Do for drought amount : ಬರ ಪರಿಹಾರ ಹಣ ಜಮೆಯಾಗಬೇಕಾದರೆ ರೈತರು ಕೂಡಲೇ ಫ್ರೂಟ್ಸ್ ತಂತ್ರಾಂಶದಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಭಬೇಕು. ಇಲ್ಲದಿದ್ದರೆ ಬರ ಪರಿಹಾರ ಹಣ ಜಮೆಯಾಗುವ ಸಾಧ್ಯತೆ ಕಡಿಮೆಯಿದೆ.
ಬರ ಪರಿಹಾರ ಹಣ ವಿತರಣೆ ವೇಳೆ ಯಾವುದೇ ದುರುಪಯೋಗವಾಗದಂತೆ ತಡೆಯಲು ಈ ಬಾರಿ ಫ್ರೂಟ್ಸ್ ತಂತ್ರಾಂಶದ ಮೂಲಕ ರೈತರಿಗೆ ಪರಿಹಾರ ಒದಗಿಸಲು ತೀರ್ಮಾನಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.
ಹೌದು, ಅವರು ಶುಕ್ರವಾರ ವಿಧಾನಸೌಧದ ಬರ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಉಂಟಾಗಿರುವ ಬರ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳಜಿಲ್ಲಾಧಿಕಾರಿಗಳಂದಿಗೆ ಸಭೆ ನಡೆಸಿದ್ದು, ಹಿಂದೆಬರ ಪರಿಹಾರ ಹಣ ನೀಡುವ ಸಂದರ್ಭದಲ್ಲಿ ಸಾಕಷ್ಟು ದುರುಪಯೋಗವಾಗಿದೆ. ಹೀಗಾಗಿ ಈ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದರು.
ಜಿಲ್ಲಾಧಿಕಾರಿಗಳು ಮತ್ತು ಸರ್ವೆ ಇಲಾಖೆಯ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ಹಿಂದೆ ಬರ ಪರಿಹಾರ ಹಣ ರೈತರಿಗೆ ಸಿಗದೆ ಬೇರೆಯವರ ಪಾಲಾಗಿದೆ. ಇಂತಹ ಅಕ್ರಮಗಳು ಮರುಕಳಿಸದಂತೆ ಎಚ್ಚರವಹಿಸಲುಪ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿ ಕೃಷಿ ಇಲಾಖೆಯ ರೈತರ ಡಾಟಾ ಬೇಸ್ ಮೂಲಕ ಬರ ಪರಿಹಾರ ನೀಡಲು ತೀರ್ಮಾನಿಸಲಾಗಿದೆ. ಅಲ್ಲದೆ ಫ್ರೂಟ್ಸ್ ಡೇಟಾ ಬೇಸ್ ನಲ್ಲಿ ಐಡಿ ಕ್ರಿಯೇಟ್ ಮಾಡದ ರೈತರಿಗೆ ಐಡಿ ಕ್ರಿಯೇಟ್ ಮಾಡಿಕೊಳ್ಳಲು ಜಾಗೃತಿ ಅಭಿಯಾನ ನಡೆಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.ಜಮೀನು ಹಾಗೂ ಜಮೀನಿನ ಬೆಳೆ ವಿಸ್ತೀರಣೆಸೇರಿದಂತೆ ಎಲ್ಲವನ್ನೂ ಒದಗಿಸಲು ತಿಂಗಳಾಂತ್ಯದವರೆಗೆ (ನವೆಂಬರ್30) ಅವಕಾಶ ನೀಡಲಾಗುವುದು. ಬಳಿಕ ಪಾರದರ್ಶಕವಾಗಿ ಪರಿಹಾರವನ್ನು ವಿತರಿಸಲಾಗುವುದು ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ : ನಿಮ್ಮ ಜಮೀನು ಯಾರ ಹೆಸರಿನೊಂದಿಗೆ ಎಷ್ಟು ಎಕರೆ ಜಂಟಿಯಾಗಿದೆ? ಇಲ್ಲೇ ಚೆಕ್ ಮಾಡಿ
ರಾಜ್ಯದಲ್ಲಿ ಬರ ನಿರ್ವಹಣೆಗೆ ರಾಜ್ಯ ಸರ್ಕಾರೀ ಈಗಾಗಲೇ 800 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಇದರಡಿ ರೈತರುಹಾಗೂ ಬರ ಪೀಡಿತರಿಗೆ ಅಗತ್ಯ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಬೆಳೆ ಪರಿಹಾರ ಪಡೆಯಲು ಫ್ರೂಟ್ಸ್ ಐಡಿ ಕಡ್ಡಾಯ
ಬರ ಪೀಡಿತ ಪ್ರದೇಶವೆಂದು ಸರ್ಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ತುರುವೇಕೆರ ತಾಲೂಕಿನ ರೈತರು ಪರಿಹಾರದ ಹಣವನ್ನು ಪಡೆಯಲು ಕಡ್ಡಾಯವಾಗಿ ಎಫ್ಐಡಿ ಮಾಡಿಸಿಕೊಳ್ಳಬೇಕೆಂದು ತಾಲೂಕು ಕೃಷಿ ಸಹಾಯಕ ನಿರ್ದೇಶಕಿ ಬಿ. ಪೂಜಾ ತಾಲೂಕಿನ ರೈತಾಪಿಗಳಲ್ಲಿ ಮನವಿ ಮಾಡಿದ್ದಾರೆ.
ತಾಲೂಕಿನಲ್ಲಿ ಒಟ್ಟು 223726 ರೈತರ ಸರ್ವೆ ನಂಬರ್ ಇವೆ. ಇದುವರೆಗೂ 128328 ಸರ್ವೆ ನಂಬರ್ ಗಳನ್ನು ಮಾತ್ರ ಸೇರ್ಪಡೆಗೊಳಿಸಿ ಎಫ್ಐಡಿ ಗಳನ್ನು ಮಾಡಿಸಲಾಗಿದೆ. ಇನ್ನುಳಿದ 95298 ಸರ್ವೆ ನಂಬರ್ ಗಳನ್ನು ಫ್ರೂಟ್ಸ್ ತಂತ್ರಾಂಶಕ್ಕೆ ಸೇರ್ಪಡೆಗೊಳಿಸಬೇಕಿದೆ.
ಮುಂಗಾರು ಹಂಗಾಮಿನ ಬರ ಪರಿಹಾರ ಪಡೆಯಲು ಪಡೆದುಕೊಳ್ಳಲು ರೈತರು ಕೂಡಲೇ ಜಮೀನಿನ ಸರ್ವೆ ನಂಬರ್ ನ್ನು ಎಫ್ಐಡಿ ಗೆ ಸೇರ್ಪಡೆಗೊಳಿಸಬೇಕು. ಇದುವರೆಗೂ ಎಫ್ಐಡಿ ಮಾಡಿಸದ ರೈತರು ತಮ್ಮ ಜಮೀನಿಗೆ ಸಂಬಂಧಿಸಿದ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ನ ಝರಾಕ್ಸ್ ಪ್ರತಿಗಳೊಂದಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಎಫ್ಐಡಿಗಳನ್ನು ಮಾಡಿಸಿಕೊಳ್ಳಬೇಕೆಂದು ಕೃಷಿ ಸಹಾಯಕ ನಿರ್ದೇಶಕಿ ಬಿ. ಪೂಜಾ ತಿಳಿಸಿದ್ದಾರೆ.
Do for drought amount ಬರ ಪರಿಹಾರ ಸ್ಟೇಟಸ್ ಮೊಬೈಲ್ ನಲ್ಲೇ ಚೆಕ್ ಮಾಡಿ
ರೈತರು ಪ್ರಸಕ್ತ ಸಾಲಿನ ಪರ ಪರಿಹಾರ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://landrecords.karnataka.gov.in/PariharaPayment/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ಆಧಾರ್ ಸಂಖ್ಯೆ ಆಯ್ಕೆ ಮಾಡಿಕೊಳ್ಳಬೇಕು. ಕಾಲಮಿಟಿ ಟೈಪ್ ನಲ್ಲಿ Drought ಆಯ್ಕೆ ಮಾಡಿಕೊಳ್ಳಬೇಕು. ಇಯರ್ ನಲ್ಲಿ 2023 ಆಯ್ಕೆ ಮಾಡಿಕೊಂಡು ಆಧಾರ್ ಸಂಖ್ಯೆ, ಕ್ಯಾಪ್ಚ್ಯಾಕೋಡ್ ಹಾಕಿ ವಿವರಗಳನ್ನು ಪಡೆಯಲು ಮೇಲೆ ಕ್ಲಿಕ್ ಮಾಡಿ ಜಮೆಯಾಗಿರುವ ಸ್ಟೇಟಸ್ ನ್ನು ಚೆಕ್ ಮಾಡಿಕೊಳ್ಳಬಹುದು.