ಯಾವ ರೈತರಿಗೆ ಬೆಳೆ ವಿಮೆ ಹಣ ಜಮೆಯಾಗುತ್ತದೆ?

Written by Ramlinganna

Updated on:

Crop insurance money will be credited ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ ಹಣ ಯಾವ ರೈತರಿಗೆ ಜಮೆಯಾಗುತ್ತದೆ? ಯಾವ ರೈತರಿಗೆ ಜಮೆಯಾಗುವುದಿಲ್ಲ ನಿಮಗೆ ಗೊತ್ತೇ? ಬೆಳೆ ವಿಮೆಯ ಹಣ ಎಲ್ಲಾ ರೈತರಿಗೆ ಜಮೆಯಾಗುವುದಿಲ್ಲ. ಬೆಳೆ ವಿಮೆ ಮಾಡಿಸಿದ ಎಲ್ಲಾ ರೈತರಿಗೆ ಜಮೆಯಾಗುವುದಿಲ್ಲ ಬೆಳೆ ಹಾನಿಯಾದ ರೈತರಿಗೆ ಮಾತ್ರ  ಹಣ ಜಮೆ ಮಾಡಲಾಗುವುದು. ಯಾವ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ ಎಂಬುದನ್ನು ಪರಿಶೀಲಿಸಲಾಗುತ್ತದೆ. ಯಾವ ಯಾವ ರೈತರಿಗೆ ಬೆಳೆ ವಿಮೆ ಹಣ ಜಮೆಯಾಗುತ್ತದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Crop insurance money will be credited ಬೆಳೆ ವಿಮೆ ಮಾಡಿಸಿದ ರೈತರಿಗೆ ವಿಮೆ ಹಣ ಜಮೆ ಮಾಡಲು ಹೇಗೆ ನಿರ್ಧರಿಸುತ್ತಾರೆ?

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಬೆಳೆ ವಿಮೆ ಮಾಡಿಸಿದ ರೈತರ ಬೆಳೆ ಪ್ರಕೃತಿ ವಿಕೋಪ, ಮಳೆ ಅಭಾವ, ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಶೇ. 75ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ, ಮೊಳಕೆಯೊಡೆಯುವುದು.  ವಿಫಲಗೊಂಡಲ್ಲಿ ವಿಮಾ ಮೊತ್ತದ ಗರಿಷ್ಠ ಶೇ. 25 ರಷ್ಟು ಪರಿಹಾರ ಹಣ ನೀಡಲಾಗುವುದು.

ಹವಾಮಾನ ವೈಪರೀತ್ಯಗಳಾದ ಹೆಚ್ಚಿನ ಮಳೆ, ಪ್ರವಾಹಗಳಿಂದ ಬೆಳೆ ಮುಳುಗಡೆ, ದೀರ್ಘಕಾಲದ ತೇವಾಂಶ ಕೊರತೆ, ತೀವ್ರ ಬರಗಾಲದಿಂದ ಬಿತ್ತನೆಯಾದ ನಂತರ ಕಟಾವಿಗೆ ಮೊದಲು ನಿರೀಕ್ಷಿತ ಇಳುವರಿಯು  ಶೇ. 50ಕ್ಕಿಂತ ಕಡಿಮೆ ಇದ್ದರೆ ವಿಮೆ ಮಾಡಿಸಿದ ರೈತರಿಗೆ  ವಿಮಾ ನಷ್ಟಪರಿಹಾರದಲ್ಲಿ ಶೇ. 25 ರಷ್ಟು ಹಣ ನೀಡಲಾಗುವುದು.

ಸ್ಥಳೀಯ ಗಂಡಾಂತರ ಕಾರಣಗಳಿಂದ ಬೆಳೆ ನಷ್ಟ ಸಂಭವಿಸಿದರೆ ಬೆಳೆ ವಿಮೆ ಮಾಡಿಸಿರುವ ರೈತರು ಈ ಬಗ್ಗೆ ಸಂಬಂಧಪಟ್ಟ ವಿಮಾ ಸಂಸ್ಥೆಗಳ ಕಚೇರಿಗಳಿಗೆ ಸೂಚನೆ ನೀಡಬೇಕು. ಇಂತಹ ಸಂದರ್ಭದಲ್ಲಿ ವಿಮೆ ಮಾಡಿಸಿದ ಬೆಳೆಯ ವಿವರಗಳನ್ನು ಹಾನಿಯ ವ್ಯಾಪ್ತಿ ಹಾಗೂ ಹಾನಿಗೆ ಕಾರಣಗಳನ್ನು 72 ಗಂಟೆಗಳೊಳಗಾಗಿ ತಿಳಿಸಬೇಕು.  ನಷ್ಟದ ಬಗೆಗಿನ ಮಾಹಿತಿಯನ್ನು ಸ್ವೀಕರಿಸಿದ ನಂತರ ವಿಮೆ ಸಂಸ್ಥೆಗಳು ಬೆಳೆ ನಷ್ಟವನ್ನು ನಿರ್ಧರಿಸಿ  ನಷ್ಟಆದ ಸ್ಥಳಕ್ಕೆ 48 ಗಂಟೆಗಳೊಳಗಾಗಿ ಸಿಬ್ಬಂದಿ ಬಂದು ಬೆಳೆ ಹಾನಿ ಪರಿಶೀಲಿಸುತ್ತಾರೆ.

ಇದನ್ನೂ ಓದಿ ನಿಮ್ಮ ಖಾತೆಗೆ ಬೆಳೆ ಹಾನಿ ಪರಿಹಾರ ಹಣ ಜಮೆಯಾಯಿತೇ? ಮೊಬೈಲ್ ನಲ್ಲೇ ಸ್ಟೇಟಸ್ ಚೆಕ್ ಮಾಡಿ

ಒಂದು ವೇಳೆ ಶೇ. 25 ಕ್ಕಿಂತ ಹೆಚ್ಚು ವಿಸ್ತೀರ್ಣದಲ್ಲಿ ಬೆಳೆ ನಷ್ಟವಾದರೂ ಬೆಳೆ ವಿಮೆ ಪರಿಹಾರ ನೀಡಲಾಗುವುದು. ವಿಮೆ ಸಂಸ್ಥೆಯಿಂ ನೇಮಿಸಲ್ಪಟ್ಟ ನಷ್ಟ ನಿರ್ಧಾರಕರು ಮತ್ತು ಸ್ಥಳೀಯ ತಾಲೂಕು, ಹೋಬಳಿ ಮಟ್ಟದ ಕಂದಾಯ, ಕೃಷಿ, ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಹಾನಿಗೊಳಗಾದ ರೈತರ ಸಮ್ಮುಖದಲ್ಲಿ ಬೆಳೆ ನಷ್ಟ ನಿರ್ಧರಿಸುತ್ತಾರೆ. ಸದರಿ ಬೆಳೆ ನಷ್ಟದ ವರದಿಯನ್ನು ಜಿಲ್ಲೆಗಳ ಇಲಾಖಾ ಮುಖ್ಯಸ್ಥರು ಅನುಷ್ಠಾನ ವಿಮಾ ಸಂಸ್ಥೆಗಳಿಗೆ ನೇರವಾಗಿ ಸಲ್ಲಿಸಲು ಕ್ರಮ ಕೈಗೊಳ್ಳಲಾಗುವುದು.

ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲೇ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ ಕಟಾವು ಮಾಡಿದ ಎರಡು ವಾರಗಳೊಳಗಾಗಿ (ಹದಿನಾಲ್ಕು ದಿನಗಳು) ಚಂಡಮಾರು, ಚಂಡಮಾರುತ ಸಹಿತ ಮಳೆ ಹಾಗೂ ಅಕಾಲಿಕ ಮಳೆಯಿಂದಾಗಿ ಬೆಳೆ ನಾಶವಾದರೆ ವಿಮಾ ಸಂಸ್ಥೆಯು ನಷ್ಟ ನಿರ್ಧಾರ ಮಾಡಿ ಬೆಳೆ ನಷ್ಟ ಪರಿಹಾರ ಹಣ ನೀಡಲಾಗುವುದು.  ರೈತರು ಈ ಬಗ್ಗೆ ಸಂಬಂಧಪಟ್ಟ ಆರ್ಥಿಕ ಸಂಸ್ಥೆ ಅಥವಾ ಅನುಷ್ಠಾನಗೊಳಿಸುವ ವಿಮಾ ಸಂಸ್ಥೆಗಳ ಕಚೇರಿಗಳಿಗೆ ನೇರವಾಗಿ ಕೃಷಿ, ತೋಟಗಾರಿಕೆ ಇಲಾಖೆ ಮೂಲಕ ತಕ್ಷಣ ಸೂಚನೆ ನೀಡಬೇಕು. ಯಾವುದೇ ಸಂದರ್ಭದಲ್ಲಿ ಬೆಳೆ ವಿಮೆ ಮಾಡಿಸಿದ ಬೆಳೆಯ ವಿವರಗಳನ್ನು ಹಾನಿಯ ವ್ಯಾಪ್ತಿ ಹಾಗೂ ಹಾನಿಗೆ ಕಾರಣಗಳನ್ನು 72 ಗಂಟೆಯೊಳಗಾಗಿ ತಿಳಿಸಬೇಕು.

ಹಿಂಗಾರು ಬೆಳೆ ಬೆಳೆ ವಿಮೆ ಮಾಡಿಸಿಲ್ಲವೇ? ಯಾವ ಯಾವ ಬೆಳೆಗೆ ವಿಮೆ ಮಾಡಿಸಬಹುದು? ಕೊನೆಯ ದಿನಾಂಕ ಯಾವುದು?

ಹಿಂಗಾರು ಹಂಗಾಮಿಗೆ ಯಾವ ಯಾವ ಬೆಳೆಗೆ ವಿಮೆ ಮಾಡಿಸಬಹುದು. ಕೊನೆಯ ದಿನ ಯಾವುದು ಎಂಬುದನ್ನು ಚೆಕ್ ಮಾಡಲು ಈ

https://www.samrakshane.karnataka.gov.in/PublicView/FindCutOff.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಬೆಳೆ ವಿಮೆಯ ಪೇಜ್ ಓಪನ್ ಆಗುತ್ತದೆ. ಅಲ್ಲಿ ರೈತರು  ತಮ್ಮ ಜಿಲ್ಲೆ ಆಯ್ಕೆ ಮಾಡಿಕೊಂಡರೆ ಸಾಕು, ನೀವು ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು. ಹಾಗೂ ವಿಮೆ ಮಾಡಿಸಲು ಕೊನೆಯ ದಿನಾಂಕ ಯಾವುದು ಎಂಬುದನ್ನು ಚೆಕ್ ಮಾಡಬಹುದು.

ಬೆಳೆ ವಿಮೆ ಯಾವ ರೈತರಿಗೆ ಜಮೆಯಾಗುತ್ತದೆ?

ಬೆಳೆ ವಿಮೆ ಮಾಡಿಸಿದರೆ ಸಾಲದು, ಬೆಳೆ ವಿಮೆ ಮಾಡಿಸಿದ ರೈತರು ಪ್ರಕೃತಿ ವಿಕೋಪದಿಂದಾಗಿ ಬೆಳೆ ಹಾಳಾದರೆ ವಿಮಾ ಕಂಪನಿಯವರಿಗೆ 72 ಗಂಟೆಯೊಳಗೆ ತಿಳಿಸಬೇಕು. ಆಗ ವಿಮಾ ಕಂಪನಿಯ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಬೆಳೆ ವಿಮೆ ಹಣ ಪರಿಹಾರ ನೀಡಲು ಸೂಚಿಸುತ್ತಾರೆ.

Leave a Comment