ಅಸಾನಿ ಚಂಡಮಾರುತದ ಪರಿಣಾಮದಿಂದಾಗಿ ರಾಜ್ಯದ 22ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.  ಹೌದು, ಅಸಾನಿ ಚಂಡಮಾರುತ ಪರಿಣಾಮದಿಂದಾಗಿ ರಾಜ್ಯದ ಹಲವೆಡೆ ಭಾರಿ ಗಾಳಿಯ ಸಹಿತಿ ಮಳೆಯಾಗುತ್ತಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣ, ಒಡಿಸ್ಸಾ, ಪುರಯತ್ತ ಚಂಡಮಾರುತದಿಂದ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಶಿವಮೊಗ್ಗ, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಬಳ್ಳಾರಿ, ಗದಗ, ಹಾಸನ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ತುಮಕುರ, ಚಿಕ್ಕಬಳ್ಳಾಪುರ, ಧಾರವಾಡ, ಬೆಳಗಾವಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರಗಿ, ಬೀದರ್ ನಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅಸಾನಿ ಚಂಡಮಾರುತದಿಂದಾಗಿಗಂಟೆಗೆ 120 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯುು ಪಶ್ಚಿಮ ಮತ್ತು ಪಕ್ಕದ ವಾಯುವ್ಯ ಬಂಗಾಳ ಕೊಲ್ಲಿಯನ್ನು ತಲುಪುವ ಸಾಧ್ಯತೆಯಿದೆ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ದುರ್ಬಲಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದಲ್ಲಿ ಮುಂದಿನ ಮೂರರಿಂದ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯುತ್ತದೆ. ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಶಿಸಲಾಗಿದೆ. ಕರ್ನಾಟಕದಲ್ಲಿ ಈಗಾಗಲೇ ಮಳೆ ಅಬ್ಬರ ಶುರುವಾಗಿದೆ.ರಾಜ್ಯಾದ್ಯಂತ ಅಲ್ಲಲ್ಲಿ ಗುಡುಗು ಮಿಂಚಿನೊಂದಿಗೆ ಗುಡುಗು ಸಂಭವಿಸುವ ಸಾಧ್ಯತೆಯಿದೆ ಬಗ್ಗೆ ಮುನ್ಸೂಚನೆ ನೀಡಿದ್ದು, ಸುಮಾರು 10 ಹೆಚ್ಚು ಜಿಲ್ಲೆಗಳಲ್ಲಿ 15 ರಿಂದ 65 ಮಿ.ಮೀ ಮಳೆಯ ಬಗ್ಗೆ ಮುನ್ಸೂಚನೆ ನೀಡಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ಮುಂದಿನ 2-3 ದಿನಗಳಲ್ಲಿಕೊಲ್ಕೊತ್ತಾ, ಹೌರಾ, ಪುರ್ಬಾ, ಮೇದಿನಪುರು, ಉತ್ತರ ಮತ್ತು ದಕ್ಷಿಣ ಪುರಗಣಗಳು ಸೇರಿದಂತೆ ದಕ್ಷಿಣ ಭಾಗದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಆಂಧ್ರ ಕರಾವಳಿಯಲ್ಲಿ ಚಂಡಮಾರುತದಿಂದಾಗಿ ಹೈದ್ರಾಬಾದ್, ವಿಶಾಖಪಟ್ಟಣ, ಜೈಪುರ ಹಾಗೂ ಮುಂಬೈ ಸೇರಿದಂತೆ 10 ವಿಮಾನಗಳನ್ನು ರದ್ದುಗೊಳಿಸಲಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾವ ಕುಸಿತದಿಂದಾಗಿ ರೂಪುಗೊಂಡಿರುವ ಅಸನಿ ಚಂಡಮಾರುತವು ವಾಯುವ್ಯ ದಿಕ್ಕಿನತ್ತ ಚಲಿಸುತ್ತಿದ್ದು, ಇನ್ನೂ ತೀವ್ರಗೊಂಡಿದೆ. ಪಶ್ಚಿಮ ಬಂಗಾಳ, ಒಡಿಸ್ಸಾ ಮತ್ತು ಆಂಧ್ರಪ್ರದೇಶದಲ್ಲಿ ಅಸಾನಿ ಚಂಡಮಾರುತವು ಗಂಡೆಗೆ 10 ಕಿ.ಮೀ ವೇಗದಲ್ಲಿ ಚಲಿಸುತ್ತಿದ್ದು, ವಾಯುವ್ಯ ದಿಕ್ಕಿನಲ್ಲಿ ಚಲಿಸುವ ಸಾಧ್ಯತೆಯಿದೆ.ಉತ್ತರ ಆಂಧ್ರ ಕರಾವಳಿ ಮತ್ತು ಪಕ್ಕದ ಒಡಿಸ್ಸಾ ಕರಾವಳಿಯನ್ನು ತಲುಪುವ ಸಾಧ್ಯತೆಯಿದ್ದು.ತೀರ ಪ್ರದೇಶದಲ್ಲಿ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಪಶ್ಚಿಮಮಧ್ಯ ಮತ್ತು ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ತೀವ್ರಗೊಳ್ಳುವ ಸಾಧ್ಯತೆಯಿರುವುದರಿಂದ ಮೇ 13 ರವರೆಗೆ ಮೀನುಗಾರರು ದಡಕ್ಕೆಹೋಗದಂತೆ ಸೂಚಿಸಲಾಗಿದೆ.  ಮುಂದಿನ ಎರಡು ಮೂರು ದಿನಗಳಲ್ಲಿ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಚದುರಿದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು, ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ.

ನಿಮ್ಮೂರಿನಲ್ಲಿ ಮಳೆಯಾಗುವ ಮಾಹಿತಿ ಬೇಕೆ?

ರೈತರು, ಸಾರ್ವಜನಿಕರು ಈಗ ನಿಮ್ಮೂರಿನಲ್ಲಿ ಮಳೆಯಾಗುವ ಮಾಹಿತಿ ಪಡೆಯಲು ಎಲ್ಲಿಯೂ ಹೋಗಬೇಕಿಲ್ಲ. ಮನೆಯಲ್ಲಿಯೇ ಕುಳಿತು ಮಾಹಿತಿ ಪಡೆಯಬಹುದು. ಹೌದು, ಸರ್ಕಾರವು ಇದಕ್ಕಾಗಿ ವರುಣಮಿತ್ರ ಸಹಾಯವಾಣಿಯನ್ನು ಆರಂಭಿಸಿದೆ. 92433 45433 ಗೆ ಕರೆ ಮಾಡಿದರೆ ಸಾಕು, ನಿಮ್ಮೂರಿನಲ್ಲಿ ಮಳೆಯಾಗುತ್ತೋ ಇಲ್ಲವೋ, ಗಾಳಿಯ ವೇಗ ಸೇರಿದಂತೆ ಇನ್ನಿತರ ಮಾಹಿತಿಯನ್ನು ಪಡೆಯಬಹುದು.

Leave a Reply

Your email address will not be published. Required fields are marked *