ಬೆಳೆ ಸಾಲದ ಬಡ್ಡಿ ಮನ್ನಾ- ಸಿಎಂ ಘೋಷಣೆ ಯಾವ ರೈತರಿಗೆ ಮನ್ನಾ? ಇಲ್ಲಿದೆ ಮಾಹಿತಿ

Written by Ramlinganna

Published on:

ರೈತರು ಸಹಕಾರಿ ಬ್ಯಾಂಕುಗಳಲ್ಲಿನ ಸಾಲದ ಅಸಲು ಪಾವತಿಸಿದರೆ ಬಡ್ಡಿ ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದಾರೆ.

ಹೌದು, ಬೆಳಗಾವಿ ಅಧಿವೇಶನದಲ್ಲಿ  ರೈತರು ಸಹಕಾರಿ ಬ್ಯಾಂಕ್ ಗಳಲ್ಲಿ ಪಡೆದಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳ ಅಸಲನ್ನು ಅವಧಿಯೊಳಗೆ ಪಾವತಿಸಿದರೆ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು.

2018 ರ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಬಿಜೆಪಿಯು ಒಂದು ಲಕ್ಷ ರೂಪಾಯಿಯವರೆಗಿನ ಸಾಲ ಮನ್ನಾ ಮಾಡುವುದಾಗಿ ಹೇಳಿತ್ತು. ಆದರೆ ಆ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಯಡಿಯೂರಪ್ಪನವರು ಮತಕ್ಕಾಗಿ ಇತರ ಪಕ್ಷಗಳವರು ಹೇಳಿದಂತೆ ನಾನು ಕೂಡ ರೈತರ ಕೃಷಿ ಸಾಲ ಮನ್ನಾ ಮಾಡುತ್ತೇನೆಂದು ಚುನಾವಣೆಯ ಸಂದರ್ಭದಲ್ಲಿ ಆಶ್ವಾಸನೆ ನೀಡಿದ್ದೆ. ಆದರೆ ಇದು ಸಾಧ್ಯವಿಲ್ಲ ಎಂಬುದು ಈಗ ಅರ್ಥವಾಗುತ್ತಿದೆ.

ಸಾಲ ಮನ್ನಾ ಮಾಡಲು ಹಣ ಎಲ್ಲಿದೆ? ಎಂದು ವಿರೋಧ ಪಕ್ಷದ ಸದಸ್ಯರನ್ನೇ ಪ್ರಶ್ನಿಸಿದ್ದರು. ರೈತರ ಸಾಲ ಮನ್ನಾ ಮಾಡಲು ನಾನು ಸಿದ್ದನಿದ್ದೇನೆ. ಆದರೆ ಬೊಕ್ಕಸದಲ್ಲಿಹಣದ ಕೊರತೆ ಇದೆ. ಆದುದ್ದರಿಂದ ಸಾಲ ಮನ್ನಾಮಾಡಲು ಸಾಧ್ಯವಿಲ್ಲ ಎಂದಿದ್ದರು. ಜೊತೆಗೆ ವಿಧಾನಸೌಧದಲ್ಲಿ ಕೂತು ನಾನು ನೋಟ್ ಪ್ರಿಂಟ್ ಮಾಡುತ್ತಿಲ್ಲ ಎಂದು ಉತ್ತರ ಹೇಳಿದ್ದಕ್ಕಾಗಿ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ ಬೆಳೆಹಾನಿ ಪರಿಹಾರ ಯಾವ ರೈತರಿಗೆ ಜಮೆಯಾಗಲಿದೆ? ಇಲ್ಲಿದೆ ಮಾಹಿತಿ

ಉತ್ತರ ಕರ್ನಾಟಕದ ಅಭಿವೃದ್ಧಿ ನಿಟ್ಟಿನಲ್ಲಿ ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 8 ಹೊಸ ಘೋಷಣೆಗಳನ್ನು ಮಾಡಿದರು. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತ ಚರ್ಚೆಗೆ ಉತ್ತರ ಕೊಡುವ ವೇಳೆ ಉತ್ತರ ಕರ್ನಾಟಕ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಘೋಷಣೆಗಳನ್ನು ಮಾಡಿದರು.

ಯಾರಿಗೆ ಎಷ್ಟು ಬೆಳೆ ಸಾಲ ಮನ್ನಾ ಆಗಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ

2018 ರಲ್ಲಿ ಹೆಚ್.ಡಿ. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ 1 ಲಕ್ಷ ರೂಪಾಯಿಯವರೆಗೆ ಬೆಳೆ ಸಾಲ ಮನ್ನಾ ಘೋಷಣೆ ಮಾಡಿದ್ದರು. ಆಗ ಕೆಲವು ರೈತರಿಗೆ ಬೆಳೆಸಾಲಮನ್ನಾ ಆಗಿದ್ದರೆ ಇನ್ನೂ ಕೆಲವರಿಗೆ ಬೆಳೆ ಸಾಲಮನ್ನಾ ಆಗಲಿಲ್ಲ. ಆದರೆ ಯಾವ ಯಾವ ರೈತರಿಗೆ ಬೆಳೆ ಸಾಲಮನ್ನಾ ಆಗಿದೆ ಎಂಬುದನ್ನು ರೈತರು ಮೊಬೈಲ್ ನಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ.? ಇಲ್ಲಿದೆ ಮಾಹಿತಿ.

ಬೆಳೆ ಸಾಲಮನ್ನಾ ಸ್ಟೇಟ್ಸ್ ಚೆಕ್ ಮಾಡುವುದು ಹೇಗೆ?

ಬೆಳೆ ಸಾಲಮನ್ನಾ ಸ್ಟೇಟಸ್ ಚೆಕ್ ಮಾಡಲು ಈ

https://mahitikanaja.karnataka.gov.in/Revenue/LoanWaiverReportBANKNew?ServiceId=2059&Type=TABLE&DepartmentId=2066

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ವಾಣಿಜ್ಯ ಬ್ಯಾಂಕಿಗೆ ಸಾಲ ಮನ್ನಾ ವರದಿ ಪೇಜ್ ಕಾಣಿಸುತ್ತದೆ. ಅಲ್ಲಿ ಮಾದರಿ ಕೆಳಗಡೆ ರೈತ ಆಯ್ಕೆ ಮಾಡಿಕೊಳ್ಳಬೇಕು. ನಂತರ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು.  ನಂತರ ನಿಮ್ಮ ಊರು (ಗ್ರಾಮ) ಆಯ್ಕೆ ಮಾಡಿಕೊಂಡು ಸಲ್ಲಿಸಿ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮ್ಮ ಊರಿನಲ್ಲಿ ಯಾರು ಯಾರಿಗೆ ವಾಣಿಜ್ಯ ಬ್ಯಾಂಕಿನಲ್ಲಿ ಪಡೆದವರಿಗೆ 1 ಲಕ್ಷ ರೂಪಾಯಿಯವರೆಗೆ ಸಾಲ ಮನ್ನಾ ಆಗಿದೆ? ಒಂದು ವೇಳೆ ಅವರಿಗೆ ಸಾಲಮನ್ನಾ ಆಗದೆ ಇದ್ದರೆ ಯಾವ ಕಾರಣಕ್ಕಾಗಿ ಸಾಲ ಮನ್ನಾ ಆಗಿಲ್ಲ ಎಂಬ ಮಾಹಿತಿ ಚೆಕ್ ಮಾಡಬಹುದು.

ಒಂದು ವೇಳೆ ನೀವು ಪ್ರಸಕ್ತ ಸಾಲಿನಲ್ಲಿ ಸಾಲ ಪಡೆದಿದ್ದರೆ ನಿಗದಿತ ಅವಧಿಯೊಳಗೆ ಬೆಳೆ ಸಾಲದ ಅಸಲು ಪಾವತಿಸಿದ್ದರೆ ಅದರ ಬಡ್ಡಿ ಮನ್ನಾ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದರಿಂದ ರೈತರಗೆ ಬಡ್ಡಿ ಮನ್ನಾಭಾಗ್ಯ ಸಿಗುವ ಸಾಧ್ಯತೆಯಿದೆ.

Leave a Comment