Crop insurance credited : ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಬೆಳೆ ವಿಮೆ ಮಾಡಿಸಿದ ರೈತರಿಗೆ ಗುಡ್ ನ್ಯೂಸ್. ಹೌದು, 2025-26ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದ ರೈತರ ಖಾತೆಗೆ ಬೆಳೆ ವಿಮೆ ಹಣ ಜಮೆಯಾಗಿದೆ. ಕೆಲವು ಕಾರಣಗಳಿಂದ ಈ ರೈತರಿಗೆ ಬೆಳೆ ವಿಮೆ ಹಣ ಜಮೆಯಾಗಿರಲಿಲ್ಲ. ಈಗ ರೈತರ ಖಾತೆಗೆ ಬೆಳೆ ವಿಮೆ ಹಣ ಜಮೆಯಾಗಿದೆ. ನಿಮಗೆಷ್ಟು ಜಮೆಯಾಗಿದೆ ಎಂಬುದನ್ನು ರೈತರು ಈಗ ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
Crop insurance credited 585 ಕೋಟಿ ಬೆಳೆ ವಿಮೆ ಪರಿಹಾರ ಮಂಜೂರು
2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 3 ಲಕ್ಷ ರೈತರು ಬೆಳೆ ವಿಮೆ ನೋಂದಣಿ ಮಾಡಿಸಿದ್ದರು. ರಾಜ್ಯ ಸರ್ಕಾರದಿಂದ 585.72 ಕೋಟಿ ರೂಪಾಯಿ ಬೆಳೆ ವಿಮೆ ಪರಿಹಾರ ಮಂಜೂರಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದರು.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು 2,87,696 ರೈತರಿಗೆ ಒಟ್ಟು 243.52 ಕೋಟಿ ರೂಪಾಯಿ ಬೆಳೆ ವಿಮೆ ಪರಿಹಾರದ ಮೊದಲನೇ ಕಂತನ್ನು ಈಗಾಗಲೇ ಜಮೆ ಮಾಡಲಾಗಿದೆ (ಬೆಳೆ ಮದ್ಯಂತರ ಪರಿಹಾರ) ಜಿಲ್ಲೆಯ 2,67,133 ರೈತರಿಗೆ 234.73 ಕೋಟಿ ಹಾಗೂ ಸ್ಥಳೀಯ ವಿಕೋಪದಡಿ 20,563 ರೈತರಿಗೆ 8.79 ಕೋಟಿ ರೂಪಾಯಿ ಬೆಳೆ ವಿಮೆ ಹಣ ಜಮೆ ಮಾಡಲಾಗಿತ್ತು.
ಎರಡನೇ ಕಂತಿನ 54 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು, ಕೆಲವೇ ದಿನಗಳಲ್ಲಿ ರೈತರ ಖಾತೆಗೆ ಜಮೆಯಾಗಲಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದರು. ಅವರ ಹೇಳಿಕೆಯಂತೆ ಈಗ ರೈತರ ಖಾತೆಗೆ ಬೆಳೆ ವಿಮೆ ಹಣ ಜಮೆಯಾಗಿದೆ. ಇನ್ನೂ ಯಾವ ಯಾವ ರೈತರ ಖಾತೆಗೆ ಜಮೆಯಾಗಿಲ್ಲವೋ ಇನ್ನೆರಡು ದಿನಗಳಲ್ಲಿ ಖಾತೆಗೆ ಹಣ ಜಮೆಯಾಗಲಿದ.. ಇನ್ನುಳಿದ 67 ಕೋಟಿ ರೂಪಾಯಿ ಕೆಲವೇ ದಿನಗಳಲ್ಲಿ ಜಮೆ ಮಾಡಲು ಕ್ರಮ ಜರುಗಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.
ಬೆಳೆ ಹಾನಿ ಪರಿಹಾರ – 2025-26ನೇ ಸಾಲಿ ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಹೆಚ್ಚಿನ ಮಳೆಯಿಂದಾಗಿ ಅತೀವೃಷ್ಟಿಯಿಂದ 3.24 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿತ್ತು.
ಹಾಗೆ ಬೆಳೆ ಹಾನಿಯಾದ 3,26,183 ರೈತರಿಗೆ ಒಟ್ಟು 498.73 ಕೋಟಿ ಬೆಳೆ ಹಾನಿ ಪರಿಹಾರವನ್ನ ನೇರ ನಗದು ವರ್ಗಾವಣೆ ಮೂಲಕ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಎನ್.ಡಿ.ಆರ್.ಎಪ್ ಹಾಗೂ ಎಸ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ 250 ಕೋಟಿ ಹಾಗೂ ರಾಜ್ಯ ಸರ್ಕಾರದಿಂದ ವಿಶೇಷ ಪ್ಯಾಕೇಜ್ ನಡಿ 248.73 ಕೋಟಿ ಬೆಳೆ ಹಾನಿ ಪರಿಹಾರ ಜಮೆಯಾಗಿದೆ ಎಂದು ವಿವರಿಸಿದ್ದಾರೆ.
ಕಲಬುರಗಿ ಜಿಲ್ಲೆಯ ರೈತರಿಗೆ 2025-26ನೇ ಸಾಲಿನಲ್ಲಿ ಎನ್.ಡಿ.ಆರ್.ಎಫ್ ಹಾಗೂ ಎಸ್..ಡಿ.ಆರ್.ಎಫ್ ಮಾರ್ಗಸೂಚಿಯಂತೆ 250 ಕೋಟಿ ರೂಪಾಯಿ ರಾಜ್ಯ ಸರ್ಕಾರದ ವಿಶೇಷ ಪ್ಯಾಕೇಜ್ ನಡಿ 248 ಕೋಟಿ ರೂಪಾಯಿ ಹಾಗೂ ಬೆಳೆ ವಿಮೆ ಪರಿಹಾರವಾಗಿ 585 ಕೋಟಿ ಹೀಗೆ ಒಟ್ಟು 1084 ಕೋಟಿ ರೂಪಾಯಿ ಪರಿಹಾರ ಬಿಡುಗಡೆಗೆ ಕ್ರಮವಹಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಬೆಳೆ ವಿಮೆ ಅರ್ಜಿ ಸ್ಟೇಟಸ್ ಮೊಬೈಲ್ ನಲ್ಲೇ ಚೆಕ್ ಮಾಡಿ
ಬೆಳೆ ವಿಮೆ ಮಾಡಿಸಿದ ನಂತರ ರೈತರು ಬೆಳೆ ವಿಮೆ ಪಾವತಿಯಾದ ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ರೈತರು ಅರ್ಜಿ ಸಲ್ಲಿಸಿದ ನಂತರ ಎರಡು ದಿನಗಳ ನಿಂತ ನಿಮ್ಮ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸರಿಯಾದ ರೀತಿಯಲ್ಲಾಗಿದೆಯೋ ಇಲ್ಲವೋ ನಿಮ್ಮ ಹಣ ಪಾವತಿಯಾಗಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ನಿಮ್ಮ ಅರ್ಜಿಯ ಸ್ಟೇಟಸನ್ನು
ಮೊಬೈಲ್ ನಲ್ಲಿ ಚೆಕ್ ಮಾಡಬೇಕಾದರೆ ಈ
https://www.samrakshane.karnataka.gov.in/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು 2025-26 ಆಯ್ಕೆ ಮಾಡಿಕೊಳ್ಳಬೇಕು. ಇದಾದನಂತರ ಮುಂದೆ/Go ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ನಂತರ Check status ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ಅಲ್ಲಿ ಮೊಬೈಲ್ ನಂಬರ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಮೊಬೈಲ್ ನಂಬರ್ ನಮೂದಿಸಿ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ನಂತರ ಸರ್ಚ್ ಮೇಲೆ ಕ್ಲಿಕ್ ಮಾಡಿದರೆ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅದಾದ ಮೇಲೆ ಪ್ರೊಪೋಸಲ್ ನಂಬರ್, ಮೊಬೈಲ್ ನಂಬರ್, ಆಧಾರ್ ನಂಬರ್, ನಿಮ್ಮ ಹೆಸರು, ಕಾಣಿಸುತ್ತದೆ. ಸ್ಟೇಟಸ್ ನಲ್ಲಿ ಪೇಮೆಂಟ್ ಸಕ್ಸೆಸ್ ಆಗಿದೆಯೋ ಇಲ್ಲವೋ ಎಂಬ ಮಾಹಿತಿ ಕಾಣಿಸುತ್ತದೆ. ಇದಾದ ನಂತರ ನೀವು ವೀವ್ ಡಿಟೇಲ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ಆಗ ನೀವು ಎಷ್ಟು ಹಣ ಪಾವತಿಸಿದ್ದೀರಿ ಬೆಳೆ ಹಾನಿಯಾದರೆ ಎಷ್ಟು ವಿಮೆ ಹಣ ಜಮೆಯಾಗಿದೆ ಎಂಬ ಮಾಹಿತಿ ನಿಮಗೆ ಕಾಣಿಸುತ್ತದೆ.





