Cropinsurance last date here : ತೊಗರಿ, ಹತ್ತಿ, ಮೆಣಸಿನ ಕಾಯಿ ಸೇರಿದಂತೆ ಇತರ ಬೆಳೆಗಳ ವಿಮೆ ಮಾಡಿಸಲು ಜುಲೈ 31 ಕೊನೆಯ ದಿನವಾಗಿದೆ. ಇದರೊಂದಿಗೆ ಇತರ ಯಾವ ಯಾವ ಬೆಳೆಗಳಿಗೆ ಜುಲೈ 31 ರೊಳಗೆ ವಿಮೆ ಮಾಡಿಸಬಹುದು ಎಂಬುದನ್ನು ಸಹ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ನೋಡಿ ಮಾಹಿತಿ.
ಜೇವರ್ಗಿ ಹಾಗೂ ಯಡ್ರಾಮಿ ತಾಲೂಕುಗಳಲ್ಲಿ 2026ರ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ ಅನುಷ್ಟಾನಗೊಳಿಸಲು ಇಂಡಸ್‌ಯಿAಡ ಜನರಲ್ ಇನ್ಸುರೆನ್ಸ್ IndusInd General Insurance ವಿಮಾ ಸಂಸ್ಥೆಯನ್ನು ನಿಗದಿಪಡಿಸಲಾಗಿದೆ ಎಂದು ಜೇವರ್ಗಿ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
Cropinsurance last date here ಯಾವ ಯಾವ ಬೆಳೆಗಳಿಗೆ ಜುಲೈ 31 ರೊಳಗೆ ವಿಮೆ ಮಾಡಿಸಬಹುದು
ಮುಂಗಾರು ಹಂಗಾಮಿಗೆ ತಾಲೂಕಿನ ಬೆಳೆಗಳ ವಿವರ ಹಾಗೂ ನೊಂದಣಿಗೆ ಕೊನೆಯ ದಿನಾಂಕದ ವಿವರ ಇಂತಿದೆ. ತೊಗರಿ (ಮಳೆ ಆಶ್ರಿತ), ತೊಗರಿ (ನೀರಾವರಿ), ಹತ್ತಿ (ಮಳೆ ಆಶ್ರಿತ), ಹತ್ತಿ (ನೀರಾವರಿ), ಎಳ್ಳು (ಮಳೆ ಆಶ್ರಿತ), ಸಜ್ಜೆ (ಮಳೆ ಆಶ್ರಿತ), ಮೆಕ್ಕೆಜೋಳ (ಮಳೆ ಆಶ್ರಿತ), ಮೆಕ್ಕೆಜೋಳ (ನೀರಾವರಿ), ಸೋಯಾಬೀನ್ (ಮಳೆ ಆಶ್ರಿತ) ಬೆಳೆಗಳಿಗೆ ನೋಂದಣಿ ಮಾಡಿಕೊಳ್ಳಲು 2026ರ ಜುಲೈ 31 ಕೊನೆಯ ದಿನವಾಗಿದೆ. ಹೆಸರು (ಮಳೆ ಆಶ್ರಿತ), ಉದ್ದು (ಮಳೆ ಆಶ್ರಿತ) ಬೆಳೆÀಗಳಿಗೆ ನೋಂದಣಿ ಮಾಡಿಕೊಳ್ಳಲು 2026ರ ಜುಲೈ 15 ಕೊನೆಯ ದಿನವಾಗಿದೆ. ಸೂರ್ಯಕಾಂತಿ (ಮಳೆ ಆಶ್ರಿತ), ಭತ್ತ (ನೀರಾವರಿ) ಬೆಳೆಗಳಿಗೆ ನೋಂದಣಿ ಮಾಡಿಕೊಳ್ಳು 2026ರ ಆಗಸ್ಟ್ 14 ರಂದು ಕೊನೆಯ ದಿನವಾಗಿದೆ.
ಬೆಳೆಸಾಲ ಪಡೆಯದ ರೈತರು ನೊಂದಣಿಗಾಗಿ ಅರ್ಜಿಯೊಂದಿಗೆ ಭೂಮಿ ಹೊಂದಿರುವುದ್ದಕ್ಕೆ ದಾಖಲೆಗಳಾದ ಪಹಣಿ, ಆಧಾರ ಸಂಖ್ಯೆ ಜೋಡಿಸಿದ ಬ್ಯಾಂಕ್ ಖಾತೆ/ ಪಾಸ್‌ಬುಕ್ ಮತ್ತು ಆಧಾರ ಸಂಖ್ಯೆಯೊAದಿಗೆ ಡಿ.ಸಿ.ಸಿ/ಇತರೆ ಬ್ಯಾಂಕ್ ಗ್ರಾಮ-ಒನ್ ಮತ್ತು ಸಿ.ಎಸ್.ಸಿ ಕೇಂದ್ರಗಳಿಗೆ ಸಂಪರ್ಕಿಸಬೇಕು.
ಪ್ರಸಕ್ತ ಸಾಲು ಮತ್ತು ಮುಂಗಾರು ಹಂಗಾಮಿನಲ್ಲಿ ಮಳೆ ಅಭಾವ ಅಥವಾ ಇತರೆ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಥವಾ ಸ್ಧಳ, ನಿರ್ಧಿಷ್ಟ, ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂ ಕುಸಿತ, ಬೆಳೆ ಮುಳುಗಡೆ, ಮೇಘಸ್ಪೋಟ ಮತ್ತು ಗುಡುಗು ಮಿಂಚುಗಳಿAದಾಗಿ ಉಂಟಾಗುವ ಬೆಂಕಿ ಅವಗಡ ಸಂದರ್ಭದಲ್ಲಿ ಬೆಳೆ ನಷ್ಟವುಂಟಾದರೆ ರೈತರು ಬೆಳೆ ವಿಮೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಇದನ್ನೂ ಓದಿ ಮೊಬೈಲ್ ನಲ್ಲಿಯೇ ಜಮೀನಿನ ಪೋಡಿ ನಕ್ಷೆ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ
ಜೇವರ್ಗಿ ಮತ್ತು ಯಡ್ರಾಮಿ ಎಲ್ಲಾ ರೈತರು ಉಳಿದ ಬೆಳೆಗಳ ಆಯ್ಕೆಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಹಾಗೂ ನೊಂದಣಿಗಾಗಿ ಹತ್ತಿರದ ಬ್ಯಾಂಕುಗಳಿಗೆ ಅಥವಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘÀಗಳಿಗೆ ಸಂಪರ್ಕಿಸಿ ಬೆಳೆ ವಿಮೆ ನೊಂದಣಿಯ ಸದುಪಯೋಗವನ್ನು ಪಡೆದುಕೊಳ್ಳಲು ಕೋರಲಾಗಿದೆ.
ಪ್ರತಿ ಹೆಕ್ಟೇರ್‌ಗೆ ರೈತರು ಪಾವತಿಸಬೇಕಾದ ವಿಮಾ ಮೊತ್ತದ ವಿವರ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರು ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
ವಿಮೆ ಅರ್ಜಿ ಸ್ಟೇಟಸ್ ಚೆಕ್ ಮಾಡುವುದು ಹೇಗೆ ?
ಬೆಳೆ ವಿಮೆ ಅರ್ಜಿಯ ಸ್ಟೇಟಸ್ ಚೆಕ್ ಮಾಡಲು ಈ
https://www.samrakshane.karnataka.gov.in/PublicHome.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಬೆಳೆ ವಿಮೆಯ ಸಂರಕ್ಷಣೆ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮಗೆ ಹಲವಾರು ಆಯ್ಕೆಗಳು ಕಾಣಿಸುತ್ತವೆ. ಅದರಲ್ಲಿ ನೀವು check status ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ನೀವು ಮೊಬೈಲ್ ನಂಬರ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ನೀವು ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು. ನಂತರ ಅಲ್ಲಿ ಕಾಣುವ ಕ್ಯಾಪ್ಚಾ ಕೋಡ್ ನಮೂದಿಸಬೇಕು. ನಂತರ Search ಮೇಲೆ ಕ್ಲಿಕ್ ಮಾಡಬೇಕು





