ದೇಶಕ್ಕೆ ಮತ್ತೊಂದು ಚಂಡಮಾರುತದ ಭೀತಿ ಆವರಿದಿಸಿದೆ. ಉತ್ತರ ಆಂಧ್ರಪ್ರದೇಶ ಮತ್ತು ಒಡಿಸ್ಸಾ ಕರಾವಳಿ ಪ್ರದೇಶಗಳಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಜವಾದ್ ಚಂಡಮಾರುತ ರೂಪಗೊಳ್ಳುತ್ತಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದೇಶದ ಹಲವು ಭಾಗಗಳಲ್ಲಿ ಈಗಾಗಲೇ ಅತೀವೃಷ್ಟಿವುಂಟಾಗಿ ಅಲ್ಲೋಲ ಕಲ್ಲೋಲ ಉಂಟಾಗಿತ್ತು.ಇದೀಗ ಮತ್ತೆ ಚಂಡಮಾರುತದ ಆತಂಕ ಎದುರಾಗಿದೆ. ಡಿಸೆಂಬರ್ 3 ರಂದು ಸೈಕ್ಲೋನ್ ಬಲಗೊಂಡು ಡಿಸೆಂಬರ್ 4 ರ ವೇಳೆಗೆ ಚಂಡಮಾರುತವು 90 ರಿಂದ 100 ಕಿ.ಮೀ ವೇಗದಲ್ಲಿ ಒಡಿಸ್ಸಾ ಕರಾವಳಿಗೆ ಅಪ್ಪಳಿಸಲಿದೆ. ಇದರಿಂದಾಗಿ ವಾಯುವ್ಯ ಮತ್ತು ಮಧ್ಯ ಭಾರತದ ಅಕ್ಕಪಕ್ಕದ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇದರಿಂದಾಗಿ ದೇಶದ ಹಲವು ಭಾಗಗಳಲ್ಲಿ ವಾತಾವರಣ ಬದಲಾಗಲಿದೆ.
ದೇಶದಲ್ಲಿ ಚಂಡಮಾರುವ ಸಂಬಂಧಿತ ಪರಿಸ್ಥಿತಿ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ಮಹತ್ವದ ಸಭೆ ನಡೆಸಿದರು. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಉಂಟಾಗಿರುವ ಹಿನ್ನೆಲೆಯಲ್ಲಿ ಈ ಸಭೆ ನಡೆಲಾಗಿದ್ದು, ಒಡಿಸ್ಸಾ ರಾಜ್ಯಕ್ಕೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಇದನ್ನು ಓದಿ : ಮೊಬೈಲ್ ನಲ್ಲಿಯೇ ಪಿಎಂ ಕಿಸಾನ್ ಯೋಜನೆಯ ಸ್ಟೇಟಸ್ ಚೆಕ್ ಮಾಡಿ
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಓಡಿಸ್ಸಾ, ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಪ್ರತಿಕೂಲ ಹವಾಮಾನದ ಸಾಧ್ಯತೆಯಿದೆ. ಈ ರಾಜ್ಯದಲ್ಲಿ ಭಾರಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇದರೊಂದಿಗೆ ಮುಂಬೈ ಮತ್ತು ಗುಜರಾತಿನ ವಿವಿಧ ಸ್ಥಳಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ.
ಜವಾದ್ ಚಂಡಮಾರುತ ಪರಿಣಾಮ ಕರ್ನಾಟಕದ 12 ರೈಲುಗಳ ಸೇವೆ ಸ್ಥಗಿತ
ಜವಾದ್ ಚಂಡಮಾರುತ ಅಪ್ಪಳಿಸುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಸಂಚರಿಸುವ 12 ರೈಲುಗಳ ಸೇವೆಯನ್ನು ರದ್ದುಮಾಡುವುದಾಗಿ ನೈರುತ್ಯ ರೈಲ್ವೆ ವಲಯ ಮಾಹಿತಿ ನೀಡಿದೆ. ಜವಾದ್ ಚಂಡಮಾರುತದ ಹಿನ್ನೆಲೆಯಲ್ಲಿ ಶನಿವಾರದವರೆಗೆ 12 ರೈಲುಗಳ ಸೇವೆಗಳನ್ನು ರದ್ದುಪಡಿಸಲಾಗಿದೆ.