Crop insurance status ಮೊಬೈಲ್ ನಲ್ಲೇ ಚೆಕ್ ಮಾಡಿ

Written by Ramlinganna

Updated on:

Crop insurance status :  ಬೆಳೆ ವಿಮೆ ಪಾವತಿಸಿದ ರೈತರು ತಮಗೆ ಬೆಲೆ ವಿಮೆ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಈಗ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು, ಕಳೆದ ಸಾಲಿನ ಮುಂಗಾರು, ಹಿಂಗಾರು ಹಂಗಾಮಿಗೆ ಹಾಗೂ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಬೆಳೆ ವಿಮೆ ಪಾವತಿಸಿದ ರೈತರು ಬೆಳೆ ವಿಮೆ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ರೈತರು ಮುಂಗಾರು ಹಾಗೂ ಹಿಂಗಾರು ಹಂಗಾಮಿಗೆ ಬೆಳೆ ವಿಮೆ ಹಣ ಪಾವತಿಸಿರುತ್ತಾರೆ. ಆದರೆ ವಿಮೆ ಹಣ ತಮಗೆ ಜಮೆಯಾಗಿದೆಯೋ ಇಲ್ಲವೋ? ಒಂದು ವೇಳೆ ಹಣ ಜಮೆಯಾಗಲು ಯಾವುದಾದರೂ ತಾಂತ್ರಿಕ ತೊಂದರೆಯಿಂದಾಗಿ ತಡೆಹಿಡಿಯಲಾಗಿದೆಯೇ ಅಥವಾ ತಿರಸ್ಕೃತವಾಗಿದೆಯೇ? ಒಂದು ವೇಳೆ ಜಮೆಯಾಗಿದ್ದರೆ ಎಷ್ಟು ಎಕರೆಗೆ ಎಷ್ಟು ಹಣ ಹಾಗೂ ಯಾವ ಬ್ಯಾಂಕಿಗೆ ಜಮೆಯಾಗಿದೆ ಅಷ್ಟೇ ಅಲ್ಲ,  ಅರ್ಜಿಯ ಸ್ಥಿತಿಯನ್ನು ಸಹ  ಚೆಕ್ ಮಾಡಬಹುದು.

ಬೆಳೆ ವಿಮೆ ಸ್ಟೇಟಸ್ (crop insurance status) ಚೆಕ್ ಮಾಡುವುದು ಹೇಗೆ?

ಬೆಳೆ ವಿಮೆ ಪಾವತಿಸಿದ ರೈತರು ಸ್ಟೇಟಸ್ ಚೆಕ್ ಮಾಡಲು ಈ

https://samrakshane.karnataka.gov.in/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಬೆಳೆ ವಿಮೆ ಸ್ಟೇಟಸ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಪ್ರಸಕ್ತ ಸಾಲಿನ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವಾದರೆ ಮುಂದೆ / Go ಮೇಲೆ ಕ್ಲಿಕ್ ಮಾಡಬೇಕು. ಹಿಂದಿನ ವರ್ಷದ ಮುಂಗಾರು ಹಿಂಗಾರು ಹಂಗಾಮಿನ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವಾದರೆ ವರ್ಷ 2022-23 ಎಂಬುದನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂಗಾರು ಸ್ಟೇಟಸ್ ಚೆಕ್ ಮಾಡಲು Kharif ಆಯ್ಕೆ ಮಾಡಿಕೊಳ್ಳಬೇಕು. ಹಿಂಗಾರು ಹಂಗಾಮಿನ ಸ್ಟೇಟಸ್ ಚೆಕ್ ಮಾಡಲು  Rabi ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ.

ಅಲ್ಲಿ ಫಾರ್ಮರ್ಸ್ ಕಾಲಂ ಕೆಳಗಡೆ ಇರುವ Check Status ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಮೊಬೈಲ್ ನಂಬರ್ ಆಯ್ಕೆ ಮಾಡಿಕೊಳ್ಳಬೇಕು. ಅಥವಾ ನಿಮ್ಮ ಆಧಾರ್ ಆಯ್ಕೆ ಮಾಡಿಕೊಳ್ಳಬಹುದು.ಮೊಬೈಲ್ ನಂಬರ್ ಆಯ್ಕೆ ಮಾಡಿಕೊಂಡರೆ ನಿಮ್ಮ ಮೊಬೈಲ್ ನಂಬರ್ ಹಾಕಬೇಕು. ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾಕೋಡ್ ನ್ನು ಹಾಕಬೇಕು.ಇದಾದ ನಂತರ Search ಮೇಲೆ ಕ್ಲಿಕ್ ಮಾಡಬೇಕು. ಕ್ಯಾಪ್ಚ್ಯಾ ಕೋಡ್ ಸರಿಯಾಗಿ ಕಾಣಿಸದಿದ್ದರೆ Reset ಮೇಲೆ ಕ್ಲಿಕ್ ಮಾಡಿಕೊಳ್ಳಬಹುದು.  ನಂತರ ನಿಮಗೆ ಯಾವ ಬೆಳೆಗೆ ಎಷ್ಟು ಬೆಳೆ ವಿಮೆ ಹಣ ಜಮೆಯಾಗಿದೆ ಎಂಬುದು ಕಾಣಿಸುತ್ತದೆ.

ಕಲಬುರಗಿ ಜಿಲ್ಲೆಯಲ್ಲಿ ಕಳೆದ ವರ್ಷದ ಮುಂಗಾರು ಹಿಂಗಾರು ಹಂಗಾಮಿಗೆ ಬೆಳೆ ವಿಮೆಗೆ ದೂರು ಸಲ್ಲಿಸಿದ ರೈತರಿಗೆ ಬೆಳೆ ವಿಮೆ ಹಣ ಬಿಡುಗಡೆಯಾಗಿದೆ. ಇದೇ ರೀತಿ ಇತರ ಜಿಲ್ಲೆಗಳಲ್ಲಿಯೂ ಹಣ ಬಿಡುಗಡೆಯಾಗಲಿದೆ.

ಇದನ್ನೂ ಓದಿ ಪಿಎಂ ಕಿಸಾನ್ ಅನರ್ಹ ರೈತರ ಪಟ್ಟಿ ಬಿಡುಗಡೆ: ಈ ಪಟ್ಟಿಯಲ್ಲಿರುವವರಿಗೆ ಹಣ ಜಮೆಯಾಗಲ್ಲ

ಬೆಳೆ ವಿಮೆ ಪಾವತಿಸಿದ ರೈತರು ಯಾವ ವಿಮಾ ಕಂಪನಿಗೆ ಹಣ ಪಾವತಿಸಲಾಗಿದೆ. ಹಾಗೂ ನಿಮ್ಮ ತಾಲೂಕಿನ ವಿಮಾ ಕಂಪನಿಯ ಸಿಬ್ಬಂದಿ ನಂಬರ್ ಇಟ್ಟುಕೊಂಡಿರಬೇಕು. ಏಕೆಂದರೆ ಬೆಳೆ ಹಾಳಾದರೆ 72 ಗಂಟೆಯೊಳಗೆ ವಿಮಾ ಕಂಪನಿಗೆ ತಿಳಿಸಬೇಕಾಗುತ್ತದೆ. ಇದರೊಂದಿಗೆ ಬೆಳೆ ಸಮೀಕ್ಷೆ ಸಹ ಮಾಡಿಸಿರಬೇಕು.  ಬೆಳೆ ಸಮೀಕ್ಷೆಯನ್ನು ರೈತರು ಸ್ವತಃ ತಾವೇ ಮಾಡಿಕೊಳ್ಳಬಹುದು ಅಥವಾ ಗ್ರಾಮಕ್ಕೆ ನಿಯೋಜಿಸಿದ ಪ್ರತಿನಿಧಿಯಿಂದ ಸಮೀಕ್ಷೆ ಮಾಡಿಸಿಕೊಳ್ಳಬಹುದು.

ರೈತರು ಬೆಳೆ ವಿಮೆಗೆ ಸಂಬಂಧಿಸಿದಂತೆ ವಿಮಾ ಕಂಪನಿಯ ಉಚಿತ ಸಹಾಯವಾಣಿ ನಂಬರಿಗೆ ಕರೆ ಮಾಡಿ ತಿಳಿದುಕೊಳ್ಳಬಹುದು. ಹೌದು, 1800 180 1551 ನಂಬರಿಗೆ ಕರೆ ಮಾಡಿ ವಿಮೆಯ ಕುರಿತು ಮಾಹಿತಿ ಪಡೆದುಕೊಳ್ಳಬಹುದು.

Leave a Comment