Crop insurance ಈ ಜಿಲ್ಲೆಯ ರೈತರಿಗೆ ಜಮೆ: ಇಲ್ಲೇ ಚೆಕ್ ಮಾಡಿ

Written by Ramlinganna

Updated on:

karnataka crop insurance ಮುಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದ ರೈತರಿಗೆ ಬೆಳೆ ವಿಮೆ ಹಣ ಜಮೆ ಮಾಡಲಾಗಿದೆ. ಹೌದು, ಗದಗ ಜಿಲ್ಲೆಯ ರೈತರಿಗೆ ಬೆಳೆ ವಿಮೆ ಹಣವನ್ನು ರೈತರ ಖಾತೆಗೆ  ಜಮೆ ಮಾಡಲಾಗಿದೆ.

ಹಾಗಾದರೆ ಯಾವ ಯಾವ ರೈತರಿಗೆ ಬೆಳೆ ವಿಮೆ ಹಣ ಜಮೆಯಾಗಿದೆ? ಯಾವ ಬೆಳೆಗೆ ಎಷ್ಟು ಹಣ ಜಮೆ ಮಾಡಲಾಗಿದೆ? ಯಾವಾಗ ಹಣ ಜಮೆ ಮಾಡಲಾಗಿದೆ ಎಂಬುದನ್ನು ರೈತರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಇದರೊಂದಿಗೆ ಇತರ ಜಿಲ್ಲೆಯ ರೈತರು ತಮ್ಮ ಸ್ಟೇಟಸ್ ಮೊಬೈಲ್ ನಲ್ಲೇ  ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ಮಾಹಿತಿ.

ಯಾರಿಗೆ ಎಷ್ಟು ಬೆಳೆ ವಿಮೆ ಹಣ ಜಮೆಯಾಗಿದೆ? ಹೀಗೆ ಚೆಕ್ ಮಾಡಿ

ಬೆಳೆ ವಿಮೆ ಹಣ ಯಾವ ಯಾವ ರೈತರಿಗೆ ಜಮೆಯಾಗಿದೆ? ಯಾವ ಬ್ಯಾಂಕ್ ಖಾತೆಗೆ ಜಮೆ ಆಗಿದೆ? ಎಷ್ಟು ವಿಮೆ ಹಣ ಜಮೆ ಆಗಿದೆ ಎಂಬುದನ್ನು ಚೆಕ್ ಮಾಡಲು ಈ

https://samrakshane.karnataka.gov.in/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಬೆಳೆ ವಿಮೆ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಋತು ಆಯ್ಕೆ ನಲ್ಲಿ Kharif ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ Check Status ಮೇಲೆ ಕ್ಲಿಕ್ ಮಾಡಬೇಕು.  ನಂತರ ಅಲ್ಲಿ ಕಾಣುವ ಆಯ್ಕೆಗಳಲ್ಲಿ Mobile No ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು. ಅಲ್ಲಿ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ನಂತರ Search ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಬೆಳೆ ವಿಮೆ ಹಣ ಜಮೆಯಾಗಿದೆಯೋ ಇಲ್ಲವೋ? ಇನ್ನೂ ಜಮೆಯಾಗದಿದ್ದರೆ ಅರ್ಜಿಯ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.

ಹಿಂಗಾರು ಬೆಳೆ ವಿಮೆ (karnataka crop insurance) ಗೆ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಹೌದು,  ಹಿಂಗಾರು ಹಂಗಾಮಿನ ಭತ್ತ, ಜೋಳ, ರಾಗಿ, ಮುಸುಕಿನ ಜೋಳ, ಗೋಧಿ, ಕಡಲೆ, ಹುರುಳಿ, ಅಗಸೆ, ಸೂರ್ಯಕಾಂತಿ, ನೆಲಗಡಲೆ, ಕುಸುಮೆ, ಈರುಳ್ಳಿ, ಆಲೂಗಡ್ಡೆ ಹಾಗೂ ಟೊಮ್ಯಾಟೋ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನಿಸಲಾಗಿದೆ.

ಬೆಳೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆಯದ ರೈತರಿಗೆ ವಿಮಾ ಮೊತ್ತವು ಬೆಳೆವಾರು ಬೆಳೆ ಸಾಲದ ಪ್ರಮಾಣದ ಆಧಾರದ ಮೇಲೆ ನಿರ್ಧರಿಸಲಾಗಿದೆ.ಕೇಂದ್ರ ಸರ್ಕಾರವು ನೀರಾವರಿ ಜಿಲ್ಲೆಗಳ ಬೆಳೆಗಳಿಗೆ ವಿಮಾ ಕಂತಿನ ಶೇ. 25 ರವರೆಗೆ ಹಾಗೂ ಮಳೆಯಾಶ್ರಿತ ಜಿಲ್ಲೆಗಳ ಬೆಳೆಗಳಿಗೆ ವಿಮಾ ಕಂತಿನ ಶೇ. 30 ರವರೆಗೆ ಕೇಂದ್ರ ಸರ್ಕಾರವು ಭರಿಸುತ್ತದೆ.

ಇದನ್ನೂ ಓದಿ Gruhalakshmi ಯೋಜನೆ ಹಣ ಜಮೆ- ಯಾರಿಗೆ ಯಾವಾಗ ಜಮೆಯಾಗಲಿದೆ? ಇಲ್ಲಿದೆ ಮಾಹಿತಿ

ಬೆಳೆ ಸಾಲ ಪಡೆದ ಅಥವಾ ಪಡೆಯದ ರೈತರು ಯೋಜನೆಯಡಿ ಭಾಗವಹಿಸಬಹುದು. ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಕಂದಾಯ ರಸೀದಿ, ಖಾತೆ ಪುಸ್ತಕ, ಪಾಸ್ ಪುಸ್ತಕ ಮತ್ತು ಆಧಾರ್ ಸಂಖ್ಯೆ ನೀಡಬೇಕು. ಬೆಳೆ ವಿಮೆ ನೋಂದಣಿಗಾಗಿ ರೈತರು ಕಡ್ಡಾಯವಾಗಿ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡಿದ್ದು, ಫ್ರೂಟ್ಸ್ ಐಡಿ ಹೊಂದಿರತಕ್ಕದ್ದು. ಬೆಳೆ ವಿಮೆ ಮಾಡಿಸಿದ ನಂತರ ಬೆಳೆ ಸಮಿಕ್ಷೆ ಸಹ ಮಾಡಿಸಿಕೊಳ್ಳಬೇಕು. ಬೆಳೆ ಸಮೀಕ್ಷೆ ಮಾಡಿದ ರೈತರಿಗೆ ಮಾತ್ರ ಬೆಳೆ ವಿಮೆ ಹಣ ಜಮೆಯಾಗುವ ಸಾಧ್ಯತೆಯಿದೆ.

ಬೆಳೆ ವಿಮೆ ಮಾಡಿಸಲು ಇಚ್ಚಿಸುವ ರೈತರು ತಮ್ಮ ಹತ್ತಿರದ  ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಸಿಎಸ್.ಸಿ ಕೇಂದ್ರಗಳಲ್ಲಿ ಬೆಳೆ ವಿಮೆ ಪಾವತಿಸಿ ನೋಂದಣಿ ಮಾಡಿಕೊಳ್ಳಬಹುದು.

Leave a Comment