ಇಂದಿನಿಂದ 4 ದಿನ ಧಾರವಾಡದಲ್ಲಿ ಕೃಷಿ ಮೇಳ

Written by Ramlinganna

Published on:

Dharwad Krishimela 2024 : ರಾಜ್ಯದ ರೈತರಿಗೆ ಗುಡ್ ನ್ಯೂಸ್. ಕೃಷಿಯಲ್ಲಿ ಆಸಕ್ತಿಯಿರುವ ರೈತರಿಗೆ ನಾಲ್ಕುದಿನಗಳ ಕಾಲ ಹಬ್ಬದ ವಾತಾವರಣ ಇರಲಿದೆ.

ಹೌದು, ಧಾರವಾಡ  ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಹವಾಮಾನ ವೈಪರೀತ್ಯ ನಿರ್ವಹಣೆಗೆ ಕೃಷಿ ತಾಂತ್ರಿಕತೆಗಳು ಎಂಬ ಶೀರ್ಷಿಕೆಯಡಿ ಸೆಪ್ಟೆಂಬರ್ 21 ರಿಂದ 24 ರವರೆಗೆ ನಾಲ್ಕು ದಿನಗಳ ಕಾಲ ಕೃಷಿ ಮೇಳ ಆಯೋಜಿಸಲಾಗಿದೆ ಎಂದು ಕುಲಪತಿ ಡಾ. ಪಿ.ಎಲ್.ಪಾಟೀಲ್ ತಿಳಿಸಿದರು.

ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಕೃಷಿ ಮೇಳ ರೈತರಿಗೆ ಹಬ್ಬದ ವಾತಾವರಣ ನಿರ್ಮಿಸಲಿದೆ. ನಾಲ್ಕು ದಿನಗಳ ಕಾಲ ರಾಜ್ಯದ ಮೂಲೆ ಮೂಲೆಯಿಂದ ಬರುವ ರೈತರು ಕೃಷಿ ಮೇಳದ ಹಬ್ಬವನ್ನುಕಣ್ತುಬಿಕೊಳ್ಳಲಿದೆ. ಈ ಕೃಷಿ  ಮೇಳವನ್ನು ಸೆಪ್ಟೆಂಬರ್ 22 ರಂದು 10.30 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸಲಿದ್ದಾರೆ.  ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಭಾಪತಿ ಬಸವರಾಜ ಹೊರಟ್ಟಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭಾಗವಹಿಸುವರು.ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ ಕೃಷಿ ಪ್ರಕಟಣೆಗಳ ಬಿಡುಗಡೆ ಮಾಡುವರು.

ಈ ಬಾರಿ ಕೃಷಿ ಮೇಳದ ಮೂಲಕ ಹೆಚ್ಚಿನ ಸಂಖ್ಯೆಯ ರೈತರಿಗೆ ಕೃಷಿ ತಂತ್ರಜ್ಞಾನ ತಲುಪಿಸುವ ಉದ್ದೇಶ ಹೊಂದಲಾಗಿದೆ. ಸುಮಾರು 14 ರಿಂದ16 ಲಕ್ಷ ರೈತರು ಭಾಗವಹಿಸುವ ನಿರೀಕ್ಷೆಯಿದ್ದು, ಮೊದಲ ಬಾರಿಗೆ ಕ್ಯೂ ಆರ್ ಕೋಡ್ ಮೂಲಕ ನೋಂದಣಿ ವ್ಯವಸ್ಥೆಯನ್ನು ಮೇಳದಲ್ಲಿ ಕಲ್ಪಿಸಲಾಗಿದೆ ಎಂದು ಹೇಳಿದರು.

ವಸ್ತು ಪ್ರದರ್ಶನ ಮಳಿಗೆ

ಕೃಷಿ ವಸ್ತು ಪ್ರದರ್ಶನದಲ್ಲಿ 150  ಹೈಟೆಕ್ , 214 ಸಾಮಾನ್ಯ, 110 ಯಂತ್ರೋಪಕರಣ, 27 ಟ್ರ್ಯಾಕ್ಟರ್ ಇತ್ಯಾದಿ ಭಾರಿ ಯಂತ್ರೋಪಕರಣಗಳ ಹಾಗೂ 28 ಆಹಾರ ಮಳಿಗೆಗಳು ಈಗಾಗಲೇ ಬುಕ್ ಆಗಿವೆ ಎಂದು ಪಾಟೀಲ್ ತಿಳಿಸಿದರು.

Dharwad Krishimela 2024 ಮೊದಲ ದಿನದ ಕಾರ್ಯಕ್ರಮ

ಮೇಳದ ಮೊದಲ ದಿನ ಬೆಳಗ್ಗೆ 10.30 ಗಂಟೆಗೆ ಕೃಷಿ ಮೇಳ ವೇದಿಕೆಯಲ್ಲಿ ಬೀಜ ಮೇಳ ಉದ್ಘಾಟನೆ ಆಗಲಿದೆ. 2.30 ರಿಂದ ಆಧುನಿಕ ಕೃಷಿ ತಾಂತ್ರಿಕ ಅಳವಡಿಕೆಯಲ್ಲಿ ಯುವ ಪೀಳಿಗೆ ಮತ್ತು ನವೋದ್ಯಮಿಗಳ ಪಾತ್ರ ಕುರಿತ ವಿಚಾರಗೋಷ್ಠಿ, ಮಧ್ಯಾಹ್ನ 3.30 ರಿಂದ ರೈತರಿಂದ ರೈತರಿಗಾಗಿ ಕಾರ್ಯಕ್ರಮ (ಪ್ರಗತಿಪರ ರೈತರ ಅನಿಸಿಕೆಗಳು) ಏರ್ಪಡಿಸಲಾಗಿದೆ.

ಈ ಬಾರಿ ಮಳೆದಲ್ಲಿಆಕರ್ಷಣೆ

ಹವಾಮಾನ ವೈಪರೀತ್ಯ ನಿರ್ವಹಣೆಯಲ್ಲಿ ಕೈಗೊಳ್ಳಬೇಕಾದ ಬೆಳೆ ಪದ್ಧತಿ ಹಾಗೂ ಕೃಷಿ ತಾಂತ್ರಿಕತೆ, ಸಮಗ್ರ ಬೆಳೆ ನಿರ್ವಹಣೆ, ಜೈವಿಕ ಗೊಬ್ಬರ ಹಾಗೂ ಪೀಡೆ ನಾಶಕಗಳು, ಎಣ್ಣೆಕಾಳು, ದ್ವಿದಳ ಧಾನ್ಯ ಮತ್ತು ಹಿಂಗಾರು ಬೆಳೆಗಳ ತಾಂತ್ರಿಕತೆ, ಮಳೆ ನೀರು ಕೊಯ್ಲು ಹಾಗೂ ಅಂತರ್ಜಲ ಮರುಪೂರಣ, ನೈಸರ್ಗಿಕ ಕೃಷಿ ಸಾವಯವ ಕೃಷಿ ಮತ್ತುಮಣ್ಣಿನ ಫಲವತ್ತತೆ ಸಂರಕ್ಷಣೆಗಳಾಗಿವೆ.

ಇದನ್ನೂ ಓದಿ : ಆಧಾರ್ ಲಿಂಕ್ ಆಗದ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಅದೇ ರೀತಿ ಕಿಸಾನ್ ಡ್ರೋಣ್ ಪ್ರದರ್ಶನ, ಪಶು ಸಂಗೋಪನೆ ಹಾಗೂ ಜಾನುವಾರುಗಳ ಪ್ರದರ್ಶನ ಇರಲಿದೆ ಎಂದರು.

ಸೆಪ್ಟೆಂಬರ್ 22 ರಂದು ಏನೇನಿರಲಿದೆ?

ಸೆಪ್ಟೆಂಬರ್ 22 ರಂದು ಕೃಷಿ ಮೇಳ ಮುಖ್ಯ ವೇದಿಕೆಯಲ್ಲಿ ಬೆಳಗ್ಗೆ 10.30 ರಿಂದ ಕೃಷಿ ಮೇಳ 2024 ಉದ್ಘಾಟನೆ ಮತ್ತು ಪ್ರಶಸ್ತಿ ಪ್ರದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸುವರು. ಮಧ್ಯಾಹ್ನ 2.30 ಗಂಟೆಗೆ ಹವಾಮಾನ ವೈಪರೀತ್ಯ ನಿರ್ವಹಣೆಯಲ್ಲಿ ಸಾವಯವ ಹಾಗೂ ನೈಸರ್ಗಿಕ ಕೃಷಿಯಪಾತ್ರ ಕುರಿತು ವಿಚಾರಗೋಷ್ಠಿ, ಮಧ್ಯಾಹ್ನ 3.30 ಗಂಟೆಗೆ ರೈತರಿಂದ ರೈತರಿಗಾಗಿ ಕಾರ್ಯಕ್ರಮ (ಪ್ರಗತಿಪರ ರೈತರ ಅನಿಸಿಕೆ ಏರ್ಪಡಿಸಲಾಗಿದೆ ಎಂದರು.

ಸೆಪ್ಟೆಂಬರ್ 23 ರಂದು ಯಾವ ಯಾವ ಕಾರ್ಯಕ್ರಮ ನಡೆಯಲಿದೆ?

ಸೆಪ್ಟೆಂಬರ್ 23 ರಂದು ಬೆಳಗ್ಗೆ 10 ಗಂಟೆಗೆ ಪರಿಕರಗಳ ಸಾಮರ್ಥ್ಯ ಹೆಚ್ಚಿಸಲು ಮತ್ತು ಉತ್ಪನ್ನಗಳ ಮೌಲ್ಯ ವರ್ಧನೆ ವೃದ್ಧಿಸಲು ದ್ವಿತೀಯ ಕೃಷಿ, ಬೆಳಗ್ಗೆ 11.30 ಗಂಟೆಗೆ ಬರ ನಿರ್ವಹಣೆಯಲ್ಲಿ ಮಣ್ಣು ಮತ್ತು ನೀರಿನ ಸಂರಕ್ಷಣಾ ಕ್ರಮಗಳು ಹಾಗೂ ಮಧ್ಯಾಹ್ನ 2.30 ಗಂಟೆಗೆ ಹವಾಮಾನ ವೈಪರೀತ್ಯ ನಿರ್ವಹಣೆಯಲ್ಲಿ ಕೈಗೊಳ್ಳಬೇಕಾದ ಬೆಳೆ ಪದ್ಧತಿಗಳು ಹಾಗೂ ಕೃಷಿ ತಾಂತ್ರಿಕತೆಗಳು ಕುರಿತು ವಿಚಾರಗೋಷ್ಠಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಮಧ್ಯಾಹ್ನ 3.30 ಗಂಟೆಗೆ ರೈತರಿಂದ ರೈತರಿಗಾಗಿ ಕಾರ್ಯಕ್ರಮ (ಪ್ರಗತಿಪರ ರೈತರ ಅನಿಸಿಕೆಗಳು) ಜರುಗುವುದು ಎಂದು ಕುಲಪತಿ ಮಾಹಿತಿ ನೀಡಿದರು.

ಸೆಪ್ಟೆಂಬರ್ 23 ರಂದು ಯಾವ ಯಾವ ಕಾರ್ಯಕ್ರಮ ನಡೆಯಲಿದೆ?

ಸೆಪ್ಟೆಂಬರ್ 24 ರಂದು ಬೆಳಗ್ಗೆ 10.30 ಗಂಟೆಗೆ ಎಣ್ಣೆಕಾಳುಹಾಗೂ ದ್ವಿದಳ ಧಾನ್ಯ ಉತ್ಪಾದನೆ ಹೆಚ್ಚಿಸಲು ಅಗತ್ಯ ಕೃಷಿ ತಾಂತ್ರಿಕತೆಗಳು ಚರ್ಚಾಗೋಷ್ಠಿ, 11.30 ಗಂಟೆಗೆ ಕನ್ನಡ ಕೃಷಿ ಗೋಷ್ಠಿ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 2.30 ಗಂಟೆಗೆ ರೈತರಿಂದ ರೈತರಿಗಾಗಿ ಕಾರ್ಯಕ್ರಮ ನಡೆಯಲಿದೆ. ಸಂಜೆ4.30 ಗಂಟೆಗೆ ಕೃಷಿ ಮೇಳ ಸಮಾರೋಪ ಸಮಾರಂಭ ನಡೆಯಲಿದೆ.

Leave a Comment