ಮಳೆಗೆ ಬೆಳೆ ಹಾನಿಯಾದ ರೈತರ ಪಟ್ಟಿ ಬಿಡುಗಡೆ ಹೆಸರು ಚೆಕ್ ಮಾಡಿ

Written by Ramlinganna

Updated on:

Crop loss farmers list : ಪ್ರಸಕ್ತ ಸಾಲಿನಲ್ಲಿ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಪ್ರಕೃತಿ ವಿಕೋಪಗಳಾದ ಪ್ರವಾಹ, ಅತೀವೃಷ್ಟಿಯಿಂದ ಉಂಟಾದ ಬೆಳೆ ಹಾನಿ ಪರಿಹಾರಕ್ಕೆ ಸಂಬಂಧಿಸಿದಂತೆ ಬೆಳೆ ಹಾನಿಯಾದ ರೈತರ ಪಟ್ಟಿಯನ್ನು ಜಿಲ್ಲಾಧಿಕಾರಿ, ಉಫ ವಿಭಾಗಾಧಿಕಾರಿ,ತಹಶೀಲ್ದಾರ್,ಗ್ರಾಮ ಪಂಚಾಯತಿ, ರೈತ ಸಂಪರ್ಕ ಕೇಂದ್ರಗಳಲ್ಲಿ ಸೆಪ್ಟೆಂಬರ್ 3 ರಂದು ಪ್ರಕಟಿಸಲಾಗಿದೆ.

ಈ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣಗಳಿದ್ದಲ್ಲಿ ಸಂಬಂಧಿಸಿದ ತಹಶೀಲ್ದಾರ್, ಕೃಷಿ, ತೋಟಗಾರಿಕೆ ಇಲಾಖೆ ತಾಲೂಕು ಕಚೇರಿಗೆ 7 ದಿನಗಳೊಳಗಾಗಿ ಸಲ್ಲಿಸಬೇಕೆಂದು ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾರದೊಳಗೆ ಬೆಳೆ ಹಾನಿ ಪರಿಹಾರ ಜಮೆ- ಕಂದಾಯ ಸಚಿವ ಕೃಷ್ಣ ಭೈರೇಗೌಡ

ಜುಲೈ ತಿಂಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ರೈತರ ಅಪಾರ ಬೆಳೆ ಹಾಳಾಗಿತ್ತು. ಹಾಗಾಗಿ ಬೆಳೆ ಹಾನಿಯಾದ ರೈತರ ಖಾತೆಗೆ ಅತೀಶೀಘ್ರದಲ್ಲಿ ಬೆಳೆ ಹಾನಿ ಪರಿಹಾರ ಹಣ ಜಮೆ ಮಾಡಲಾಗುವುದು ಎಂದು ಕಂದಾಯ ಸಚಿವರು ತಿಳಿಸಿದ್ದರು.

ಹೌದು, ಕಂದಾಯ ಸಚಿವ ಕೃಷ್ಣ ಭೈರೇಗೌಡ ಮಾತನಾಡಿ, ಮಳೆಯಿಂದಾಗಿ ಯಾವ ಯಾವ ರೈತರ ಬೆಳೆ ಹಾನಿಯಾಗಿದೆಯೋ  ಅಂತಹ ರೈತರಿಗೆ ವಾರದಲ್ಲೇ ಪರಿಹಾರ ನೀಡಬೇಕೆಂದು ಸೂಚಿಸಿದ್ದಾರೆ.

ಇದನ್ನೂ ಓದಿ ನಿಮ್ಮ ಯಾವ ಯಾವ ಜಮೀನು ಜಂಟಿಯಲ್ಲಿದೆ? ಇಲ್ಲೇ ಚೆಕ್ ಮಾಡಿ

ಪ್ರಸಕ್ತ ಸಾಲಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ವಾರದೊಳಗೆ ಪರಿಹಾರ ನೀಡಲು, ಸಂಪೂರ್ಣವಾಗಿ ಹಾನಿಯಾಗಿರುವ ರಸ್ತೆಗಳನ್ನು ಪಟ್ಟಿ ಮಾಡಿ ವರದಿ ಕೊಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

, ರಾಜ್ಯದಲ್ಲಿ ಈವರೆಗೆ ಶೇ. 32 ರಷ್ಟು ಹೆಚ್ಚು ಮಳೆಯಾಗಿದೆ. ಇಲ್ಲಿಯವರೆಗೆ 61,700 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿರುವ ಬಗ್ಗೆ ವರದಿ ಬಂದಿದೆ. ಬೆಳೆ ಹಾನಿಗೆ ಇನ್ನೊಂದು ವಾರದಲ್ಲಿ ಪರಿಹಾರ ನೀಡುವಂತೆ  ಸೂಚನೆ ನೀಡಲಾಗಿದೆ. ಭೂ ಕುಸಿತ ಸೇರಿ ಮಳೆ ಸಂಬಂಧಿ ದುರ್ಘಟನೆಗಳಲ್ಲಿ58 ಮಂದಿ ಬಲಿಯಾಗಿದ್ದಾರೆ. ಅವರಿಗೂ ಪರಿಹಾರ ನೀಡಲಾಗಿದೆ ಹಾಳಾಗಿರುವ ರಸ್ತೆಗಳ ರಿಪೇರಿಗೆ ಜಿಲ್ಲಾಧಿಕಾರಿಗಳಿಗೆ 760 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ ಎಂದರು.

Crop loss farmers list ಬೆಳೆ ಹಾನಿಯಾಗಿದೆಯೇ? ಇಲ್ಲಿ ಅರ್ಜಿ ಸಲ್ಲಿಸಿ

ನಿಮ್ಮ ಬೆಳೆ ಹಾನಿಯಾಗಿದ್ದರೆ ಕೂಡಲೇ ನೀವು ನಿಮ್ಮ ಹತ್ತಿರದ ಗ್ರಾಮ ಪಂಚಾಯತಿಯಲ್ಲಿ ಅರ್ಜಿ ಸಲ್ಲಿಸಬೇಕು. ನಿಮ್ಮ ಜಮೀನಿನ ಪಹಣಿ, ಆಧಾರ್ ಕಾರ್ಡ್, ಜಮೀನಿನಲ್ಲಿ ಬಿತ್ತಿದ ಬೆಳೆ ಹಾಳಾಗಿರುವ ಫೋಟೋ ಹಾಗೂ ಬ್ಯಾಂಕ್ ಪಾಸ್ ಬುಕ್ ಝರಾಕ್ಸ್ ಪ್ರತಿಯನ್ನು ಸಲ್ಲಿಸಬೇಕು.

ಬೆಳೆ ಹಾನಿ ಪರಿಹಾರ ಜಮೆಯಾಗಿದೆಯೇ? ಮೊಬೈಲ್ ನಲ್ಲಿ ಚೆಕ್ ಮಾಡಿ

ಬೆಳೆ ಹಾನಿ ಪರಿಹಾರ ನಿಮ್ಮ ಖಾತೆಗೆ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು  ಈ

https://parihara.karnataka.gov.in/service92/    

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ  ನಿಮಗೆ ಭೂಮಿ ಆನ್ಲೈನ್ ಪರಿಹಾರ ಇನ್ಪುಟ್ ಸಬ್ಸಿಡಿ ಪಾವತಿ ವಿವರಗಳು ಪೇಜ್ ಕಾಣಿಸುತ್ತದೆ.

ಅಲ್ಲಿ ನೀವು Select Year / ವರ್ಷ  2024-25 ಆಯ್ಕೆ ಮಾಡಿಕೊಳ್ಳಬೇಕು. ನಂತರ Select Season / ಋತು ಆಯ್ಕೆ ಮಾಡಿಯಲ್ಲಿ ಮುಂಗಾರು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ Select Calamity ವಿಪತ್ತು ಆಯ್ಕೆ ಮಾಡಿಯಲ್ಲಿ Flood ಆಯ್ಕೆ ಮಾಡಬೇಕು. ನಂತರ Get Data / ಹುಡುಕು ಮೇಲೆ ಕ್ಲಿಕ್ ಮಾಡಬೇಕು.

ನೀವು Survey Number / ಸರ್ವೆ ನಂಬರ್ ಮೇಲೆ ಕ್ಲಿಕ್ ಮಾಡಬೇಕು.  ನಂತರ ನೀವು ನಿಮ್ಮ ಜಿಲ್ಲೆಯನ್ನು ಆಯ್ಕೆಮಾಡಿಕೊಳ್ಳಬೇಕು. ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು. ನಂತರ ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನಿಮ್ಮ ಸರ್ವೆ ನಂಬರ್ ನಮೂದಿಸಬೇಕು. ನಂತರ ಸರ್ ನಾಕ್ ನಲ್ಲಿ ಸ್ಟಾರ್ ಹಾಗೂ ಹಿಸ್ಸಾ ನಂಬರ್ ನಲ್ಲಿಯೂ ಸ್ಟಾರ್ ಆಯ್ಕೆ ಮಾಡಿಕೊಳ್ಳಬೇಕು. ನಂತರ  Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಬೇಕು.

Leave a Comment