crop insurance application status ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ವಿಮೆ ಕಟ್ಟಿದ ರೈತರಿಗಿಲ್ಲಿದೆ ಸಂತಸದ ಸುದ್ದಿ. ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಅರ್ಜಿ ಸಲ್ಲಿಸಿದ ರೈತರು ಅರ್ಜಿ ಸರಿಯಾಗಿ ಸ್ವೀಕೃತವಾಗಿದೆಯೋ ಇಲ್ಲವೋ ಎಂಬುದನ್ನು ನೋಡಲು ಎಲ್ಲಿಯೂ ಹೋಗಬೇಕಿಲ್ಲ. ಮನೆಯಲ್ಲಿಯೇ ಕುಳಿತು ನಿಮ್ಮ ಮೊಬೈಲ್ ನಲ್ಲಿಯ ಪರಿಶೀಲಿಸಿಕೊಳ್ಳಬಹುದು ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ಮಾಹಿತಿ.
ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ವಿವಿಧ ಬೆಳೆಗಳ ವಿಮೆ ಮಾಡಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿತ್ತು.
2021-22ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷತಾ ಪ್ರಧಾನಮಂತ್ರಿ ಫಸಲ್ ಭೀಮಾ (ವಿಮಾ) ಯೋಜನೆಯಡಿ ರೈತರು ವಿವಿಧ ಬೆಳೆಗಳಿಗೆ ವಿಮಾ ನೋಂದಣಿ ಮಾಡಿಕೊಳ್ಳಲು ಜುಲೈ 31 ಕೊನೆಯ ದಿನವಾಗಿತ್ತು. ಈ ದಿನಾಂಕದೊಳಗೆ ವಿಮೆ ಕಟ್ಟಿದ್ದಾರೆ.
ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆ ಅಭಾವ ಅಥವಾ ಇತರೆ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಥವಾ ಸ್ಥಳ ನಿರ್ದಿಷ್ಟ, ಪ್ರಕೃತಿ ವಿಕೋಪಗಳಾದ ಅಲ್ಲಿಕಲ್ಲು ಮಳೆ, ಭೂ ಕುಸಿತ, ಬೆಳೆ ಮುಳುಗಡೆ, ಮೇಘಾ ಸ್ಪೋಟ ಹಾಗೂ ಗುಡುಗು ಮಿಂಚುಗಳಿಂದ ಉಂಟಾಗುವ ಬೆಂಕಿ ಅವಗಡ ಸಂದರ್ಭದಲ್ಲಿ ಬೆಳೆ ನಷ್ಟ ಉಂಟಾದಲ್ಲಿ ರೈತರು ಬೆಳೆ ವಿಮೆಯ ಸದುಪಯೋಗ ಪಡೆಯಬಹುದು
crop insurance application status ಬೆಳೆ ವಿಮೆಯ ಸ್ಟೇಟಸ್ ಚೆಕ್ ಮಾಡಿ
ವಿಮೆ ಕಟ್ಟಿದ ಬಹುತೇಕ ರೈತರ ಅರ್ಜಿ ಕೆಲವು ಕಾರಣಗಳಿಂದ ತಿರಸ್ಕೃತವಾಗಿರುತ್ತದೆ. ಆದರೆ ಯಾವ ಕಾರಣಕ್ಕಾಗಿ ಅರ್ಜಿ ತಿರಸ್ಕೃತವಾಗಿದೆಯೆಂಬುದು ರೈತರಿಗೆ ಗೊತ್ತಿರುವದಿಲ್ಲ. ಈಗ ವಿಮೆ ಹಣ ಬಿಡುಗಡೆಗಿಂತ ಮುಂಚೆಯ ಅರ್ಜಿಯ ಸ್ಥಿತಿಗತಿಯನ್ನು ತಿಳಿದುಕೊಳ್ಳಬಹುದು.
ವಿಮೆ ಕಟ್ಟಿದ ರೈತರು ಅರ್ಜಿಯ ಸ್ಥಿತಿಗತಿ ತಿಳಿದುಕೊಳ್ಳಲು
https://www.samrakshane.karnataka.gov.in/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ವರ್ಷ ಮತ್ತು ಋತು ಆಯ್ಕೆ ಮಾಡಿಕೊಳ್ಳಬೇಕು. (ಈಗಾಗಲೇ ವರ್ಷದ ಆಯ್ಕೆಯಲ್ಲಿ 2021-2022 ಮತ್ತು ಋತು ಆಯ್ಕೆಯಲ್ಲಿ Kharif) ಇದ್ದರೆ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ಫಾರ್ಮರ್ಸ್ ಕೆಳಗಡೆ ಚೆಕ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕು. ಇಲ್ಲಿ ಅಪ್ಲಿಕೇಷನ್ ನಂಬರ್ ನಿಮಗೆ ನೆನಪಿದ್ದರೆ ನಮೂದಿಸಿ ಸರ್ಚ್ ಮೇಲೆ ಕ್ಲಿಕ್ ಮಾಡಬೇಕು. ಒಂದು ವೇಳೆ ಅಪ್ಲಿಕೇಷನ್ ನಂಬರ್ ಇಲ್ಲದಿದ್ದರೆ ಮೊಬೈಲ್ ನಂಬರ್ ಸೆಲೆಕ್ಟ್ ಮಾಡಿಕೊಳ್ಳಬೇಕು. ಆಗ ಮೊಬೈಲ್ ನಂಬರ್ ನಮೂದಿಸಿ ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಿದರೆ ಸಾಕು. ನಿಮ್ಮ ಹೆಸರು ಮತ್ತು ಅರ್ಜಿಯ ಸ್ಟೇಟಸ್ ಕಂಪನಿಯಿಂದ ವಿಮೆಯ ಹಣ ಸ್ವೀಕೃತವಾಗಿದೆಯೋ ಇಲ್ಲವೋ ಹಾಗೂ ಬೆಳೆ ನೋಂದಣಿಯ ಸ್ಥಿತಿಗತಿಯನ್ನು ಪರಿಶೀಲಿಸಿಕೊಳ್ಳಬಹುದು.
ವಿಮೆ ಮಾಡಿಸಿರುವ ರೈತರು ಈ ಬೆಳೆ ಹಾನಿಯ ಕುರಿತು ಸಂಬಂಧಪಟ್ಟ ಹಣಕಾಸು ಸಂಸ್ಥೆ ಅಥವಾ ವಿಮಾ ಸಂಸ್ಥೆಯ ಕಚೇರಿಗಳಿಗೆ 48 ಗಂಟೆಯೊಳಗೆ ಮಾಹಿತಿ ನೀಡಬೇಕು. ಯಾವುದೇ ಸಂದರ್ಭದಲ್ಲಿ ವಿಮೆ ಮಾಡಿಸಿದ ಬೆಳೆಯ ವಿವರಗಳನ್ನು, ಹಾನಿಯ ವ್ಯಾಪ್ತಿ ಹಾಗೂ ಹಾನಿಗೆ ಕಾರಣವನ್ನು 48 ಗಂಟೆಗಳೊಳಗಾಗಿ ತಿಳಿಸಿದಲ್ಲಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು.
ಇದನ್ನೂ ಓದಿ ನಿಮ್ಮ ಜಮೀನಿನ ಮ್ಯಾಪ್ mobileನಲ್ಲಿ ಡೌನ್ಲೋಡ್ ಮಾಡಿ
ಮುಂಗಾರು ಹಂಗಾಮಿನಲ್ಲಿ ಅಧಿಸೂಚಿತ ಘಟಕದಲ್ಲಿ ಶೇ.75ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡಲ್ಲಿ ವಿಮಾ ಮೊತ್ತದ ಗರಿಷ್ಟ ಶೇ. 25 ರಷ್ಟು ಬೆಳೆ ವಿಮಾ ನಷ್ಟ ಪರಿಹಾರ ನೀಡಲು, ಬಿತ್ತನೆಯಿಂದ ಕಟಾವು ಹಂತದವರೆಗಿನ ಮಧ್ಯದ ಅವಧಿಯಲ್ಲಿ ಶೇ. 50 ಕ್ಕಿಂತ ಹೆಚ್ಚು ಬೆಳೆ ನಷ್ಟ ಸಂಭವಿಸಿದರೆ ಮುಂಚಿತವಾಗಿ ಅಂದಾಜು ಮಾಡಲಾದ ಬೆಳೆ ವಿಮಾ ನಷ್ಟ ಪರಿಹಾರದಲ್ಲಿ ಶೇ.25 ರಷ್ಟು ಹಣವನ್ನು ಪರಿಹಾರವಾಗಿ ನೀಡಲಾಗುವುದು. ಅಲ್ಲದೆ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ ಎರಡು ವಾರದೊಳಗೆ (ಹದಿನಾಲ್ಕು ದಿನಗಳು) ಚಂಡಮಾರುತ, ಚಂಡಮಾರುತ ಸಹಿತ ಮಳೆ ಮತ್ತು ಅಕಾಲಿಕ ಮಳೆಯಿಂದಾಗಿ ಬೆಳೆ ನಾಶವಾದರೆ ವೈಯಕ್ತಿಕವಾಗಿ ವಿಮಾ ಸಂಸ್ಥೆಯು ನಷ್ಟ ನಿರ್ಧಾರ ಮಾಡಿ ಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲಾಗುವುದು.