ರಾಜ್ಯ ಸರ್ಕಾರದ ಪಿಎಂ ಕಿಸಾನ್ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

Written by By: janajagran

Updated on:

State PM kisan status ರೈತರ ಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಪಿಎಂ ಕಿಸಾನ್ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯಡಿಯಲ್ಲಿ ರೈತರಿಗೆ ಪ್ರತಿ ವರ್ಶ 6000 ರೂಪಾಯಿ ನಾಲ್ಕು ತಿಂಗಳಿಗೊಮ್ಮೆ 2 ಸಾವಿರ ರೂಪಾಯಿ ರೈತರ ಖಾತೆಗೆ ಜಮೆ ಮಾಡಲಾಗುತ್ತದೆ. ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಇಲ್ಲಿಯವರೆಗೆ ಹತ್ತು ಕಂತಿನ ಹಣ ಜಮೆ ಮಾಡಲಾಗಿದೆ.

ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯೊಂದಿಗೆ ರಾಜ್ಯ ಸರ್ಕಾರವು ಪ್ರತಿ ವರ್ಷ 4 ಸಾವಿರ ರೂಪಾಯಿ ವರ್ಶಕ್ಕೆ ಎರಡು ಬಾರಿ ರೈತರ ಖಾತೆಗೆ ಜಮೆ ಮಾಡಲು ಈ ಯೋಜನೆಯನ್ನು ಆರಂಭಿಸಿದೆ. ರಾಜ್ಯ ಸರ್ಕಾರದ ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಈಗಾಗಲೇ ಎರಡು ಬಾರಿ ರೈತರ ಖಾತೆಗೆ ಹಣ ಜಮೆ ಮಾಡಲಾಗಿದೆ. ಆದರೆ ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಫಲಾನುಭವಿಯಾದ ರೈತರೆಲ್ಲರೂ ರಾಜ್ಯ ಸರ್ಕಾರದ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಯಾಗುವುದಿಲ್ಲ.

ರಾಜ್ಯ ಸರ್ಕಾರದಿಂದ ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಸೌಲಭ್ಯ ಪಡೆಯಬೇಕಾದರೆ ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ರೈತರು ತಮ್ಮ ಹೆಸರು ನೋಂದಾಯಿಸಿರಬೇಕು.  ಫ್ರೂಟ್ಸ್ ತಂತ್ರಾಂಶದಲ್ಲಿ ರೈತರು ತಮ್ಮ ಹೆಸರು ನೋಂದಾಯಿಸಿದರೆ ಮಾತ್ರ ರಾಜ್ಯ ಸರ್ಕಾರದ ಪಿಎಂ ಕಿಸಾನ್ ಯೋಜನೆಯ 4 ಸಾವಿರ ರೂಪಾಯಿ ಸೌಲಭ್ಯ ಪಡೆಯುತ್ತಾರೆ.

ಎಂ ಕಿಸಾನ್ ರಾಜ್ಯ ಸರ್ಕಾರದ 4 ಸಾವಿರ ರೂಪಾಯಿ ಸೌಲಭ್ಯ ಪಡೆಯುವ ಫಲಾನುಭವಿಗಳ  ಪಟ್ಟಿಯಲ್ಲಿ ನಿಮ್ಮ ಹೆಸರಿರುವುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಇದಕ್ಕಾಗಿ ರೈತರು ಎಲ್ಲಿಯೂ ಹೋಗಬೇಕಿಲ್ಲ.ಯಾರ ಸಹಾಯವೂ ಬೇಕಿಲ್ಲ. ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

 State PM kisan status ಪಿಎಂ ಕಿಸಾನ್ ಪಟ್ಟಿ

ರೈತರು ತಮ್ಮ ಹೆಸರು ರಾಜ್ಯ ಸರ್ಕಾರದ ಪಿಎಂ ಕಿಸಾನ್ ಪಟ್ಟಿಯಲ್ಲಿರುವುದನ್ನು ಚೆಕ್ ಮಾಡಲು https://fruitspmk.karnataka.gov.in/MISReport/FarmerDeclarationReport.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಫ್ರೂಟ್ಸ್ ಪಿಎಂ ಕಿಸಾನ್ ಯೋಜನೆಯ ಪೇಜ್ ಓಪನ್ ಆಗುತ್ತದೆ. ಅಲ್ಲಿ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ ಆಯ್ಕೆ ಮಾಡಿಕೊಂಡು ವೀಕ್ಷಿಸು ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮೂರಿನ ರೈತರ ಹೆಸರು ಅಲ್ಲಿ ಕಾಣುತ್ತದೆ. ನಿಮ್ಮ ಹೆಸರು ಪಿಎಂ ಕಿಸಾನ್ ರಾಜ್ಯ ಸರ್ಕಾರದ ಫಲಾನುಭವಿ ಪಟ್ಟಿಯಲ್ಲಿಇದೆಯೋ ಇಲ್ಲವೋ ಎಂಬುದನ್ನು ಸುಲಭವಾಗಿ ಚೆಕ್ ಮಾಡಬಹುದು.

ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ಸ್ವತಃ ಅವರೇ ನೋಂದಾಯಿಸಿಕೊಳ್ಳಬಹುದು. ಅಥವಾ ಹತ್ತಿರದ ರೈತ ಸಂಪರ್ಕ ಕೇಂದ್ರದಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು.

ಒಂದು ವೇಳೆ ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ತಮ್ಮ ಹೆಸರು ನೋಂದಾಯಿಸದಿದ್ದರೆ

https://www.fruits.karnataka.gov.in/OnlineUserLogin.aspx

ಈ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಫ್ರೂಟ್ಸ್ ತಂತ್ರಾಂಶದ ವೆಬ್ ಪೇಜ್ ಓಪನ್ ಆಗುತ್ತದೆ. ಅಲ್ಲಿ ರೈತರು ಸಿಟಿಜನ್ ರೆಜಿಸ್ಟ್ರೇನ್ ಮೇಲೆ ಕ್ಲಿಕ್ ಮಾಡಬೇಕು ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ ಅಲ್ಲಿ ಕೇಳಲಾದ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು.

ರಾಜ್ಯದ ರೈತರಿಗೆ ಪಿಎಂ ಕಿಸಾನ್ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಪ್ರತ್ಯೇಕವಾಗಿ ಹಣ ರೈತರ ಖಾತೆಗೆ ಜಮೆಯಾಗುತ್ತದೆ ಎಂಬುದು ಗೊತ್ತಿರುವುದಿಲ್ಲ. ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯೇ ಬೇರೆ ರಾಜ್ಯ ಸರ್ಕಾರದ ಪಿಎಂ ಕಿಸಾನ್ ಯೋಜನೆಯೇ ಬೇರೆ. ಕೇಂದ್ರ ಸರ್ಕಾರವು ವಾರ್ಷಿಕವಾಗಿ 6 ಸಾವಿರ ರೂಪಾಯಿ ಜಮೆ ಮಾಡಿದರೆ ರಾಜ್ಯ ಸರ್ಕಾರವು ವಾರ್ಷಿಕವಾಗಿ 4 ಸಾವಿರ ರೂಪಾಯಿ ಜಮೆ ಮಾಡುತ್ತದೆ. ಒಂದು ವರ್ಷದಲ್ಲಿ ರೈತರಿಗೆ ಒಟ್ಟು 10 ಸಾವಿರ ರೂಪಾಯಿ ಕೇಂದ್ರ ಮತ್ತುರಾಜ್ಯ ಸರ್ಕಾರದಿಂದ ಜಮೆ ಮಾಡಲಾಗುತ್ತದೆ.

Leave a Comment