ಬೆಳೆ ಸಮೀಕ್ಷೆ ಮಾಡದಿದ್ದರೆ ರೈತರು ಸರ್ಕಾರದ ಈ ಸೌಲಭ್ಯಗಳಿಂದ ವಂಚಿತ

Written by By: janajagran

Updated on:

ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಯ ಮಾಹಿತಿಯನ್ನು ಜಿಪಿಎಸ್ ಆಧಾರಿತ ಬೆಳೆ ಸಮೀಕ್ಷೆಯನ್ನು ಮಾಡಿದರೆ ಸರ್ಕಾರದ ಹಲವಾರು ಸೌಲಭ್ಯ ಸಿಗುತ್ತದೆ.  ಹೌದು ಬೇಸಿಗೆ ಹಂಗಾಮಿನ ಬೆಳೆಗಳನ್ನು ರೈತರು ತಮ್ಮ ಜಮೀನಿನಲ್ಲಿ ಸ್ವತಃ ಸಮೀಕ್ಷೆ ಮಾಡುವ ಸೌಲಭ್ಯವನ್ನು ಸರ್ಕಾರ ರೈತರಿಗೆ ಒದಗಿಸಿದೆ.

ಹೌದು, ರೈತರು ಬೆಳೆ ಸಮೀಕ್ಷೆ ಮಾಡಿದ ನಂತರ ಬೆಂಬಲ ಬೆಲೆಯಲ್ಲಿ ಕೃಷಿ ಉತ್ಪನ್ನಗಳನ್ನು ಖರೀದಿ ಮಾಡಲು,  ಬೆಳೆ ವಿಮೆ ಸೌಲಭ್ಯ ಪಡೆಯಲು, ಪ್ರಕೃತಿ ವಿಕೋಪದಿಂದಾಗಿ ಬೆಳೆ ಹಾನಿಯಾದರೆ ಪರಿಹಾರ ಪಡೆಯುವ ಸಮಯದಲ್ಲಿ ಬೆಳೆ ಸಮೀಕ್ಷೆ ಉಪಯೋಗವಾಗುತ್ತದೆ.

2021-22ನೇ ಸಾಲಿನ ಬೇಸಿಗೆ ಹಂಗಾಮಿನ ಬೆಳೆ ಸಮೀಕ್ಷೆಯನ್ನು ರೈತರು ತಮ್ಮ ಜಮೀನುಗಳ ಸರ್ವೆ ನಂಬರ್ ವಾರು ತಾವು ಬೆಳೆದ ಕೃಷಿ ಬೆಳೆಗಳ ಹಾಗೂ ತಮ್ಮ ಜಮೀನುನಲ್ಲಿರುವ ಬಹು ವಾರ್ಷಿಕ ತೋಟಗಾರಿಕೆ, ಅರಣ್ಯ ಇತರೆ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಅಪ್ಲೋಡ್ ಮಾಡಬಹುದು.

ರೈತರು ಬೆಳೆ ಸಮೀಕ್ಷೆ ಮೊಬೈಲ್ ನಲ್ಲಿ ಮಾಡುವುದು ಹೇಗೆ?

ರೈತರು ಬೇಸಿಗೆ ಹಂಗಾಮಿ ಬೆಳೆ ಸಮೀಕ್ಷೆಯನ್ನುಮಾಡಲು ಈ

https://play.google.com/store/apps/details?id=com.csk.Summerfarmer21_22.cropsurvey

ಲಿಂಕ್  ಮೇಲೆ ಕ್ಲಿಕ್ ಮಾಡಿ ಆ್ಯಪ್ ಇನ್ಸ್ ಸ್ಟಾಲ್  ಮಾಡಿಕೊಳ್ಳಬಹುದು. ಅಥವಾ ತಮ್ಮ ಮೊಬೈಲ್ ನ ಗೂಗಲೇ ಪ್ಲೇ ಸ್ಟೋರ್ ನಲ್ಲಿ Farmer Summer crop 21-22 (ಬೇಸಿಗೆ ರೈತರ ಬೆಳೆ ಸಮೀಕ್ಷೆ ಆ್ಯಪ್ 2021-22)  ಎಂದು ಟೈಪ್ ಮಾಡಿ ಇನ್ಸ್ ಟಾಲ್  ಮಾಡಿಕೊಳ್ಳಬಹುದು.

App install ಆದ ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಮೇಲೆ Allow ಬೇಸಿಗೆ ರೈತರ ಬೆಳೆ ಸಮೀಕ್ಷೆಗೆ ಎಂಬ ಮೆಸೆಜ್ ಕಾಣುತ್ತದೆ. ಅಲ್ಲಿ Allow  ಮೇಲೆ ಕ್ಲಿಕ್ ಮಾಡಬೇಕು. ನಂತರ  ರೈತರು ಆರ್ಥಿಕ ವರ್ಷ 2021-22 ಹಾಗೂ ಋತು ಬೇಸಿಗೆ ಎಂದು ಆಯ್ಕೆ ಮಾಡಿಕೊಳ್ಳಬೇಕು. ನಂತರ ಸರಿ ಮೇಲೆ ಕ್ಲಿಕ್ ಮಾಡಬೇಕು.  ಆಮೇಲೆ While using the app or only this time ಮೇಲೆ ಕ್ಲಿಕ್ ಮಾಡಬೇಕು.  ಅಲ್ಲಿ ಸಮೀಕ್ಷೆ ಕೈಗೊಳ್ಳುತ್ತಿರುವ ಋತು ಬೇಸಿಗೆ ನಿಮ್ಮ ಆಯ್ಕೆ ಸರಿಯಾಗಿದೆಯೇ ಎಂಬುದನ್ನು ಕೇಳಲಾಗುತ್ತದೆ.  ಹೌದು ಮೇಲೆ ಕ್ಲಿಕ್ ಮಾಡಬೇಕು. ಆಗ ಆಧಾರ್ ಕಾರ್ಡ್ ಸ್ಕ್ಯಾನ್ ಮಾಡಬೇಕು.

ಆಧಾರ್ ಕಾರ್ಡ್ ನಲ್ಲಿರುವಂತೆ ಹೆಸರು, ಹುಟ್ಟಿದ ದಿನಾಂಕ, ವಿಳಾಸ, ಮೊಬೈಲ್ ನಂಬರ್, ಲಿಂಗ, ನಮೂದಿಸಿ ಸಕ್ರೀಯಗೊಳಿಸಿದ ಬಳಿಕ ರೈತರು ನಮೂದಿಸಿದ ಮೊಬೈಲ್ ಸಂಖ್ಯೆಗೆ ಓಟಿಪಿ ಬರುತ್ತದೆ. ಅದನ್ನು ನಮೂದಿಸಿದ ನಂತರ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ ನಮೂದಿಸಬೇಕು.ನಂತರ ಬೆಳೆ ಬೆಳೆದಿರುವ ಸರ್ವೆ ನಂಬರ್, ಹಿಸ್ಸಾ, ಹೊಲದ ಮಾಲೀಕರ ಹೆಸರು ಆಯ್ಕೆ ಮಾಡಿಕೊಳ್ಳಬೇಕು. ನಂತರ ನಂತರ ಅಲ್ಲಿ ನಮೂದಿಸಿದ ಸರ್ವೆ ನಂಬರ್ ನಲ್ಲಿ ನಿಂತು ಬೆಳೆ ಕ್ಷೇತ್ರವನ್ನು ನಮೂದಿಸಿ ಬೆಳೆಯ ಫೋಟೋ ತೆಗೆದು ಅಪ್ಲೋಡ್ ಮಾಡಬೇಕು.

ಬೆಳೆ ಸಮೀಕ್ಷೆ ಏಕೆ ಮಾಡಿಸಬೇಕು?

ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿ ಗುರುತಿಸಲು ಆರ್.ಟಿ.ಸಿ ಯಲ್ಲಿ ಬೆಳೆ ವಿವರ ದಾಖಲಾತಿಗೆ ಎನ್.ಡಿ.ಆರ್ ಎಫ್ ಮತ್ತು ಎಸ್.ಟಿ.ಆರ್.ಎಫ್ ನಡಿ ಸಹಾಯಧನ ನೀಡಲು ಪ್ರಕೃತಿ ವಿಕೋಪ ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ವರದಿ ಸಿದ್ದಪಡಿಸುವಲ್ಲಿ ಈ ಸಮೀಕ್ಷೆ ಅನುಕೂಲವಾಗುತ್ತದೆ.  ಹಾನಿಗೊಳಗಾದ ಬೆಳೆ ವಿಸ್ತೀರ್ಣದ ಮಾಹಿತಿ ಸಿದ್ದಪಡಿಸುವಲ್ಲಿ ಮತ್ತು ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸುವ ಸಂದರ್ಭದಲ್ಲಿ ಬೆಳೆ ಸಮೀಕ್ಷೆ ಮಾಹಿತಿಯನ್ನೇ ಆಧರಿಸಿಟ್ಟುಕೊಂಡು ಸಿದ್ದಪಡಿಸಲಾಗುತ್ತದೆ. ರೈತರು ತಪ್ಪದೇ ತಮ್ಮ ಜಮೀನಿನಲ್ಲಿರುವ ಕೃಷಿ., ತೋಟಗಾರಿಕೆ, ಅರಣ್ಯ, ರೇಷ್ಮೆ, ಇತರೆ ಬೆಳೆಗಳ ವಿವರಗಳನ್ನು ಬೇಸಿಗೆ ರೈತರ ಬೆಳೆ ಸಮೀಕ್ಷೆ ಆ್ಯಪ್ 2021-22 ನಲ್ಲಿ ನಮೂದಿಸಬೇಕಾಗುತ್ತದೆ.

ಇದನ್ನೂ ಓದಿ: ಪಿಎಂ ಕಿಸಾನ್ 11ನೇ ಕಂತಿನ ಹಣ ಯಾವ ರೈತರಿಗೆ ಬರಲಿದೆ? ಯಾವ ರೈತರಿಗೆ ಬರಲ್ಲ.. ಇಲ್ಲಿದೆ ಮಾಹಿತಿ

ರೈತರಿಗೆ ಬೆಳೆ ಸಮೀಕ್ಷೆ ಮಾಡಲು ಸಮಸ್ಯೆಯಾದರೆ ಅಥವಾ ಆ್ಯಂಡ್ರೈಡ್ ಮೊಬೈಲ್ ಫೋನ್ ಇರದಿದ್ದರೆ ನಿಗದಿತ ಸಮಯದೊಳಗೆ ತಾವು ಬೆಳೆದ  ಬೆಳೆಯ ಮಾಹಿತಿಯನ್ನು ಖಾಸಗಿ ನಿವಾಸಿಗಳ ಸಹಾಯದಿಂದಲೂ ಬೆಳೆ ಸಮೀಕ್ಷೆ ಮಾಡಿಸಬಹುದು. ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರದ ಕೃಷಿ, ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮಲೆಕ್ಕಾಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ಸಹಾಯಕ ತೋಟಗಾರಿಕೆ ಅಧಿಕಾರಿಗಳು, ರೇಷ್ಮೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದು.

ರೈತರು ತಾವು ಬೆಳೆದ ಬೆಳೆಗಳ ವಿವರಗಳನ್ನು ಸರಿಯಾಗಿ ಅಪ್ಲೋಡ್ ಮಾಡದಿದ್ದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳಿಂದ ವಂಚಿತರಾಗುವ ಸಾಧ್ಯತೆಯಿರುತ್ತದೆ. ಹಾಗಾಗಿ ರೈತರು ತಾವು ಬೆಳೆದ ಬೆಳೆಗಳನ್ನು ಸಮೀಕ್ಷೆ ಆ್ಯಪ್ ನಲ್ಲಿಅಪ್ಲೋಡ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 8448447715 ಗೆ ಸಂಪರ್ಕಿಸಬಹುದು.

Leave a Comment