ಬೆಳೆ ವಿಮೆ ಅರ್ಜಿ ತಿರಸ್ಕೃತಗೊಂಡಿದೆಯೇ? ಇಲ್ಲೇ ಚೆಕ್ ಮಾಡಿ

Written by Ramlinganna

Published on:

Crop insurance reject list : ಪ್ರಸಕ್ತ ಸಾಲಿನ  ಮುಂಗಾರು , ಹಿಂಗಾರು ಮತ್ತು ಬೇಸಿಗೆ ಹಂಗಾಮಿನ ಬೆಳೆ ವಿಮೆ ಸಮೀಕ್ಷೆಯೊಂದಿಗೆ ಹೊಂದಾಣಿಕೆಯಾಗದೆ ವಿಮಾ ಸಂಸ್ಥೆಯಿಂದ ತಿರಸ್ಕೃತಗೊಂಡಿದ್ದರೆ 15 ದಿನಗಳ ಒಳಗಾಗಿ ರೈತರು ಕೃಷಿ ಇಲಾಖೆ ಅಥವಾ ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ತಾಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ತಾಲೂಕಿನಲ್ಲಿ ಒಟ್ಟು 4176 ಬೆಳೆ ವಿಮೆ ಅರ್ಜಿಗಳು ತಿರಸ್ಕೃತಗೊಂಡಿವೆ. ತಿರಸ್ಕೃತಗೊಂಡ ಅರ್ಜಿಗಳ ಬಗ್ಗೆ ಮರು ಆಕ್ಷೇಪಣೆ ಸಲ್ಲಿಸಲು ಬಯಸುವ ರೈತರು ವಿಮೆಗೆ ನೋಂದಾಯಿಸಿರುವ ಬೆಳೆ ಮಾಹಿತಿಯ ಪಹಣಿ, ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅದರ ರಸೀದಿ ಹಾಗೂ ವಿಮೆಗೆ ನೋಂದಾಯಿತವಾಗಿರುವ ಬೆಳೆಯನ್ನು ಎಪಿಎಂಸಿ ಮಾರುಕಟ್ಟೆಗೆ ಮಾರಾಟ ಮಾಡಿದ್ದಲ್ಲಿ ಸದರಿ ಮಾರಾಟ ದಾಖಲೆಯನ್ನು ಅರ್ಜಿ ಜೊತೆ ಸಲ್ಲಿಸುವಂತೆ ಸಂತೋಷ ಕುಮಾರ್ ತಿಳಿಸಿದ್ದಾರೆ.

Crop insurance reject list ನಿಮಗೆ ಬೆಳೆ ವಿಮೆ ಹಣ ಜಮೆಯಾಗಿದೆಯೋ ಇಲ್ಲವೋ? ಇಲ್ಲೇ ಚೆಕ್ ಮಾಡಿ ನೋಡಿ

ಮುಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದ ರೈತರು ತಮ್ಮ ಖಾತೆಗೆ ವಿಮೆ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://www.samrakshane.karnataka.gov.in/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ವಿಮೆ ಸಂರಕ್ಷಣೆ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಋತು ಆಯ್ಕೆ ಖಾರೀಪ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದು ಪೇಜ್ ಓಪನ್ ಆಗುತ್ತದೆ.  ಫಾರ್ಮರ್ಸ್ ಕಾಲಂ ಕೆಳಗಡೆ ಕಾಣುವ Check Status ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊದು ಪೇಜ್ ತೆರೆದುಕೊಳ್ಳುತ್ತದೆ.

ಅಲ್ಲಿ ನಿಮಗೆ Proposal ಹಾಗೂ Mobile No. ಮತ್ತು Aadhaar ಆಯ್ಕೆಗಳು ಕಾಣಿಸುತ್ತವೆ. ಅದರಲ್ಲಿ ನೀವು  ಮೊಬೈಲ್ ನಂಬರ್ ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ನಂತರ ಬೆಳೆ ವಿಮೆ ಮಾಡಿಸುವಾಗ ಯಾವ ಮೊಬೈಲ್ ನಂಬರ್ ಕೊಟ್ಟಿರುತ್ತಾರೋ ಆ ಮೊಬೈಲ್ ನಂಬರ್ ನಮೂದಿಸಬೇಕು. ಇದಾದ ಮೇಲೆ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ಒಂದು ವೇಳೆ ಕ್ಯಾಪ್ಚ್ಯಾ ಕೋಡ್ ಸರಿಯಾಗಿ ಕಾಣಿಸದಿದ್ದರೆ ರಿಫ್ರೆಶ್ ಬಟನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಹೊಸ ಕ್ಯಾಪ್ಚ್ಯಾ ಕೋಡ್ ಅಪ್ಡೇಟ್ ಆಗುತ್ತದೆ. ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ನಮೂದಿಸಿ ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಬೆಳೆ ವಿಮೆ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದು ಕಾಣಿಸುತ್ತದೆ.

ಕಲಬುರಗಿ ಜಿಲ್ಲೆಗೆ 2 ಲಕ್ಷ ರೈತರ ಖಾತೆಗೆ ಬೆಳೆ ವಿಮೆ ಹಣ ಜಮೆ

ಪ್ರಸಕ್ತ 2024-25ನೇ ಸಾಲಿನ ಬೆಳೆ ವಿಮೆ ಸ್ಥಳೀಯ ವಿಕೋಪದಡಿ ಜಿಲ್ಲೆಯ ಒಟ್ಟು 2,03,720 ರೈತರಿಗೆ 76.94 ಕೋಟಿ ರೂಪಾಯಿ ಪರಿಹಾರ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗಿದೆ.

ಇದನ್ನೂ ಓದಿ ನಿಮ್ಮ ಜಮೀನಿನ ಸರ್ವೆ ನಂಬರ್ ಮ್ಯಾಪ್ ಹೀಗೆ ಡೌನ್ಲೋಡ್ ಮಾಡಿ

ಹೌದು, ರೈತರು ತಮ್ಮ ಬ್ಯಾಂಕುಗಳಿಗೆ ಭೇಟಿ ನೀಡಿ ತಮ್ಮ ಖಾತೆಗೆಪರಿಹಾರ ಹಣ ಜಮೆಯಾಗಿರುವುದನ್ನು ಖಾತ್ರಿ ಪಡಿಸಿಕೊಳ್ಳುವಂತೆ ಕಲಬುರಗಿ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ತಿಳಿಸಿದ್ದಾರೆ.

ಪ್ರಸಕ್ತ ಸಾಲಿನ ಕಳೆದ ಆಗಸ್ಟ್ ಕೊನೆ ವಾರ ಹಾಗೂ ಸೆಪ್ಟೆಂಬರ್ ತಿಂಗಳ ಮೊದಲ ವಾರದಲ್ಲಿ ಸುರಿದ ಮಳೆಯಿಂದಾಗಿ ವಿವಿಧ ಬೆಳೆಗಳು ಮತ್ತು ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಿನಲ್ಲಿ ಹೆಸರು, ಉದ್ದು ಹಾಗೂ ಸೋಯಾಬಿನ್ ಬೆಳೆಗಳು ಹಾಗೂ ನವೆಂಬರ್ ತಿಂಗಳಿನಲ್ಲಿ ಮಳೆ ಬಾರದೆ ತೊಗರಿ ಬೆಳೆ ಹಾಳಾದ ಕಾರಣ ರೈತರು ವಿಮೆ ಕಂಪನಿಗೆ ದೂರು ಸಲ್ಲಿಸಿದ್ದರು.

ದೂರಿನಂತೆ ಇದೀಗ ಬೆಳೆ ವಿಮೆ ಪರಿಹಾರ ಜಮೆ ಮಾಡಲಾಗಿದೆ. ಇದರ ಹೊರತಾಗಿ ಬಾಕಿ ಉಳಿದ ಅರ್ಹ ರೈತರಿಗೆ ಅಂತಿಮ ಪಾವತಿಯನ್ನು ಬೆಳೆ ಕಟಾವು ಪ್ರಯೋಗಗಳ ಆಧಾರದ ಮೇಲೆ ನಿರ್ಧರಿಸಿ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಪ್ರಸಕ್ತ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಯೋಜನೆಯಡಿ ತೊಗರಿ, ಹೆಸರು, ಉದ್ದು, ಸೋಯಾಬಿನ್, ಹತ್ತಿ ಹಾಗೂ ಇತರೆ ಬೆಳೆಗಳಿಗೆ ಒಟ್ಟಾರೆ ಜಿಲ್ಲೆಯಲ್ಲಿ 2,04,073 ರೈತರು ಬೆಳೆ ವಿಮೆ ನೋಂದಣಿ ಮಾಡಿಸಿಕೊಂಡಿದ್ದರು.

Leave a Comment