳೆದ ವರ್ಷದ ಅಂದರೆ 2020-21ನೇ ಸಾಲಿನ ಪರಿಹಾರ ಸ್ಟೇಟಸ್ ಸಹ ನೋಡಿಕೊಳ್ಳಬಹುದು.  ವರ್ಷದಲ್ಲಿ 2020-21 ಆಯ್ಕೆ ಮಾಡಿಕೊಳ್ಳಬೇಕು. ಆಧಾರ್ ಸಂಖ್ಯೆ ನಮೂದಿಸಬೇಕು. ಕ್ಯಾಪ್ಚ್ಯಾ ಕೋಡ್ ನಮೂದಿಸಿ ವಿವರಗಳನ್ನು ಪಡೆಯಲು /Fetch details ಮೇಲೆ ಕ್ಲಿಕ್ ಮಾಡಬೇಕು.  ಆಗ ಹಣ ನಿಮ್ಮ ಖಾತೆಗೆ ಜಮೆಯಾಗಿದ್ದರೆ ಡಿಟೇಲ್ ಇರುತ್ತದೆ. ಈ ವಾರದಲ್ಲಿ ಎಲ್ಲಾ ರೈತರ ಖಾತೆಗೆ ಹಣ ಜಮೆ ಮಾಡುವ ಸಾಧ್ಯತೆಯಿದೆ.

ಇದನ್ನೂ ಓದಿ :ಮೊಬೈಲ್ ನಲ್ಲಿಯೇ ಪಿಎಂ ಕಿಸಾನ್ ಯೋಜನೆಯ ಸ್ಟೇಟಸ್ ಚೆಕ್ ಮಾಡಿ

Leave a Reply

Your email address will not be published. Required fields are marked *