ನಿಮಗೆಷ್ಟು ಬೆಳೆ ವಿಮೆ ಹಣ ಜಮೆಯಾಗುತ್ತದೆ? ಇಲ್ಲೇ ಚೆಕ್ ಮಾಡಿ

Written by Ramlinganna

Updated on:

crop insurance credit check : ಹಿಂಗಾರು ಬೆಳೆ ವಿಮೆ ಮಾಡಿಸಲಿಚ್ಚಿಸುವ ರೈತರು ಕೂಡಲೇ ವಿಮೆ ಮಾಡಿಸಿ ವಿಮಾ ಸೌಲಭ್ಯ ಪಡೆಯಬಹುದು. ಹೌದು, ಹಿಂಗಾರು ಬೆಳೆ ವಿಮೆ ಮಾಡಿಸಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಯೂಟೂಬ್ ಚಾನೆಲಿಗೆ ಸಬಸ್ಕ್ರೈಬ್ ಮಾಡಿ

ಹಿಂಗಾರು ಬೆಳೆಗಳಿಗೆ ವಿಮೆ ಮಾಡಿಸಲು ರೈತರು ಕೊನೆಯ ದಿನಾಂಕದವರೆಗೆ ಕಾಯದೆ, ಬೇಗನೆ ವಿಮೆ ಮಾಡಿಸಬೇಕು. ಆದರೆ ಬಹುತೇಕ ರೈತರಿಗೆ ಯಾವ ಬೆಳೆಗೆ ಎಷ್ಟು ವಿಮೆ ಹಣ ಜಮೆಯಾಗುತ್ತದೆ? ರೈತರೆಷ್ಟು ವಿಮೆ ಹಣ ಪಾವತಿಸಬೇಕುಷ್ಟು ಹಾಗೂ ವಿಮೆ ಮಾಡಿಸಲು ಇನ್ನೆಷ್ಟು ದಿನ ಉಳಿಯಿತು ಎಂಬುದರ ಬಗ್ಗೆ ಮಾಹಿತಿಯಿರುವುದಿಲ್ಲ. ಬೆಳೆ ವಿಮೆ ಮಾಡಿಸಲಿಚ್ಚಿರುವ ರೈತರು ಮೊಬೈಲ್ ನಲ್ಲೇ ಬೆಳೆ ವಿಮೆ ಕುರಿತಂತೆ ಚೆಕ್ ಮಾಡಬಹುದು.

crop insurance credit check ಯಾವ ಬೆಳೆಗೆ ಎಷ್ಟು ಬೆಳೆ ವಿಮೆ ಹಣ ಜಮೆಯಾಗುತ್ತದೆ? ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ

ರೈತರು ಯಾವ ಬೆಳೆಗೆ ಎಷ್ಟು ವಿಮಾ ಹಣ ಜಮೆಯಾಗುತ್ತದೆ ಎಂಬುದನ್ನು ಚೆಕ್ ಮಾಡಲು ಈ

https://www.samrakshane.karnataka.gov.in/publichome.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.ಆಗ ಸಂರಕ್ಷಣೆ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ Premium Calculator ಮೇಲೆ ಕ್ಲಿಕ್ ಮಾಡಬೇಕು. ನಂತರ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ತಾಲೂಕು ಆಯ್ಕೆ ಮಾಡಿಕೊಳ್ಳಬೇಕು.  ಹೋಬಳಿ ಆಯ್ಕೆ ಮಾಡಿಕೊಳ್ಶಳಬೇಕು. ಗ್ರಾಮ ಆಯ್ಕೆ ಮಾಡಿಕೊಂಡ ನಂತರ ನೀವು ಯಾವ ಬೆಳೆಗೆ ವಿಮೆ ಮಾಡಿಸಬೇಕೆಂದುಕೊಂಡಿದ್ದೀರೋ ಆ ಬೆಳೆ ಆಯ್ಕೆ ಮಾಡಿಕೊಳ್ಳಬೇಕು. ಎಷ್ಟು ಎಕರೆಗೆ ವಿಮೆ ಮಾಡಿಸಬೇಕೆಂದುಕೊಂಡಿದ್ದೀರೋ ಅಲ್ಲಿ ನಮೂದಿಸಬೇಕು.

ಇದನ್ನೂ ಓದಿ Voter list ನಲ್ಲಿ ನಿಮ್ಮ ಹೆಸರಿದೆಯೇ? Mobileನಲ್ಲಿ ಚೆಕ್ ಮಾಡಿ

ಉದಾಹರಣೆಗೆ ನೀವು ಕಡಲೆಗೆ ಬೆಳೆಗೆ  ಒಂದು ಎಕರೆಗೆ ವಿಮೆ ಮಾಡಿಸುತ್ತಿದ್ದೀರೆಂದುಕೊಳ್ಳೋಣ. ಕಡಲೆ ಬೆಳೆ, ಒಂದು ಎಕರೆನಮೂದಿಸಿ Show Premium ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ಒಂದು ಎಕರೆಗೆ 15580 ರೂಪಾಯಿಯವರೆಗೆ ವಿಮೆ ಹಣ ಜಮೆಯಾಗುತ್ತದೆ. ನೀವು 233 ರೂಪಾಯಿ ವಿಮಾ ಹಣ ಪಾವತಿಸಬೇಕಾಗುತ್ತದೆ.  ಇದೇ ರೀತಿ ನೀವು ಇತರ ಬೆಳೆಗಳಿಗೆ ಎಷ್ಟು ಹಣ ಜಮೆಯಾಗುತ್ತದೆ ಮತ್ತು ನೀವೆಷ್ಟು ಹಣ ಪಾವತಿಸಬೇಕಾಗುತ್ತದೆ ಎಂಬುದನ್ನು ಚೆಕ್ ಮಾಡಬಹುದು. ಬೇರೆ ಬೇರೆ ಜಿಲ್ಲೆಗೆ ಬೆಳೆ ಬೆಳೆಗಳು ವಿಮೆ ಮಾಡಿಸಲು ಅವಕಾಶವಿರುತ್ತದೆ.

ನಿಮ್ಮ ಜಿಲ್ಲೆಗೆ ಬೆಳೆ ವಿಮೆ ಮಾಡಿಸಲು ಕೊನೆಯ ದಿನಾಂಕಗಳು ಯಾವುವು? ಹೀಗೆ ಚೆಕ್ ಮಾಡಿ

ಬೆಳೆ ವಿಮೆ ಮಾಡಿಸಲು ಕೊನೆಯ ದಿನಾಂಕವನ್ನು ಚೆಕ್ ಮಾಡಲು ಈ

https://samrakshanereports.karnataka.gov.in/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ತೆರೆದುಕೊಳ್ಳುವ ಪೇಜ್ ನಲ್ಲಿ  ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ Farmers ಕೆಳಗಡೆ ಇರುವ  View Cut of Dates ಮೇಲೆ ಕ್ಲಿಕ್ ಮಾಡಬೇಕು.

ಅಥವಾ

https://samrakshanereports.karnataka.gov.in/PublicView/FindCutOff.aspx

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು  ಇಲ್ಲಿ ನೀವು ನಿಮ್ಮ  ಜಿಲ್ಲೆಆಯ್ಕೆ ಮಾಡಿಕೊಳ್ಳಬೇಕು. ಆಗ ನಿಮ್ಮ ಜಿಲ್ಲೆಯಲ್ಲಿ ಯಾವ್ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು ಎಂಬುದರ ಪಟ್ಟಿ ಕಾಣಿಸುತ್ತದೆ. ಇದರೊಂದಗೆ ಯಾವ ಬೆಳೆಗೆ ವಿಮೆ ಮಾಡಿಸಲು ಕೊನೆಯ ದಿನಾಂಕ ಯಾವುದು ಹಾಗೂ ವಿಮೆ ಮಾಡಿಸಲು ಇನ್ನೂ ಎಷ್ಟುದಿನ ಉಳಿದಿದೆ ಎಂಬುದೆಲ್ಲಾ ಮಾಹಿತಿ ಕಾಣಿಸುತ್ತದೆ.

ಕೊನೆಯ ದಿನಾಂಕದವರೆಗೆ ಕಾಯದೆ ಕೂಡಲೇ ಬೆಳೆ ವಿಮೆ ಮಾಡಿಸಿಕೊಳ್ಳಿ. ತಡವಾದ ನಂತರ ತಾಂತ್ರಿಕ ಸಮಸ್ಯೆಯಾಗಬಹುದು. ಹಾಗಾಗಿ ಕೂಡಲೇ ಬೆಳೆ ವಿಮೆ ಮಾಡಿಸಿ. ನಿಮ್ಮಹತ್ತಿರದ ರೈತ ಸಂಪರ್ಕ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ವಿಮೆ ಮಾಡಿಸಬಹುದು.

Leave a Comment