ಬಂಗಾಳಕೊಲ್ಲಿ ಹಾಗೂ ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾರ್ಚ್ 21ರಂದು ಧಾರವಾಡ, ಗದಗ, ಬಾಗಲಕೋಟೆ, ಬೆಳಗಾವಿ, ರಾಯಚೂರು, ಕೊಪ್ಪಳ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಮಾರ್ಚ್ 21 ರಿಂದ ಮಾರ್ಚ್ 24 ರವರೆಗೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಅದೇ ರೀತಿ ಮಾರ್ಚ್ 24 ಮತ್ತು 25 ರಂದು ಧಾರವಾಡ, ಗದಗ, ಕೊಪ್ಪಳ, ಬೆಳಗಾವಿ, ಹಾವೇರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಸನ ಕೊಡಗು, ರಾಮನಗರ, ಮೈಸೂರು, ಮಂಡ್ಯ, ತುಮಕೂರು ಹಾಗೂ ಶಿವಮೊಗ್ಗ ಜಿಲ್ಲಲೆಗಳಲ್ಲಿಮಾರ್ಚ್ 21 ರಿಂದ ಮಾರ್ಚ್ 24 ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ : ರೈತರಿಗೆ ಬೆಳೆ ವಿಮೆಯ ಸ್ಟೇಟಸ್, ಯಾವ ಬೆಳೆಗೆ ಎಷ್ಟು ವಿಮೆ ಕಟ್ಟಬೇಕೆಂಬ ಮಾಹಿತಿ ನೋಡಬೇಕೆ? ಇಲ್ಲಿದೆ ಮಾಹಿತಿ
ಶನಿವಾರ ಮತ್ತು ಭಾನುವಾರ ರಾಜ್ಯದಲ್ಲಿ ವಿವಿಧೆಡೆ ಸುರಿದ ಮಳೆಯಿಂದಾಗಿ ಹಲವು ಜಿಲ್ಲೆಗಳಲ್ಲಿ ರೈತರ ಅಪಾರ ಬೆಳೆ ಹಾಳಾಗಿದೆ. ಅನೇಕ ಕಡೆ ಬೆಳೆಗಳು ನೆಲಕಚ್ಚಿವೆ. ಮಾವು, ಗೇರು ಹಾಗೂ ಇತರ ತೋಟಗಾರಿಕೆ ಬೆಳೆಗಳಿಗೂ ಅಕಾಲಿಕ ಮಳೆಯಿಂದ ಹಾನಿಯಾಗಿದೆ.ಈ ಅಕಾಲಿಕ ಮಳೆಯಿಂದಾಗಿ ರೈತರಲ್ಲಿ ಆತಂಕ ಹೆಚ್ಚಾಗಿದೆ.
ಅಸನಿ ಚಂಡಮಾರುತದಿಂದ ರಾಜ್ಯಕ್ಕಿಲ್ಲ ಅಪಾಯ
ಅಂಡಮಾನ್ ಮತ್ತು ನಿಕೋಬಾರ್ ಭಾಗದಲ್ಲಿ ಅಪ್ಪಳಿಸಲಿರುವ ಅಸನಿ ಚಂಡಮಾರುತದಿಂದ ರಾಜ್ಯಕ್ಕೆ ಹೆಚ್ಚಿನ ಅಪಾಯವಿಲ್ಲ. ಆದರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಾರ್ಚ್ 24 ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಂಡಮಾರು ರಾಜ್ಯಕ್ಕೆ ಹೆಚ್ಚಿನ ಪರಿಣಾಮ ಬೀರಿದಿದ್ದರೂ ಕೆಲವು ಕಡೆ ಗುಡುಗು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ., ಅಸೀನ್ ಚಂಡಮಾರುತದ ಪರಿಣಾಮವಾಗಿ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳ ಹಲವೆಡೆ ಮುಂದಿನ ಐದು ದಿನಗಳವರೆಗೆ ಮಳೆಯಾಗುವ ಮುನ್ಸೂಚನೆಯಿದೆ.
ಬೆಂಗಳೂರಿನಲ್ಲಿ ಮಳೆ
ಬೆಂಗಳೂರು ನಗರದ ವಿವಿಧೆಡೆ ಶನಿವಾರ ಮತ್ತು ಭಾನುವಾರ ಎರಡೂ ದಿನಗಳ ಕಾಲ ಮಳೆ ಸುರಿಯಿತು. ಭಾನುವಾರ ಮಧ್ಯಾಹ್ನದಿಂದಲೇ ಮೋಡ ಕವಿದ ವಾತಾವರಣವಿತ್ತು.ನಂತರ ಬಿಸಲು ಕಂಡಿತ್ತು. ಮತ್ತೆ ಜೋರಾದ ಗಾಳಿ, ಬೀಸಲಾರಂಭಿಸಿ ಸಾಯಂಕಾಲದ ವೇಳೆ ಕೆಲವೆಡೆ ಅಬ್ಬರದ ಮಳೆ ಸುರಿಯಿತು.ಜೋರಾಗಿ ಗಾಳಿ ಬಿಸಿದ್ದರಿಂದ ಕೆಲವೆಡೆ ಮರಗಳ ಕೊಂಬೆಗಳು ಬಿದ್ದವು. ಇದರಿಂದ ವಾಹನ ಸವಾರರಿಗೆ ತೊಂದರೆಯುಂಟಾಯಿತು. ಬಲವಾಗಿ ಬೀಸಿದ್ದ ಗಾಳಿಗೆ ನಗರದಾದ್ಯಂತ ಧೂಳು ಆವರಿಸಿದ್ದರಿಂದಪರದಾಡುವ ಸ್ಥಿತಿ ಉಂಟಾಗಿತ್ತು. ನಂತರ ಸುರಿದ ಮಳೆಯಿಂದಾಗಿ ಧೂಳು ಕಡಿಮೆಯಾಯಿತು. ಆದರೆ ಗಾಳಿಯೊಂದಿಗೆ ಮಳೆ ಮುಂದುವರೆಯಿತು. ಬೆಂಗಳೂರು ಪೂರ್ವ ವಲಯದ ಕೆಲ ಭಾಗದಲ್ಲಿ ಭರ್ಜರಿ ಮಳೆಯಾಗಿದ್ದು, ಉಳಿದ ವಲಯಗಳಲ್ಲಿಯೂ ಹಗುರದ ಮಳೆಯಾಗಿದೆ. ರಾತ್ರಿ 10ರವರೆಗೂ ನಗರದಲ್ಲಿ ಧಾರಾಕಾರ ಮಳೆಯಾಗಿದೆ.
ವಿಜಯಪುರ ಜಿಲ್ಲೆಯಲ್ಲಿ ಬಿರುಗಾಳಿಗೆ ದ್ರಾಕ್ಷಿ ಹಾಳು
ಬಿಜಾಪುರ ಜಿಲ್ಲೆಯ ತಿಕೋಟಾ ತಾಲೂಕಿನ ತಾಜಪುರ ಗ್ರಾಮದ ಸುತ್ತಮುತ್ತ ಬಿರುಗಾಳಿ ಸಹಿತ ಸುರಿದ ಮಳೆಗೆ ರೈತರ ದ್ರಾಕ್ಷಿ ಬೆಳೆ ನೆಲಕ್ಕುರಿಳಿ ಬಿದ್ದಿವೆ. ಗಾಳಿಯೊಂದಿಗೆ ಮಳೆಯಾಗಿದ್ದರಿಂದ ಹಣ್ಣಾದ ದ್ರಾಕ್ಷಿ ಗೊಂಚಲುಗಳು ನೆಲಕ್ಕೆ ಬಿದ್ದಿದ್ದರಿಂದ ರೈತರಿಗೆ ಅಪಾರ ಹಾನಿಯಾಗಿದೆ.
ಅಂಡಮಾನ್ ನಿಕೋಬಾರ್ ದ್ವೀಪಗಳಲ್ಲಿ ಭಾರಿ ಮಳೆ
ಅಸನಿ ಚಂಡಮಾರುತದ ಪರಿಣಾಮವಾಗಿ ಅಂಡಮಾನ್ ನಿಕೋಬಾರ್ ನಲ್ಲಿ ಭಾನುವಾರು ಬಿರುಗಾಳಿಯೊಂದಿಗೆ ಭಾರಿ ಮಳೆ ಸುರಿದಿದೆ. ದ್ವೀಪಗಳ ಕರಾವಳಿ ಪ್ರದೇಶಗಳಲ್ಲಿನ ನಾಗರಿಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.