30 ಲಕ್ಷ ರೈತರಿಗೆ 20,810 ಕೋಟಿ ಬೆಳೆ ಸಾಲ ನೀಡುವ ಗುರಿ- ಸೋಮೇಶೇಖರ

Written by By: janajagran

Updated on:

Crop loan target ಯಾವುದೇ ಕಾರಣಕ್ಕೆ ರೈತಾಪಿ ವರ್ಗಕ್ಕೆ ತೊಂದರೆಯಾಗಬಾರದೆಂಬ ಉದ್ದೇಶಕ್ಕೆ ಪ್ರಸಕ್ತ ಸಾಲಿನಲ್ಲಿ ಸಹಕಾರ ಬ್ಯಾಂಕುಗಳಿಂದ 30 ಲಕ್ಷ ರೈತರಿಗೆ(Crop loan target for 30 lakh farmers) 20,810 ಕೋಟಿ ರೂಪಾಯಿ ಬೆಳೆ ಸಾಲ ನೀಡುವ ಗುರಿ ಹೊಂದಿದ್ದೇವೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ ತಿಳಿಸಿದ್ದಾರೆ.

ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ವರ್ಷ 25.93 ಲಕ್ಷ ರೈತರಿಗೆ 17,490 ಕೋಟಿ ರೂಪಾಯಿ ಬೆಳೆ ಸಾಲ ನೀಡಲಾಗಿತ್ತು.  114,70 ರೈತರಿಗೆ ಬೆಳೆಸಾಲ ನೀಡಿಕೆ ಮೂಲಕ ಗುರಿಯನ್ನು ಮೀರಿ ಸಾಧನೆ ಮಾಡಿದ್ದು, ಈ ವರ್ಷ 2021-22ನೇ ಸಾಲಿನಲ್ಲಿ 30 ಲಕ್ಷ ರೈತಿರಗೆ 20810 ಕೋಟಿ ರೂಪಾಯಿ ಬೆಳೆ ಸಾಲ ನೀಡುವ ಗುರಿಯನ್ನು ಹೊಂದಲಾಗಿದೆ ಎಂದರು.

2020-21ರ ಆರ್ಥಿಕ ವರ್ಷದಲ್ಲಿ 24.50 ಲಕ್ಷ ರೈತರಿಗೆ 15400 ಕೋಟಿ ರೂಪಾಯಿ ಅಲ್ಪಾವಧಿ, ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲ ನೀಡಿಕೆಯ ಗುರಿಯನ್ನು ಹೊಂದಲಾಗಿತ್ತು. ಅಪೆಕ್ಸ್ ಬ್ಯಾಂಕ್ ಹಾಗೂ 21 ಡಿಸಿಸಿ ಬ್ಯಾಂಕ್ ಗಳು 25,93,982 ರೈತರಿಗೆ 17490 ಕೋಟಿ ರೂಪಾಯಿ ಸಾಲ ನೀಡಿವೆ ಎಂದು ವಿವರಿಸಿದರು.

ಹೆಚ್ಚಿನ ರೈತರಿಗೆ ಸಾಲ ತಲುಪಿಸುವಂತೆ ಸಿಎಂ ಸೂಚನೆ ನೀಡಿದ್ದು ಅಂತೆಯೇ ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್ ಗಳ ಮೂಲಕ ರೈತರಿಗೆ ಅಗತ್ಯವಾದ ಸಾಲ ನೂರಕ್ಕೆ ನೂರರಷ್ಟು ದೊರಕಿಸಿಕೊಡಲು ಡಿಸಿಸಿ ಬ್ಯಾಂಕುಗಳು ಮುಂದಾಗಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಳೆ ಹಾನಿಯಾದ ರೈತರ ಖಾತೆಗೆ ಪರಿಹಾರ ಹಣ ಜಮೆ-ಸ್ಟೇಟಸ್ ನೋಡಲು ಇಲ್ಲಿ ಕ್ಲಿಕ್ ಮಾಡಿ

ಡಿಸಿಸಿ ಬ್ಯಾಂಕ್ಗಳಿಗೆ ಈಗಾಗಲೇ ಸೂಚನೆ ನೀಡಿದ್ದು, ಪ್ರಸಕ್ತ ಆರ್ಥಿಕ ವರ್ಷದಲ್ಲಿ 30 ಲಕ್ಷ ರೈತರನ್ನು ತಲುಪಬೇಕು.  20810 ಕೋಟಿ ರೂಪಾಯಿ ಬೆಳೆ  ನೀಡಬೇಕೆಂದು ಎಲ್ಲಾ ಬ್ಯಾಂಕುಗಳಿಗೆ ಸೂಚಿಸಿದ್ದೇನೆ. ಲಾಕ್ಡೌನ್ ಮುಗಿದ ಬಳಿಕ ಡಿಸಿಸಿ ಬ್ಯಾಂಕುಗಳಿಗೆ ಖುದ್ದು ನಾನೇ ಭೇಟಿ ನೀಡುತ್ತೇನೆ ಎಂದರು.

ಡಿಸಿಸಿ ಬ್ಯಾಂಕ್ ಗಳಿಗೆ ಆಪೆಕ್ಸ್ ಬ್ಯಾಂಕ್ ನಿಂದ ಆಗಬೇಕಾದ ಎಲ್ಲಾ ಸೌಲಭ್ಯಗಳನ್ನು ಮಾಡಿಕೊಡಲಾಗುವುದು ಎಂದು ಭರವಸೆ ನೀಡಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರು, ಶಾಸಕ ಬೆಳ್ಳಿ ಪ್ರಕಾಶ್, ಸರ್ಕಾರದ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್, ಸಹಕಾರ ಸಂಘಗಳ ನಿಬಂಧಕರಾದ ಜಿಯಾವುಲ್ಲ, ಎಲ್ಲ ಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಇದ್ದರು.

ಇದನ್ನೂ ಓದಿ: ಸಹಕಾರ ಸಂಘಗಳಿಂದ ರೈತರಿಗೆ ಶೂನ್ಯ ಬಡ್ಡಿದರದಲ್ಲಿ 3 ಲಕ್ಷ ರೂ. ಬೆಳೆ ಸಾಲ: ಎಸ್‌ಟಿ ಸೋಮಶೇಖರ್‌

Bele sala manna status ನ್ನು ಆಧಾರ್ ನಂಬರ್ ಹಾಕಿ ಚೆಕ್ ಮಾಡುವುದು ಹೇಗೆ?

Bele sala manna status ನ್ನು ರೈತರು ತಮ್ಮ ಬಳಿಯಿರು ಆಧಾರ್ ನಂಬರ್ ಹಾಕಿ ಚೆಕ್ ಮಾಡಲು ಈ

https://clws.karnataka.gov.in/clws/pacs/citizenreport/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಮೂದಿಸಬೇಕು.  ನಂತರ Fetch Report ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಬ್ಯಾಂಕಿನ ಹೆಸರು, ಬ್ರ್ಯಾಂಚ್ ಸ್ಥಳ, ನಿಮ್ಮ ಹೆಸರು ಕಾಣಿಸುತ್ತದೆ. ನಿಮ್ಮ ಬ್ಯಾಂಕ್ ಅಕೌಂಟ್ ಯಾವ ಪ್ರಕಾರದ್ದಾಗಿದೆ ಎಂಬ ಮಾಹಿತಿ ಸಹ ಕಾಣಿಸುತ್ತದೆ. ನಿಮ್ಮ ಹೆಸರಿಗೆ 2017 ರ ಮೊದಲು ಎಷ್ಟು ಸಾಲವಿತ್ತು ಎಂಬುದು ಕಾಣಿಸುತ್ತದೆ. ಅದರ ಕೆಳಗಡೆ ನಿಮಗೆ ಎಷ್ಟು ಬೆಳೆ ಸಾಲ ಮನ್ನಾ ಆಗಿದೆ. ಹಾಗೂ ಪೇಮೆಂಟ್ ಸ್ಟೇಟಸ್ ಮತ್ತು ಯಾವ ದಿನಾಂಕದಂದು ಬೆಳೆ ಸಾಲಮನ್ನಾ ಹಣ ಜಮೆಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ.

Leave a Comment