Do this to protect from thunderstorms : ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಕೆಳಕಂಡಂತೆ ಕೆಲವು ಸಲಹೆ ಸೂಚನೆಗಳನ್ನು ನೀಡಿದೆ.
ಗುಡುಗು ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಸಾರ್ವಜನಿಕರು ಕೆಳಕಂಡ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಕಂದಾಯ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು-ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ.
Do this to protect from thunderstorms ಗುಡುಗು ಸಿಡಿಲನ ಸಂದರ್ಭದಲ್ಲಿ ರೈತರೇನು ಮಾಡಬೇಕು?
ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡುವವರು, ಜಾನುವಾರು ಮೇಯಿಸುವವರು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸುವವರು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗದಿರುವುದು ಒಳ್ಳೆಯದು. ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ. ಕೆರೆ ಮತ್ತು ನದಿಗಳು ಹಾಗೂ ಇನ್ನಿತರೆ ನೀರಿನ ಮೂಲಗಳಿಂದ ತಕ್ಷಣವೇ ದೂರವಿರಬೇಕು.
ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು, ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರಬೇಕು. ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನ ಕಿಟಿಕಿಗಳನ್ನು ಮುಚ್ಚಿ ವಾಹನದ ಒಳಗಿ ಇರಬೇಕು. ಮರಗಳು ಮತ್ತು ವಿದ್ಯುತ್ ಲೈನ್ ಗಳಿಂದ ದೂರದಲ್ಲಿ ತಮ್ಮ ವಾಹನ ನಿಲುಗಡೆ ಮಾಡಬೇಕು. ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ ಅಪಾಯವನ್ನುಕಡಿಮೆ ಮಾಡಲು ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳಬೇಕು. ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಾಕಷ್ಟು ಸಮಯವಿಲ್ಲದಿದ್ದರೆ ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ ಕಿವಿಗಳನ್ನು ಮುಚ್ಚಿಕೊಳ್ಳುವುದು.
ವಿದ್ಯುತ್ ಟೆಲಿಫೋನ್ ಕಂಬ ಅಥವಾ ಮರಗಳ ಕೆಳಗೆ ಆಶ್ರಯ ಪಡೆಯಬಾರದು
ಮಿಂಚನ್ನು ಆಕರ್ಷಿಸುವಂತಹ ವಿದ್ಯುತ್ ಅಥವಾ ಟೆಲಿಫೋನ್ ಕಂಬಗಳು ಅಥವಾ ಮರಗಳ ಕೆಳಗೆ ಆಶ್ರಯ ಪಡೆಯಬಾರದು. ಅರಣ್ಯಪ್ರದೇಶದಲ್ಲಿದ್ದರೆ ಸಣ್ಣ ಮರಗಳ ಕೆಳಗೆ ಆಶ್ರಯ ಪಡೆಯಬೇಕು. ಲೋಹದ ವಸ್ತುಗಳನ್ನು ಬಳಸಬಾರದು. ಮತ್ತು ಬೈಕ್ ಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು, ತಂತಿ ಬೇಲಿ ಹಾಗೂ ಯಂತ್ರಗಳು ಇತ್ಯಾದಿಗಳಿಂದ ದೂರವಿರಬೇಕು.
ಮೊಬೈಲ್ ಫೋನ್ ಹಾಗೂ ದೂರವಾಣಿ ಬಳಸಬಾರದು
ಸಿಡಿಲು ಸಂದರ್ಭದಲ್ಲಿ ಮೊಬೈಲ್ ಫೋನ್ ಹಾಗೂ ವಿದ್ಯುತ್ ಸಂಪರ್ಕ ಹೊಂದಿರುವ ದೂರವಾಣಿಯನ್ನು ಬಳಸಬಾರದು. ಕಬ್ಬಿಣದ ಸರಳುಗಳಿಂದ ಕೂಡಿದ ಛತ್ರಿಗಳನ್ನು ಬಳಸಬಾರದು. ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ ಬೆಂಕಿ ಮತ್ತು ವಿದ್ಯುತ್ ಶಕ್ತಿ ಸಂಪರ್ಕದಿಂದ ದೂರವಿರಬೇಕು. ಮಕ್ಕಳು, ವಯೋವೃದ್ಧರು, ಜಾನುವಾರುಗಳನ್ನು ಹಾಗೂ ಸಾಕು ಪ್ರಾಣಿಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸಬೇಕು.
ಇದನ್ನೂ ಓದಿ : ನಿಮ್ಮ ಜಮೀನಿನ ಅಕ್ಕಪಕ್ಕ ಯಾರಿಗೆಷ್ಟು ಜಮೀನಿದೆ? ಇಲ್ಲೇ ಚೆಕ್ ಮಾಡಿ
ಸಿಡಿಲು ಸಂದರ್ಭದಲ್ಲಿ ಕಟ್ಟಡದ ಕೊಳಾಯಿ ಹಾಗೂ ಲೋಹದ ಕೊಳವೆಗಳ ಮೂಲಕ ವಿದ್ಯುತ್ ಹರಿಯುವ ಸಾಧ್ಯತೆ ಇರುವುದರಿಂದ ಸಿಡಿಲು ಉಂಟಾಗುವ ಸಂದರ್ಭದಲ್ಲಿ ಸ್ನಾನ ಅಥವಾ ಶವರ್ ತೆಗೆದುಕೊಳ್ಳಬಾರದು.
ಗುಡುಗು ಸಿಡಿಲಿನ ಸಮಯದಲ್ಲಿ ಮೋಟಾರು ಸೈಕಲ್ ಅಥವಾ ಇನ್ನಿತರೆ ಯಾವುದೇ ತೆರೆದ ವಾಹನಗಳ ಸಂಚಾರವನ್ನು ಮಾಡಬಾರದು. ಆಟದ ಮೈದಾನ ಉದ್ಯಾನವನಗಳು, ಈಜುಕೊಳ ಮತ್ತು ಕಡಲ ತೀರಗಳಿಗೆ ಹೋಗುವುದನ್ನು ತಪ್ಪಿಸಬೇಕು.
ಗುಡುಗು ಸಿಡಿಲಿನ ಸಂದರ್ಭದಲ್ಲಿ ವಿದ್ಯುತ್ ಸಂಪರ್ಕ ಹೊಂದಿರುವಂತಹ ವಿದ್ಯುತ್ ಎಲೆಕ್ಟ್ರಿಕಲ್ ಉಪಕರಣಗಳಾದ ಕಂಪ್ಯೂಟರ್, ಲ್ಯಾಪ್ ಟಾಪ್, ವೀಡಿಯೋ ಗೇಮ್, ಸಾಧನಗಳು, ಮೊಬೈಲ್ ಫೋನ್, ವಾಷಿಂಗ್ ಮಷಿನ್ ಹಾಗೂ ಇತರ ವಿದ್ಯುತ್ ಉಪಕರಣಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಬೇಕು. ಬಾಗಿಲುಗಳು, ಕಿಟಕಿಗಳು, ಮಂಟಪಗಳು, ಸ್ಟವ್ ಗಳು, ಬಾತ್ ಟಬ್ ಗಳು ಅಥವಾ ಇತರೆ ವಿದ್ಯುತ್ ಉಪಕರಣಗಳಿಂದ ದೂರವಿರಬೇಕು.
ಸಿಡಿಲು ಮಿಂಚು ಬಡಿದಾಗ ಏನು ಮಾಡಬೇಕು?
ಸಿಡಿಲು ಮಿಂಚು ಬಡಿದ ಸಮಯದಲ್ಲಿ ಪ್ರಾಥಮಿಕವಾಗಿ 112 ಅಥವಾ 108 ಸಹಾಯವಾಣಿಗೆ ಕರೆ ಮಾಡಬೇಕು.ಸಿಡಿಲು ಹೊಡೆತಕ್ಕೆ ಒಳಗಾದ ವ್ಯಕ್ತಿಯ ಉಳಿಸಬಹುದು. ಹೌದು, ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯ ದೇಹದಲ್ಲಿ ಯಾವುದು ವಿದ್ಯುತ್ ಕಣಗಳು ಸಂಚಾರವಾಗುವುದಿಲ್ಲ. ಆದ್ದರಿಂದ ಸಿಡಿಲನ ಹೊಡೆತಕ್ಕೆ ಒಳಗಾದ ವ್ಯಕ್ತಿಯ ಉಸಿರಾಟ ಹಾಗೂ ಎದೆ ಬಡಿತವನ್ನು ಪರೀಕ್ಷಿಸಬೇಕು. ವ್ಯಕ್ತಿಯ ದವಡೆಗೆ ನೇರವಾಗಿ ಕುತ್ತಿಗೆಯಲ್ಲಿರುವ ರಕ್ತನಾಳವನ್ನು ಪರೀಕ್ಷಿಸುವುದರಿಂದ ಸುಲಭವಾಗಿ ನಾಡಿ ಮಿಡಿತವನ್ನು ತಿಳಿಯಹಬಹುದು.