ಈ ರೈತರಿಗೆ ಬೆಳೆ ಹಾನಿ ಪರಿಹಾರ ನೀಡುವ ಪ್ರಕ್ರಿಯೆ ಆರಂಭ ಯಾರಿಗೆ ಎಷ್ಟು ಜಮೆ ಇಲ್ಲಿದೆ ಮಾಹಿತಿ

Written by Ramlinganna

Published on:

Crop loss compensation process : ರಾಜ್ಯದಲ್ಲಿ ನಿರಂತರವಾಗಿ ಸುರಿದ ಮಳೆಯಿಂದಾಗಿ  ಹಾಗೂ ನೆರೆ ಹಾವಳಿಯಿಂದಾಗಿ ಬೆಳೆ ಹಾನಿಯಾಗಿರುವ ರೈತರಿಗೆ ಬೆಳೆ ಹಾನಿ ಪರಿಹಾರ ನೀಡುವ ಪ್ರಕ್ರಿಯೆ ಆರಂಭವಾಗಿದೆ. ಮುಂದಿನ 30 ದಿನಗಳೊಳಗೆ ಬೆಳೆ ಹಾನಿಯಾದ ಎಲ್ಲಾ ರೈತರ ಬ್ಯಾಂಕ್ ಖಾತೆಗೆ ಪರಿಹಾರ ಹಣ ಜಮೆ ಮಾಡಲಾಗುವುದು ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.

ಮುಂಗಾರು ಮಳೆಯಿಂದಾಗಿ ಸುಮಾರು 12.54 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯಾಗಿದ್ದು, ಈ ನಷ್ಟಕ್ಕೆ ಸುಮಾರು 2 ಸಾವಿರ ಕೋಟಿ ರೂಪಾಯಿ ಪರಿಹಾರ ನೀಡಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.

ಸೆಪ್ಟೆಂಬರ್ ಸೆಪ್ಟೆಂಬರ್ ಮೊದಲ ವಾರದವರೆಗೆ ಸುರಿದ ಮಳೆಯಿಂದಾಗಿ ಸುಮಾರು 5.29 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿತ್ತು.ಈ ಬೆಳೆ ಹಾನಿಗೆ ಪರಿಹಾರ ನೀಡಲು ಸಿದ್ದತೆ ನಡೆಯುತ್ತಿದ್ದಾಗಲೇ  ಸೆಪ್ಟೆಂಬರ್ ಅಂತ್ಯದಲ್ಲಿ ಸುರಿದ ಮಳೆ ಮತ್ತು ಭೀಮಾ ಜಲಾನಯನ ಪ್ರದೇಶದಲ್ಲಿ ಉಂಟಾದ ನೆರೆಯಿಂದಾಗಿ ಕಲಬುರಗಿ, ಯಾದಗಿರಿ, ಬೀದರ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸುಮಾರು 7.24 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಹೀಗಾಗಿ ಈ ನಾಲ್ಕು ಜಿಲ್ಲೆಗಳಲ್ಲಿ ಬೆಳೆ ಹಾನಿ ಜಂಟಿ ಸಮೀಕ್ಷೆಯನ್ನು ಮತ್ತೊಮ್ಮೆ ನಡೆಸಲಾಗುತ್ತಿದ್ದು, ಇದು 10 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಈಗಾಗಲೇ ಜಂಟಿ ಸಮೀಕ್ಷೆ ಮುಗಿದಿರುವ 9 ಜಿಲ್ಲೆಗಳಲ್ಲಿನ ಸುಮಾರು 5.29 ಲಕ್ಷ ಹೆಕ್ಟೇರ್ ಬೆಳೆ ಹಾನಿಗೆ ಮೊದಲ ಹಂತದ ಪರಿಹಾರ ನೀಡುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Crop loss compensation process  ಯಾವ ಬೆಳೆಗೆ ಎಷ್ಟು ಬೆಳೆ ಹಾನಿ ಪರಿಹಾರ ನೀಡಲಾಗುವುದು

ಮಳೆಯಾಶ್ರೀತ ಬೆಳೆಗಳಿಗೆ ಪ್ರತಿ ಹೆಕ್ಟೇರಿಗೆ 17 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು. ನೀರಾವರಿ ಪ್ರದೇಶದ ಬೆಳೆ ಹಾನಿಯಾಗಿದ್ದರೆ ಪ್ರತಿ ಹೆಕ್ಟೇರಿಗೆ 25500 ರೂಪಾಯಿ ಪರಿಹಾರ ನೀಡಲಾಗುವುದು. ಅದೇ ರೀತಿ ದೀರ್ಘಕಾಲಿ ಬೆಳೆ ಹಾನಿಯಾಗಿದ್ದರೆ ಪ್ರತಿ ಹೆಕ್ಟೇರಿಗೆ 31 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು. ಅತೀ ಶೀಘ್ರದಲ್ಲಿ  ಬೆಳೆ ಹಾನಿಯಾದ ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು. ಯಾವ ಯಾವ ರೈತರ ಬೆಳೆ ಹಾನಿಯಾಗಿದೆಯೋ ಅಂತಹ ರೈತರಿಗೆ ಎಕರೆವಾರು ಬೆಳೆ ಹಾನಿ ಪರಿಹಾರ ಹಣ ಜಮೆಯಾಗುವುದು.

ರೈತರಿಗೆ ತರಬೇತಿ: ಹೆಸರು ನೋಂದಣಿಗೆ ಸೂಚನೆ

2025-26ನೇ ಸಾಲಿನಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ರೈತರಿಗೆ “ಕೃಷಿಗೆ ಪೂರಕವಾಗಿ ತೋಟಗಾರಿಕೆ ಬೆಳೆಗಳ ಉತ್ತೇಜನ” ಕುರಿತು ಇದೇ ಅಕ್ಟೋಬರ್ 10 ರಂದು ಒಂದು ದಿನದ ತರಬೇತಿಯನ್ನು ಕೋಟನೂರ(ಡಿ) ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗಿದೆ ಎಂದು ಕಲಬುರಗಿ ಕೋಟನೂರ(ಡಿ)  ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರು ಹಾಗೂ ಮುಖ್ಯಸ್ಥರು ತಿಳಿಸಿದ್ದಾರೆ.

ಇದನ್ನೂ ಓದಿ ನಿಮ್ಮ ಸರ್ವೆ ನಂಬರ್ ಹಾಕಿದರೆ ಸಾಕು ನಿಮ್ಮ ಜಮೀನಿನ ಮುಟೇಶನ್ ಓಪನ್ ಆಗುತ್ತದೆ

ಆಸಕ್ತಿಯುಳ್ಳ ರೈತ / ರೈತ ಮಹಿಳೆಯರು ಸಹಾಯಕ ಕೃಷಿ ನಿರ್ದೇಶಕರಾದ (ರೈ.ಮ) ನೀಲಕ್ಕಾ ನರಸಲಗಿ  ಇವರ ಮೊಬೈಲ್ ಸಂಖ್ಯೆ 9845350226, ಕೃಷಿ ಅಧಿಕಾರಿಗಳಾದ ಪ್ರಿಯಾಂಕ ಕುಲಕರ್ಣಿ-8277935625,  ಯಾಸ್ಮಿನ್-9901604822 ಇವರನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು. ಮೊದಲು ಬಂದವರಿಗೆ ಆದ್ಯತೆ ಕೊಡಲಾಗುವುದು, ತರಬೇತಿಯು 50 ಜನ ಅಭ್ಯರ್ಥಿಗಳಿಗೆ ಸೀಮಿತವಾಗಿದೆ. ಎಫ್.ಐ.ಡಿ.  ಹೊಂದಿರುವ ಆಸಕ್ತ ರೈತ / ರೈತ ಮಹಿಳೆಯರು ನೊಂದಾಯಿಸಿಕೊಳ್ಳಬೇಕು ಹಾಗೂ ಎಫ್.ಐ.ಡಿ. ಆಧಾರ  ಸಂಖ್ಯೆ ಹಾಗೂ ಮೊಬೈಲ್ ನಂಬರ ಕಡ್ಡಾಯವಾಗಿ ತರಬೇಕೆಂದು ಅವರು ತಿಳಿಸಿದ್ದಾರೆ.

Leave a Comment