ಕೃಷಿ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದರಿಂದ ರೈತರು ಸ್ವತಃ ತಾವೇ ಮೊಬೈಲ್ ನಲ್ಲಿ ಬೆಳೆಸಮೀಕ್ಷೆ ಮಾಡ ಸರ್ಕಾರದ ಸೌಲಭ್ಯ ಪಡೆಯಬಹುದು.
ಹೌದು, ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ. ರೈತರ ಬಳಿಯಿರುವ ಸ್ಮಾರ್ಟ್ ಫೋನ್ ನಲ್ಲಿ ತಮ್ಮ ಜಮೀನಿನಲ್ಲಿ ಅತೀ ಸುಲಭವಾಗಿ ಬೆಳೆ ಸಮೀಕ್ಷೆ ಮಾಡಬಹುದು. ಮೊಬೈಲ್ ನಲ್ಲಿ ಬೆಳೆ ಸಮೀಕ್ಷೆ ಮಾಡುವುದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ರೈತರು ಗೂಗಲ್ ಪ್ಲೇ ಸ್ಟೋರ್ ನಲ್ಲಿ Rabi farmer crop survey 2022-23 ಎಂದು ಟೈಪ್ ಮಾಡಿ ಬೆಳೆ ಸಮೀಕ್ಷೆ ಆ್ಯಪ್ ಅನ್ನು ಡೌನ್ಲೋಡ್ ಮಾಡಿಕೊಂಡು ತಮ್ಮ ಜಮೀನುಗಳ ಸರ್ವೆ ನಂಬರ್, ಹಿಸ್ಸಾ ನಂಬರ್, ತಾವು ಬೆಳೆದ ಕೃಷಿ ಬೆಳೆಗಳ ಹಾಗೂ ಜಮೀನಿನಲ್ಲಿರುವ ಬಹುವಾರ್ಷಿಕ ತೋಟಗಾರಿಕೆ, ಅರಣ್ಯ ಇತರೆ ಬೆಳೆಗಳ ಮಾಹಿತಿಯಯನ್ನು ಛಾಯಾಚಿ್ರ ಸಹಿತ ಅಪ್ಲೋಡ್ ಮಾಡಬೇಕು.
ಮೊಬೈಲ್ ನಲ್ಲಿ ಬೆಳೆ ಸಮೀಕ್ಷೆ ಮಾಡುವುದು ಹೇಗೆ?
ರೈತರು ಮೊಬೈಲ್ ನಲ್ಲಿ ಬೆಳೆ ಸಮೀಕ್ಷೆ ಮಾಡಲು ಈ
https://play.google.com/store/apps/details?id=com.csk.Khariffarmer22_23.cropsurvey
ಲಿಂಕ್ ಮೇಲೆ ಕ್ಲಿಕ್ ಮಾಡಿ install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಇದಾದಮೇಲೆ ರೈತರ ಬೆಳೆ ಸಮೀಕ್ಷೆ 2022-23 ಆ್ಯಪ್ ಕಾಣಿಸುತ್ತದೆ. ನಂತರ ವೈಲ್ ಯುಸಿಂಗ್ ದ ಆ್ಯಪ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಡಿವೈಸ್ ಲೊಕೇಶನ್ ಕೆಳಗಡೆ Precise ಅಂದರೆ ನಿಖರವಾದ ಹಾಗೂ Approximate ಎಂಬ ಎರಡು ಬಾಕ್ಸ್ ಕಾಣುತ್ತದೆ. ಅಲ್ಲಿ Precise ಆಯ್ಕೆಯಾಗಿರುತ್ತದೆ. ವೈಲ್ ಯೂಸಿಂಗ್ ದ ಆ್ಯಪ್ ಮೇಲೆ ಕ್ಲಿಕ್ ಮಾಡಿ ಅಲೋ ಮೇಲೆ ಎರಡು ಸಲ ಕ್ಲಿಕ್ ಮಾಡಿದ ನಂತರ ಬೆಳೆ ಸಮೀಕ್ಷೆ ಹಿಂಗಾರು ಓಪನ್ ಆಗುತ್ತದೆ. ಅಲ್ಲಿ ಬೆಳೆ ಸಮೀಕ್ಷೆ ಸಹಾಯವಾಣಿ ನಂಬರ್ ಕಾಣಿಸುತ್ತದೆ.8448447715 ಸಹಾಯವಾಣಿ ನಂಬರ್ ಆಗಿದೆ.
ಇಕೆವೈಸಿ ಮೂಲಕ ಆಧಾರ್ ದೃಢೀಕರಿಸಿ ಮೇಲೆ ಕ್ಲಿಕ್ ಮಾಡಿ ಆಧಾರ್ ನಂಬರ್ ನಮೂದಿಸಬೇಕು. ನಂತರ ಐ ಅಗ್ರಿ ಬಾಕ್ಸ್ ಮೇಲೆ ಕ್ಲಿಕ್ ಮಾಡಿ ಓಟಿಪಿ ಆಯ್ಕೆ ಮಾಡಿಕೊಳ್ಳಬೇಕು. ನಂತರ Generate OTP ಮೇಲೆ ಕ್ಲಿಕ್ ಮಾಡಬೇಕು. ಆಮೇಲೆ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಅದನ್ನು ನಮೂದಿಸಿ ಅಲ್ಲಿ ಕೇಳಲಾದ ಮಾಹಿತಿಯನ್ನು ಭರ್ತಿ ಮಾಡಿ ಬೆಳೆ ಸಮೀಕ್ಷೆ ಮಾಡಬಹುದು.
ಬೆಳೆ ಸಮೀಕ್ಷೆ ಏಕೆ ಮಾಡಿಸಬೇಕು?
ಬೆಳೆ ಸಮೀಕ್ಷೆ ಮಾಡುವುದರಿಂದ ರೈತರಿಗೆ ಹಲವಾರು ರೀತಿಯಲ್ಲಿ ಪ್ರಯೋಜನೆಗಳಿವೆ. ಬೆಳೆ ಸಮೀಕ್ಷೆಯಿಂದ ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆಗಳ ವಿಸ್ತೀರ್ಣವನ್ನು ಲೆಕ್ಕಹಾಕಲು ಸಹಾಯವಾಗುತ್ತದೆ. ಬೆಳೆ ವಿಮೆ ಯೋಜನೆಯ ಸರ್ವೆ ನಂಬರ್ ವಾರು, ಬೆಳೆ ಪರಿಶೀಲನೆ ಮಾಡಲು ಸಹಾಯವಾಗುತ್ತದೆ. ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು ಸರ್ವೆ ನಂಬರ್ ಆಯ್ಕೆ ಮಾಡಲು, ಕನಿಷ್ಠ ಬೆಂಬಲ ಬೆಲೆ ಯೋಜನೆಯ ಅರ್ಹ ಫಲಾನುಭವಿ ಗುರುತಿಸಲು ಅನುಕೂಲವಾಗುತ್ತದೆ. ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ವರದಿ ಸಿದ್ದಪಡಿಸಲು ಸಹಾಯವಾಗಲಿದೆ.
ಇದನ್ನೂ ಓದಿ : ಪಿಎಂ ಕಿಸಾನ್ ಹಣವನ್ನು ಯಾವ ರೈತರು ಎಷ್ಟು ಕಂತು ಹಿಂತಿರುಗಿಸಬೇಕು? ಮೊಬೈಲ್ ನಲ್ಲೇ ಚೆಕ್ ಮಾಡಿ
ಬೆಳೆ ವಿಮೆ, ಬೆಳೆ ನಷ್ಟ ಪರಿಹಾರ ಬೆಂಬಲ ಬೆಲೆ ಮತ್ತು ಸರ್ಕಾರದ ವಿವಿಧ ಯೋಜನೆ ಅಡಿ ಸವಲತ್ತುಗಳನ್ನು ಪಡೆಯಲು ರೈತರು ಕಡ್ಡಾಯವಾಗಿ ಬೆಳೆ ಸಮೀಕ್ಷೆ ಆ್ಯಪ್ ನಲ್ಲಿ ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು ರೈತರೇ ಖುದ್ದಾಗಿ ದಾಖಲಿಸಬಹುದು.
ರೈತರು ನಿಗದಿತ ಸಮಯದೊಳಗೆ ತಾವು ಬೆಳೆದ ಬೆಳೆಯ ಮಾಹಿತಿಯನ್ನು ಖಾಸಗಿ ನಿವಾಸಿಗಳ ಪಿ.ಆರ್. ಸಹಾಯದಿಂದಲೂ ರೈತರ ಮೊಬೈಲ್ ಆ್ಯಪ್ 2022-23 ನಲ್ಲಿ ನಮೂದಿಸಬಹುದು. ಹೆಚ್ಚಿನ ಮಾಹಿತಿಗಾಗಿ ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರದ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯ ಅಧಿಕಾರಿಗಳನ್ನು ಸಂಪರ್ಕಿಸಬಹುದು.