ಬೆಳೆ ವಿಮೆ ಹಣ ಜಮೆಯಾಗಿಲ್ಲವೇ? ಈ ನಂಬರಿಗೆ ಕರೆ ಮಾಡಿ

Written by Ramlinganna

Updated on:

Crop insurance helpline number ಮುಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದ ರೈತರಿಗೆ ಇನ್ನೂ ಬೆಳೆ ವಿಮೆ ಹಣ ಜಮೆಯಾಗಿಲ್ಲವೇ? ಕೂಡಲೇ ನಿಮ್ಮ ವಿಮಾ ಕಂಪನಿಗೆ ಕರೆ ಮಾಡಿ. ನಿಮ್ಮ ಜಿಲ್ಲೆಯ ವಿಮಾ ಕಂಪನಿಯ ನಂಬರ್ ಇಲ್ಲಿದೆ.

ಪ್ರಸಕ್ತ ಸಾಲಿನ ಅಂದರೆ 2023-24ನೇ ಸಾಲಿನ ಹಾಗೂ ಕಳೆದ ಸಾಲಿನ 2022-23ನೇ ಸಾಲಿಗೆ ಮುಂಗಾರು ಹಾಗೂ ಹಿಂಗಾರು ಹಂಗಾಮಿಗೆ ಬೆಳೆ ವಿಮೆ ಪಾವತಿಸಿದ ರೈತರಿಗೆ ಇನ್ನೂ ಬೆಳೆ ವಿಮೆ ಹಣ ಏಕೆ ಜಮೆಯಾಗಿಲ್ಲ? ಯಾರಿಗೆ ಕರೆ ಮಾಡಬೇಕೆಂಬ ಚಿಂತೆಯಲ್ಲಿದ್ದರೆ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

ರೈತರು ಬೆಳೆ ವಿಮೆ ಹಣ ಪಾವತಿಸಿರುತ್ತಾರೆ. ಆದರೆ ಯಾವ ವಿಮಾ ಕಂಪನಿಗೆ ಹಣ ಪಾವತಿಸಿದ್ದಾರೆ? ಆ ವಿಮಾ ಕಂಪನಿಯ ನಂಬರ್ ಪಡೆದುಕೊಂಡಿರುವುದಿಲ್ಲ. ಬೆಳೆ ವಿಮೆ ಪಾವತಿಸಿದ ನಂತರ ರೈತರೇನು ಮಾಡಬೇಕು? ಬೆಳೆ ಹಾನಿಯಾದರೆ ಯಾರಿಗೆ ಕರೆ ಮಾಡಬೇಕು? ಬೆಳೆ ವಿಮೆ ಹಣ ಹೇಗೆ ನಿರ್ಧರಿಸಿರುತ್ತಾರೆ ಎಂಬುದರ ಬಗ್ಗೆ ಕೆಲವು ರೈತರಿಗೆ ಮಾತ್ರ ಮಾಹಿತಿ ಇರುತ್ತದೆ.

Crop insurance helpline number ನಿಮ್ಮ ಜಿಲ್ಲೆಯ ವಿಮಾ ಕಂಪನಿ ಯಾವುದು?

ಬೆಳೆ ವಿಮೆ ಪಾವತಿಸಿದ ರೈತರು ತಮ್ಮ ಜಿಲ್ಲೆಗೆ ಯಾವ ವಿಮಾ ಕಂಪನಿಯನ್ನು ನಿಯೋಜಿಸಲಾಗಿದೆ. ಅಂದರೆ ರೈತರು ಯಾವ ವಿಮಾ ಕಂಪನಿಗೆ ಹಣ ಪಾವತಿಸಿದ್ದಾರೆ ಎಂಬುದನ್ನು ಮೊದಲು ತಿಳಿದುಕೊಳ್ಳೋಣ.

ನಿಮ್ಮ ಜಿಲ್ಲೆಗೆ ಯಾವ ವಿಮಾ ಕಂಪನಿಯನ್ನು ನಿಯೋಜಿಸಲಾಗಿದೆ ಎಂಬುದನ್ನು ತಿಳಿಯಲು ಈ

https://samrakshane.karnataka.gov.in/HomePages/frmKnowYourInsCompany.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಕರ್ನಾಟಕದಲ್ಲಿ ಯಾವ ಜಿಲ್ಲೆಗೆ ಯಾ ವಿಮಾ ಕಂಪನಿಯನ್ನು ನಿಯೋಜಿಸಲಾಗಿದೆ ಎಂಬ ಪಟ್ಟಿ ಕಾಣಿಸುತ್ತದೆ. ನಿಮ್ಮ ಜಿಲ್ಲೆಯ ಎದುರುಗಡೆ ಯಾವ ಯಾವ ವಿಮಾ ಕಂಪನಿಗಳಿವೆ ಎಂಬುದನ್ನು ನೆನಪಿಟ್ಟುಕೊಳ್ಳಬೇಕು. ಅಥವಾ ವಿಮಾ ಕಂಪನಿಯನ್ನು ನೀವು ಬರೆದಿಟ್ಟುಕೊಳ್ಳಬಹುದು.

ಉದಾಹರಣೆಗೆ ನೀವು ಕಲಬುರಗಿ ಜಿಲ್ಲೆಯವರಾಗಿದ್ದರೆ ನಿಮ್ಮ ಜಿಲ್ಲೆಗೆ Universal Sompo GIC  ಹಾಗೂ  KSHEMA Insurance Co. Ltd ಯನ್ನು ನಿಯೋಜಿಸಲಾಗಿದೆ.

ಇದನ್ನು ಓದಿ : ಹಿಂಗಾರು ಯಾವ ಬೆಳೆಗೆ ಎಷ್ಟು ವಿಮೆ ಹಣ ಜಮೆ- ಮೊಬೈಲ್ ನಲ್ಲೇ ಚೆಕ್ ಮಾಡಿ ನಿಮ್ಮೂರಿನ ಬೆಳೆಗಳ ಲಿಸ್ಟ್

ಅದೇ ರೀತಿ ಕೋಲಾರ ಜಿಲ್ಲೆಗೆ ಬಜಾಜ್ ಅಲಾಯಾನ್ಸ್ ಜಿಐಸಿ ಹಾಗೂ ಅಗ್ರಿಕಲ್ಚರ್ ಇನ್ಸುರೆನ್ಸ್ ಕಂಪನಿ ಆಫ್ ಇಂಡಿಯಾ ಲಿಮಿಟೆಡ್ ನ್ನು ನಿಯೋಜಿಸಲಾಗಿದೆ. ಪಟ್ಟಿಯಲ್ಲಿ ಎಲ್ಲಾ ಜಿಲ್ಲೆಗಳ ವಿಮಾ ಕಂಪನಿಗಳಿವೆ.

ವಿಮಾ ಕಂಪನಿಗಳ ಸಂಪರ್ಕಿಸುವ ನಂಬರ್ ಗಳು

ಅಗ್ರಿಕಲ್ಚರ್ ಇನ್ಸುರೆನ್ಸ್ ಕಂಪನಿ ಸಹಾಯವಾಣಿ ನಂಬರ್ 1800 425 0505, ಯೂನಿವರ್ಸಲ್ ಸೋಂಪೋ ಸಹಾಯವಾಣಿ ನಂಬರ್ 1800 200 5142, ಎಸ್.ಬಿ.ಐ ವಿಮಾ ಕಂಪನಿಯ ಸಹಾಯವಾಣಿ 1800 180 1551, 1800 209 1111, ಹೆಚ್.ಡಿಎಫ್ಸಿ ಅರ್ಗೋ 1800 266 0700, ಫ್ಯೂಚರ್ ಜನರಲಿ ಸಹಾಯವಾಣಿ ನಂಬರ್ 1800 266 4141, ಐಸಿಐಸಿ ಲೋಂಬೋರ್ಡ್  ಸಹಾಯವಾಣಿ 1800 103 7712, ಬಜಾಜ್ ಅಲಾಯನ್ಸ್ ಜಿಐಸಿ 1800 209 5959, ರಿಲಾಯನ್ಸ್ ಜನರಲ್ ಇನ್ಸುರೆನ್ಸ್ ಕಂ. ಲಿಮಿಟೆಡ್ ಸಹಾಯವಾಣಿ ನಂಬರ್ 1800 102 4088 ಗೆ ಸಂಪರ್ಕಿಸಲು ಕೋರಲಾಗಿದೆ.

ಬೆಳೆ ವಿಮೆ ನೋಂದಣಿ ಪ್ರಕ್ರಿಯೆ ಕುರಿತಂತೆ  ರೈತರು 080 2656 4535, ಅಥವಾ 080 2656 4536 ಗೆ ಂಪರ್ಕಿಸಬಹುದು.

Leave a Comment