ಬೆಳೆ ಸಮೀಕ್ಷೆ ಹೀಗೆ ಮಾಡಿ ಸರ್ಕಾರದ ಸೌಲಭ್ಯ ಪಡೆಯಿರಿ

Written by Ramlinganna

Updated on:

Crop survey within minute 2023-24ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಈಗಾಗಲೇ ಪ್ರಾರಂಭವಾಗಿದ್ದು, ರೈತರು ತಾವು ಬೆಳೆದ ಬೆಳೆಗಳ ವಿವರಗಳನ್ನು ತಾವೇ ಖುದ್ದಾಗಿ ಗೂಗಲ್ ಪ್ಲೇ ಸ್ಟೋರ್ ನಿಂದ ಹಿಂಗಾರು ರೈತರ ಬೆಳೆ ಸಮೀಕ್ಷೆ 2023 ನ್ನು ಡೌನ್ಲೋಡ್ ಮಾಡಿಕೊಂಡು ಬೆಳೆ ವಿವರಗಳನ್ನು ದಾಖಲಿಸಬೇಕಾಗಿದೆ.

ಹೀಗೆ ವಿವರಗಳನ್ನು ದಾಖಲಿಸುವುದರಿಂದ ರೈತರಿಗೆ ಕನಿಷ್ಟ ಬೆಂಬಲ ಬೆಲೆ ಯೋಜನೆ, ಬೆಳೆ ವಿಮೆ ಯೋಜನೆ, ಬರಗಾಲ ಮತ್ತು ಪ್ರವಾಹ ಸಂದರ್ಭದಲ್ಲಿ ನಷ್ಟ ಪರಿಹಾರ ಪಡೆಯಲು ಪಹಣಿಯಲ್ಲಿ ಬೆಳೆ ವಿವರಗಳನ್ನು ದಾಖಲಿಸಲು ಮತ್ತುಬೆಳೆ ಸಾಲ ಪಡೆಯುವಲ್ಲಿ ರೈತರಿಗೆ ಅನುಕೂಲವಾಗುವದರಿಂದ ಎಲ್ಲಾ ರೈತರು ಬೆಳೆ ವಿವರಗಳನ್ನು ತ್ವರತವಾಗಿ ಬೆಳೆ ಸಮೀಕ್ಷೆ ಆ್ಯಪ್ ನಲ್ಲಿ ದಾಖಲಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು. ರೈತರು ಬೆಳೆ ವಿವರಗಳನ್ನು ಅಪ್ಲೋಡ್ ಮಾಡದಿದ್ದಲ್ಲಿ ಮೇಲೆ ತಿಳಿಸಿದ ಸರ್ಕಾರದ ಯೋಜನೆಗಳ ಲಾಭದಿಂದ ವಂಚಿತರಾಗುವ ಸಾಧ್ಯತೆಯಿರುವುದರಿಂದ ರೈತರು ಇದನ್ನು ಗಂಭೀರವಾಗಿ ಪರಿಗಣಿಸಿ ತುರ್ತಾಗಿ ವಿವರಗಳನ್ನು ದಾಖಲಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ಜಿ. ಎಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಗ್ರಾಮದ ಖಾಸಗಿ ನಿವಾಸಿಗಳು, ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಗಳ ಅಧಿಕಾರಿಗಳನ್ನು ಸಂಪರ್ಕಿಸಬಹುದು.

Crop survey within minute ಹಿಂಗಾರು ಬೆಳೆ ಸಮೀಕ್ಷೆ ಮಾಡುವುದು ಹೇಗೆ?

ರೈತರು ಹಿಂಗಾರು ಬೆಳೆ ಸಮೀಕ್ಷೆ ಮಾಡಲು ಈ

https://play.google.com/store/apps/details?id=com.csk.farmer23_24.cropsurvey&hl=en_US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಿ ಇನ್ಟಾಲ್ ಮೇಲೆ ಕ್ಲಿಕ್ ಮಾಡಿ ಬೆಳೆ ಸಮೀಕ್ಷೆ ಮಾಡಬಹುದು.

ನಿಮ್ಮ ಬೆಳೆ ಸಮೀಕ್ಷೆ ಆಗಿದೆಯೋ ಇಲ್ಲವೋ ಮೊಬೈಲ್ ನಲ್ಲೇ ಚೆಕ್ ಮಾಡಿ

ರೈತರು ತಮ್ಮ ಬೆಳೆ ಸಮೀಕ್ಷೆ ಆಗಿದೆಯೋ ಇಲ್ಲವೋ ಎಂಬುದನ್ನು ರೈತರು ಈಗ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು, ರಾಜ್ಯದಲ್ಲಿ ಬರಗಾಲ ಘೋಷಣೆಯಾದ ಎಲ್ಲಾ ತಾಲೂಕುಗಳಲ್ಲಿ ಬೆಳೆ ಸಮೀಕ್ಷೆ ನಡೆಯುತ್ತಿದ್ದು, ಬರ ಪರಿಹಾರಕ್ಕಾಗಿ  ರೈತರು ತಮ್ಮ ಜಮೀನುಗಳಲ್ಲಿ ಬೆಳೆದ ಬೆಳೆಯನ್ನು ಸಮೀಕ್ಷೆ ಮಾಡಿಸಬೇಕು. ಬೆಳೆ ಸಮೀಕ್ಷೆಯಾದರೆ ಮಾತ್ರ ನಿಮಗೆ ಬರ ಪರಿಹಾರ ಹಣ ಜಮೆಯಾಗುತ್ತದೆ.

ನಿಮ್ಮ ಬೆಳೆ ಸಮೀಕ್ಷೆ ಆಗಿದೆಯೋ ಇಲ್ಲವೋ? ಇಲ್ಲೇ ಚೆಕ್ ಮಾಡಿ

ಬೆಳೆ ಸಮೀಕ್ಷೆ ಮಾಡಿಸಿಕೊಂಡ ರೈತರು ತಮ್ಮ ಬೆಳೆ ಸರಿಯಾಗಿ ಸಮೀಕ್ಷೆ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಲು ಈ

https://play.google.com/store/apps/details?id=com.crop.offcskharif_2021

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಬೆಳೆ ದರ್ಶಕ್ ಆ್ಯಪ್ ಓಪನ್ ಆಗುತ್ತದೆ. ನಂತರ ಇನಸ್ಟಾಲ್ ಮೇಲೆ ಕ್ಲಿಕ್ ಮಾಡಿ ಓಪನ್ ಮೇಲ ಕ್ಲಿಕಿ ಮಾಡಬೇಕಾಗುತ್ತದೆ.  ಅಲ್ಲಿ ನಿಮಗೆ ಎರಡು ಆಯ್ಕೆಗಳು ಕಾಣಿಸುತ್ತವೆ ಅದರಲ್ಲಿ ನೀವು ರೈತ ಆಯ್ಕೆ ಮಾಡಿಕೊಳ್ಳಬೇಕು. ನಂತರ ವೈಲ್ ಯೂಸಿಂಗ್ ದಿಸ್ ಆ್ಯಪ್ ಮೇಲೆ ಒತ್ತಿದ ನಂತರ ಅಲೋ ಬಟನ್ ಓತ್ತಬೇಕು. ನಂತರ 2023-24 ಆಯ್ಕೆ ಮಾಡಿಕೊಂಡು ಮುಂಗಾರು ಅಥವಾ ಹಿಂಗಾರು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನೀವು ನಿಮ್ಮ ಜಿಲ್ಲೆಯನ್ನು ಆಯ್ಕೆ ಮ್ಡಿಕೊಳ್ಳಬೇಕಾಗುತ್ತದೆ. ನಿಮ್ಮ ತಾಲೂಕು, ಹೋಬಳಿ ಆಯ್ಕೆ ಮಾಡಿಕೊಂಡ ನಂತರ ನಿಮ್ಮ ಊರು ಸೆಲೆಕ್ಟ್ ಮಾಡಿಕೊಳ್ಳಬೇಕು. ಇದಾದ ಮೇಲೆ ನಿಮ್ಮ ಸರ್ವೆ ನಂಬರ್ ಹಾಕಿ ವಿವರ ಪಡೆಯಿರಿ ಮೇಲೆ ಕ್ಲಿಕ್ ಮಾಡಬೇಕು. ನಂತರ ಮಾಲಿಕರ ವಿವರ ಮೇಲೆ ಕ್ಲಿಕ್ ಮಾಡಿ ನಿಮ್ಮ ಹೆಸರು ಸೆಲೆಕ್ಟ್ ಮಾಡಿಕೊಳ್ಳಬೇಕು. ನಂತರ ಸಮೀಕ್ಷೆಯ ವಿವರಗಳನ್ನು ಪಡೆಯಿರಿ ಮೇಲೆ ಕ್ಲಿಕ್ ಮಾಡಿ ನಿಮ್ಮ ಬೆಳೆ ಸಮೀಕ್ಷೆ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಬಹುದು.

ಇದನ್ನೂ ಓದಿ Pahani Aadhaarcard link ಮೊಬೈಲ್ ನಲ್ಲಿ ಹೀಗೆ ಮಾಡಿ

ರೈತರ ಬೆಳೆ ಸಮೀಕ್ಷೆ ಆದರೆ ಮಾತ್ರ ಸರ್ಕಾರದ ಸೌಲಭ್ಯಸಿಗಲಿದೆ.ಇಲ್ಲದಿದ್ದರೆ ರೈತರು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಾರೆ. ಹಾಗಾಗಿ ಒಮ್ಮೆ ಬೆಳೆ ಸಮೀಕ್ಷೆ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು.

Leave a Comment