Bele vime status -2023 ಮೊಬೈಲ್ ನಲ್ಲೇ ಚೆಕ್ ಮಾಡಿ

Written by Ramlinganna

Published on:

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಬೆಳೆ ವಿಮೆ ಮಾಡಿಸಿದ ರೈತರು ತಮ್ಮ ಅರ್ಜಿ ಸ್ವೀಕೃತವಾಗಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಮುಂಗಾರು ಹಂಗಾಮಿಗೆ 2023-24ನೇ ಸಾಲಿಗೆ ಬೆಳೆ ವಿಮೆ ಮಾಡಿಸಲು ರೈತರಿಂದ ಅರ್ಜಿ ಆಹ್ವಾನಿಸಲಾಗಿತ್ತು. ಈಗಾಗಲೇ ಮುಂಗಾರು ಹಂಗಾಮಿಗೆ ತೋಟಗಾರಿಕೆ, ತರಕಾರಿ, ಹಾಗೂ ಇತರೆ ಬೆಳೆಗಳಿಗೆ ವಿಮೆಗೆ ಹಲವಾರು ರೈತರು ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ. ಇನ್ನೂ ಜುಲೈ 31 ರವರೆಗೆ ಕೆಲವು ಬೆಳೆಗಳಿಗೆ ಮಾತ್ರ ವಿಮೆ ಮಾಡಿಸಲು ರೈತರಿಗೆ ಅವಕಾಶವಿದೆ. ಈಗಲೂ ರೈತರಿಗೆ ಸಮಯವಿದೆ. ತಮ್ಮ ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಬಹುದು. ಯಾರು ಬೆಳೆ ವಿಮೆ ಮಾಡಿಸಿದ್ದಾರೋ ಆ ರೈತರ ಅರ್ಜಿ ಯಾವ ಸ್ಥಿತಿಯಲ್ಲಿದೆ? ಅರ್ಜಿ ಸ್ವೀಕೃತವಾಗಿದೆಯೇ ಅಥವಾ ತಿರಸ್ಕೃತವಾಗಿದೆಯೋ ಎಂಬುದನ್ನು ರೈತರು ಒಂದೇ ನಿಮಿಷದಲ್ಲಿ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಕ್ಷೀಪ್ತ ಮಾಹಿತಿ.

ಬೆಳೆ ವಿಮೆಯ ಅರ್ಜಿಯ ಸ್ಟೇಟಸ್ ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ?

ಬೆಳೆ ವಿಮೆ ಅರ್ಜಿಯ ಸ್ಟೇಟಸ್ ಮೊಬೈಲ್ ನಲ್ಲಿ ಚೆಕ್ ಮಾಡಲು ಈ

https://samrakshane.karnataka.gov.in/publichome.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ Farmers ಕೆಳಗಡೆ ನಿಮಗೆ check status ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನಿಮಗೆ Proposal , Mobile No. Aadhaar ಹೀಗೆ ಮೂರು ಆಯ್ಕೆಗಳು ಕಾಣಿಸುತ್ತವೆ. ಅದರಲ್ಲಿ ನೀವು Mobile No ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಮೊಬೈಲ್ ನಂಬರ್ ಹಾಕಬೇಕು. ಅದರ ಕೆಳಗಡೆ ಅಲ್ಲಿ ಕಾಣಿಸುವ ಕ್ಯಾಪ್ಚ್ಯಾಕೋಡ್ ಹಾಕಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ.

ನೀವು ಕ್ಯಾಪ್ಚ್ಯಾ ಕೋಡ್ ಸರಿಯಾಗಿ ನಮೂದಿಸಿದರೆ ಮಾತ್ರ ನಿಮಗೆ ಇನ್ನೊಂದು ಪೇಜ್ ಕಾಣಿಸುತ್ತದೆ. ಅಲ್ಲಿ ಪ್ರೊಪೋಸಲ್ ಸಂಖ್ಯೆ, ಮೊಬೈಲ್ ನಂಬರ್ ಕೊನೆಯ ಮೂರು ಅಂಕಿಗಳು, ನಿಮ್ಮ ಹೆಸರು ಕಾಣಿಸುತ್ತದೆ. ಅದರ ಮುಂದೆ ಸ್ಟೇಟಸ್ ಅಂದರೆ ನಿಮ್ಮ ಅರ್ಜಿಯ ಸ್ಟೇಟಸ್ ಕಾಣಿಸುತ್ತದೆ  ಅರ್ಜಿ ಬೆಳೆ ನೋಂದಣಿಯು ಪ್ರಗತಿಯಲ್ಲಿದೆಯೇ? ಅರ್ಜಿಯನ್ನುತೆಗೆದುಹಾಕಲಾಗಿದೆಯೇ ಅಥವಾ ಅಥವಾ ಸ್ವೀಕೃತವಾಗಿದೆಯೋ ಎಬುದು ಕಾಣಿಸುತ್ತದೆ. ನೀವು ಎಲ್ಲಿ ಬೆಳೆ ವಿಮೆ ಹಣ ಪಾವತಿಸಿದ್ದೀರಿ ಅದು ಪೇಮೆಂಟ್ ಸಕ್ಸೆಸ್ ಫುಲ್ ಆಗಿದೆಯೋ ಇಲ್ಲವೋ ಎಂಬುದು ಕಾಣಿಸುತ್ತದೆ. ಅದರ ಮುಂದುಗಡೆ ಕಾಣಿಸುವ ಸೆಲೆಕ್ಟ್  ಮೇಲೆ ಕ್ಲಿಕ್ ಮಾಡಬೇಕು.  ನಂತರ View Details ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ ಈ ರೈತರ ಖಾತೆಗಳಿಗೆ ಬೆಳೆ ಹಾನಿ ಪರಿಹಾರ ಹಣ ಜಮೆ- ನಿಮಗೂ ಜಮೆಯಾಗಿದೆಯೋ ಇಲ್ಲೇ ಚೆಕ್ ಮಾಡಿ

ಆಗ ನಿಮ್ಮ ಹೆಸರು, ವಿಳಾಸ ಹೋಬಳಿ, ಊರು, ಸರ್ವೆ ನಂಬರ್, ಯಾವ ಬೆಳೆಗೆ ವಿಮೆ ಮಾಡಿಸಿದ್ದೀರಿ ನೀವು ಎಷ್ಟು ಬೆಳೆ ವಿಮೆ ಹಣ ಪಾವತಿಸಿದ್ದೀರಿ? ನಿಮಗೆಷ್ಟು ಬೆಳೆ ವಿಮೆ ಹಣ ಜಮೆಯಾಗಬಹುದು ಎಂಬ ಮಾಹಿತಿಯೂ ಕಾಣಿಸುತ್ತದೆ. ಬಿತ್ತನೆ ಮಾಡಿದ ದಿನಾಂಕ ಎಂಬ ಮಾಹಿತಿಯೂ ನಿಮಗೆ ಕಾಣಿಸುತ್ತದೆ. ಈ ಆಧಾರದ ಮೇಲೆನಿಮ್ಮ ಅರ್ಜಿ ಯಾವ ಹಂತದಲ್ಲಿದೆ ಎಂಬುದನ್ನು ಚೆಕ್ ಮಾಡಬಹುದು.

ಬೆಳೆ ವಿಮೆ ಮಾಡಿಸಿದ ನಂತರ ರೈತರ ಬೆಳೆ ಪ್ರಾಕೃತಿಕ ವಿಕೋಪದಿಂದಾಗಿ ಹಾಳಾಗಿದ್ದರೆ ರೈತರು ಯಾವ ವಿಮಾ ಕಂಪನಿಗೆ ಬೆಳೆ ವಿಮೆ ಪಾವತಿಸಿದ್ದೀರೋ ಆ ವಿಮಾ ಕಂಪನಿಯ ಸಿಬ್ಬಂದಿಗೆ ಕರೆ ಮಾಡಬೇಕು. ಆಗ ವಿಮಾ ಸಿಬ್ಬಂದಿ ನಿಮ್ಮ ಜಮೀನಿಗೆ ಬಂದು ಬೆಳೆ ಪರಿಶೀಲನೆ ಮಾಡುತ್ತಾರೆ.  ನಂತರ ವಿಮೆಗೆ  ವರದಿ ಸಲ್ಲಿಸುತ್ತಾರೆ. ಕೆಲವು ದಿನಗಳ ನಂತರ ನಿಮ್ಮ ಬೆಳೆ ಎಷ್ಟು ಪ್ರಮಾಣದಲ್ಲಿ ಹಾಳಾಗಿದೆಯೋ ಆ ಆಧಾರದ ಮೇಲೆ ನಿಮಗೆ ಬೆಳೆ ವಿಮೆ ಹಣವನ್ನು ರೈತರ ಖಾತೆಗೆ ಜಮೆ ಮಾಡುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬಹುದು.

Leave a comment